Property Tax: ಕಂದಾಯ ಬಾಕಿ ಪಾವತಿಸದ ಆಸ್ತಿ ಮಾಲೀಕರಿಗೆ ಪಾಲಿಕೆ ಬಿಗ್ ಶಾಕ್
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕಳೆದ ವರ್ಷ 2025ರಲ್ಲಿ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ದಿಷ್ಟ ಗುರಿ ತಲುಪಲಾಗಿಲ್ಲ. ಈ ಹಿನ್ನೆಲೆಯಲ್ಲಿ ಹೊಸ ವರ್ಷ 2026ರಲ್ಲಿ ಆಸ್ತಿಗಳ ಕಂದಾಯ ಬಾಕಿ ವಸೂಲಿ ಹೆಚ್ಚಿಸಿ ಗುರಿ ತಲುಪುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ಮಹತ್ವದ ಪ್ಲಾನ್ ಮಾಡಿಕೊಂಡಿದ್ದು, ತೆರಿಗೆ ಪಾವತಿಸದ ಮತ್ತು ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.
2026ರ ಮಾರ್ಚ್ ಹೊತ್ತಿಗೆ ಜಿಬಿಎ ನಿಗದಿತ 6500 ಕೋಟಿ ರೂಪಾಯಿ ತೆರಿಗೆ ಸಂಗ್ರಹದ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸಲು ಸ್ವಯಂ ಟಾಸ್ಕ್ ರೂಪಿಸಿಕೊಂಡು ಅಗತ್ಯ ಕ್ರಿಯಾ ಯೋಜನೆಯೊಂದಿಗೆ (ಆಕ್ಷನ್ ಪ್ಲಾನ್) ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಲು ಇಂಜಿನಿಯರ್ ಗಳಿಗೆ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಬುಧವಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ತೆರಿಗೆ ಪಾವತಿಸದ ಆಸ್ತಿಗಳ ಡೇಟಾ ಸಂಗ್ರಹ
ಬೆಂಗಳೂರು ಕೇಂದ್ರ ನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡದ ಸ್ವತ್ತುಗಳ ಪಟ್ಟಿಯನ್ನು ಮಾಡಿ ಅಂತಹ ಸ್ವತ್ತುಗಳಿಗೆ ಬಾಕಿ ಕಂದಾಯ ಪಾವತಿ ಮಾಡಲು ನೋಟಿಸ್ ನೀಡಿಬೇಕು. ಒಂದು ವೇಳೆ ನೋಟೀಸ್ ನೀಡಿದ ನಂತರವು ಅವರು ಬಾಕಿ ಆಸ್ತಿ ತೆರಿಗೆ ಪಾವತಿ ಮಾಡದಿದ್ದಲ್ಲಿ ಅಂತಹ ಸ್ವತ್ತುಗಳಿಗೆ ಬೀಗ ಜಡಿಯವುಂತೆ ಕಂದಾಯ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಈ ಮೂಲಕ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಕಠಿಣ ಕ್ರಮ ಜಾರಿಗೆ ಮಾಡಲಾಗುತ್ತಿದೆ ಎಂಬ ಸಂದೇಶ ರವಾನಿಸಲಾಗಿದೆ.
ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ
ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ಪ್ರತಿ ವಾರ ಹೊಸ ಆಲೋಚನೆಯೊಂದಿಗೆ ಸ್ವಯಂ ಟಾಸ್ಕ್ ರೂಪಿಸಬೇಕು. ಅಗತ್ಯ ಕ್ರಿಯಾಯೋಜನೆಯೊಂದಿಗೆ (ಆಕ್ಷನ್ ಪ್ಲಾನ್) ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಇ-ಖಾತಾ: ನಗರ ಪಾಲಿಕೆವಾರು ಸಹಾಯವಾಣಿ
ಆಯುಕ್ತರ ನೇತೃತ್ವದಲ್ಲಿ ಡಿಸೆಂಬರ್-2025 ಮಾಹೆಯಲ್ಲಿ ಬೆಂಗಳೂರು ಕೇಂದ್ರ ನಗರಪಾಲಿಕೆಯ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಕಂದಾಯ ವಿಭಾಗದ ಉಪ ಆಯುಕ್ತರಾದ ರಾಜು ಅವರಿಗೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು. ನಗರದ ಸ್ವಚ್ಛತೆ ಕಾರ್ಯ ನಿರ್ವಹಿಸುತ್ತಿರುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವೆಂದು ಶ್ಲಾಘಿಸಿದರು. ಅವರ ನಿವೃತ್ತಿ ಜೀವನ ಸಂತೋಷದಿಂದ ಕೂಡಿರಲೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೌರ ಕಾರ್ಮಿಕರಿಗೆ ಆಯುಕ್ತರು ತಮ್ಮ ಸೀಟ್ ನಲ್ಲಿಯೇ ಕೂರಿಸಿ ಸನ್ಮಾನಿಸಿದ್ದು ಗಮನ ಸೆಳೆಯಿತು.
ಇನ್ನೂ ಇ-ಖಾತಾ ಅರ್ಜಿ ಸಲ್ಲಿಕೆಯಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ಅನೆಕ್ಸ್ 2 ಕಟ್ಟಡದಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದೆ. ಇದೇ ಜನವರಿಯಲ್ಲಿ ಐದು ಪಾಲಿಕೆಯಲ್ಲಿ ತಲಾ ಒಂದೊಂದು ಸಹಾಯ ಕೇಂದ್ರ ಆರಂಭಿಸಲಾಗುವುದು. ಇ-ಖಾತೆಗೆ ಸಂಬಂಧಿಸಿದ ಆಸ್ತಿ ಮಾಲೀಕರ ಏನೇ ಸಮಸ್ಯೆಗಳು ಇದ್ದರು ಅವನ್ನು ಪರಿಹರಿಸಿಕೊಳ್ಳುವಂತೆ ಅವರು ಕೋರಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications