GBA: ಪಾದಚಾರಿ ಮಾರ್ಗಗಳ ಒತ್ತುವರಿ, ರಸ್ತೆ ಗುಂಡಿ ಮುಕ್ತ ರಸ್ತೆಯನ್ನಾಗಿಸಲು ವಾರ್ಡ್ ಎಂಜಿನಿಯರ್‌ಗೆ ಜವಾಬ್ದಾರಿ: ಜಿಬಿಎ

GBA: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತವಾಗಿಡುವುದು, ರಸ್ತೆ ಗುಂಡಿಗಳನ್ನು ತೆರವುಗೊಳಿಸುವುದು ಸೇರಿದಂತೆ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ವಾರ್ಡ್‌ಗಳ ಎಂಜಿನಿಯರ್‌ಗೆ ಕಟ್ಟುನಿಟ್ಟಿನ ಜವಾಬ್ದಾರಿ ವಹಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್.ಜಿ ಅವರು ತಿಳಿಸಿದ್ದಾರೆ.

ವಾರ್ಡ್ ಮಟ್ಟದಲ್ಲಿ ಸಹಾಯಕ ಎಂಜಿನಿಯರರು ಕೊರತೆಯನ್ನು ನೀಗಿಸಲು ಹೊರಗುತ್ತಿಗೆ ಆಧಾರದ ಮೇಲೆ ಎಂಜಿನಿಯರರ ಸೇವೆಯನ್ನು ಒದಗಿಸಲಾಗಿದ್ದು, ಪ್ರತಿಯೊಂದು ವಾರ್ಡ್ ನಿಯಮಿತ ಸಹಾಯಕ/ಕಿರಿಯ ಎಂಜಿನಿಯರರು ಅಥವಾ ಹೊರಗುತ್ತಿಗೆ ಎಂಜಿನಿಯರರನ್ನು ನಿಯೋಜಿಸಿ, ವಾರ್ಡ್ ಮಟ್ಟದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಉಪ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಹಾಗೂ ವಿಭಾಗದ ಕಾರ್ಯಪಾಲಕ ಎಂಜಿನಿಯರರು ಈ ಕಾರ್ಯಗಳ ದೈನಂದಿನ ಮೇಲ್ವಿಚಾರಣೆ ನಡೆಸಿ, ಯಾವುದೇ ಲೋಪದೋಷಗಳು ಕಂಡುಬರದಂತೆ ಖಚಿತಪಡಿಸಿಕೊಳ್ಳಬೇಕು ಎಂದು ಆಯುಕ್ತರು ನಿರ್ದೇಶನ ನೀಡಿದ್ದಾರೆ.

GBA

GBA: ಪ್ರಮುಖ ನಿರ್ದೇಶನಗಳು

* ದಿನಾಂಕ:01-09-2026 ರಿಂದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಯಾವುದೇ ರೀತಿಯ ಒತ್ತುವರಿ ಕಂಡುಬರದಂತೆ ಪ್ರತಿದಿನ ತಪಾಸಣೆ ನಡೆಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

* ಒತ್ತುವರಿ ಮರುಕಳಿಸಿದಲ್ಲಿ ಅಥವಾ ಕರ್ತವ್ಯದಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಭಿಯಂತರರ ವಿರುದ್ಧ ಶಿಸ್ತು ಕ್ರಮ ಹಾಗೂ ಹೊರಗುತ್ತಿಗೆ ಎಂಜಿನಿಯರರನ್ನು ಸೇವೆಯಿಂದ ವಜಾಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

* ಅರ್ಟಿರಿಯಲ್,ಸಬ್-ಅರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಯಾವುದೇ ರಸ್ತೆ ಗುಂಡಿ ಇರದಂತೆ ಕ್ರಮವಹಿಸುವುದು.

* ರಸ್ತೆಬದಿ ನಿಲ್ಲಿಸಲಾಗಿರುವ ವಾಹನಗಳನ್ನು ಗುರುತಿಸಿ ಆಗಿಂದ್ದಾಗೆ ಸಂಬಂಧಪಟ್ಟ ಪೋಲಿಸ್ ಠಾಣೆಗೆ ಹಾಗೂ ಮೇಲಾಧಿಕಾರಿಗಳಿಗೆ ವರದಿ ನೀಡುವುದು.

* ರಸ್ತೆ ಮೇಲೆ ಹಾಗೂ ಪಾದಚಾರಿ ಮಾರ್ಗದಲ್ಲಿ ಇರುವ ಅನುಪಯುಕ್ತ ವಸ್ತುಗಳು ಹಾಗೂ ತ್ಯಾಜ್ಯವನ್ನು ಪ್ರತಿ ನಿತ್ಯ ಕಟ್ಟುನಿಟ್ಟಾಗಿ ತೆರವುಗೊಳಿಸಲು ಕ್ರಮವಹಿಸುವುದು.

* ಮಳೆಯ ಸಂದರ್ಭಗಳಲ್ಲಿ ಸಂಬಂಧಪಟ್ಟ ಎಂಜಿನಿಯರರು ವಾರ್ಡ್ ವ್ಯಾಪ್ತಿಯಲ್ಲಿದ್ದು, ರಸ್ತೆಯ ಬದಿ ನೀರು ನಿಲ್ಲದಂತೆ ಕ್ರಮವಹಿಸುವುದು ಹಾಗೂ ಈ ಬಗ್ಗೆ ಯಾವುದೇ ಕಾಮಗಾರಿಗಳು ಅಗತ್ಯ ವಿದ್ದಲ್ಲಿ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸುವುದು.

* ಅನಧಿಕೃತ ಓ.ಎಫ್.ಸಿ ಕೇಬಲ್ಗಳನ್ನು ತೆರೆವುಗೊಳಿಸಿ, ಇದರಿಂದ ಯಾವುದೇ ಅಪಘಾತವಾಗದಂತೆ ಎಚ್ಚರ ವಹಿಸುವುದು.

* ಅನಧಿಕೃತ ಬ್ಯಾನರ್ ಹಾಗೂ ಬಂಟಿಗ್ಸ್ ಗಳನ್ನು ತಕ್ಷಣವೇ ತೆರವುಗೊಳಿಸುವುದು.

* ಪಾದಚಾರಿ ಮಾರ್ಗಗಳಲ್ಲಿ ಹಾಳದ ಪಕ್ಷದಲ್ಲಿ ಗುರುತಿಸಿ ತಕ್ಷಣವೇ ದುರಸ್ಥಿಗೊಳಿಸುವುದು.

* ಅನಧಿಕೃತ ರಸ್ತೆ ಕತ್ತರಿಸಿದ ಸಂಧರ್ಭಗಳಲ್ಲಿ ಸಂಬಂಧಪಟ್ಟವರ ಮೇಲೆ ದೂರುದಾಖಲಿಸಿ ರಸ್ತೆ ದುರಸ್ಥಿಗೆ ಕ್ರಮವಹಿಸುವುದು.

GBA: ಕರ್ತವ್ಯದಲ್ಲಿ ಲೋಪ ಕಂಡುಬಂದರೆ ಕಠಿಣ ಶಿಸ್ತು ಕ್ರಮ

ವಾರ್ಡ್ ವಾರು ಪ್ರಮುಖ ಜವಾಬ್ದಾರಿಗಳನ್ನು ಸಂಬಂಧಪಟ್ಟ ವಾರ್ಡ್ ಸಹಾಯಕ/ಕಿರಿಯ ಎಂಜಿನಿಯರರು ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರರು ಸಮರ್ಪಕವಾಗಿ ನಿರ್ವಹಿಸುತ್ತಿರುವುದನ್ನು ವಿಭಾಗದ ಕಾರ್ಯಪಾಲಕ ಎಂಜಿನಿಯರರು ಖಚಿತಪಡಿಸಿಕೊಳ್ಳಬೇಕು.

ಈ ಕುರಿತು ದೈನಂದಿನ ತಪಾಸಣೆ ಹಾಗೂ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಲಾಗಿದ್ದು, ಸೆಪ್ಟೆಂಬರ್ 01, 2026 ರಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ರಸ್ತೆ ಗುಂಡಿ ಮುಕ್ತಗೊಳಿಸುವುದು ಮತ್ತು ಪಾದಚಾರಿ ಮಾರ್ಗಗಳನ್ನು ಸಂಪೂರ್ಣವಾಗಿ ಒತ್ತುವರಿ ಮುಕ್ತವಾಗಿಡುವುದು ಪ್ರಮುಖ ಆದ್ಯತೆಯಾಗಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ಜಗದೀಶ್.ಜಿ ಅವರು ನಿರ್ದೇಶನ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+