ನಾಳೆ ಗೀತಾ ಮಹದೇವ ಪ್ರಸಾದ್, ರೇವಣ್ಣ, ತಿಮ್ಮಾಪುರ ಪ್ರಮಾಣ ವಚನ
ರಾಜ್ಯ ಸಚಿವ ಸಂಪುಟಕ್ಕೆ ಗೀತಾ ಮಹದೇವ ಪ್ರಸಾದ್, ಎಚ್ ಎಂ ರೇವಣ್ಣ, ಆರ್ ಬಿ ತಿಮ್ಮಾಪುರ ಸೇರ್ಪಡೆ. ಸೆಪ್ಟಂಬರ್ 1ರಂದು ಪ್ರಮಾಣ ವಚನ ಸ್ವೀಕರಿಸಲಿರುವ ನಾಯಕರು.
Recommended Video

ಬೆಂಗಳೂರು, ಆಗಸ್ಟ್ 31: ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್, ಎಚ್.ಎಂ. ರೇವಣ್ಣ ಹಾಗೂ ಆರ್.ಬಿ. ತಿಮ್ಮಾಪುರ ಅವರು ಸೆ.1ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯಪಾಲರ ಭವನದಲ್ಲಿರುವ ಗಾಜಿನ ಮನೆಯಲ್ಲಿ ಸೆಪ್ಟಂಬರ್ 1ರಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಈ ಮೂವರೂ ರಾಜ್ಯ ಸಂಪುಟವನ್ನು ಸೇರಲಿದ್ದಾರೆ.

ಮಾಜಿ ಸಚಿವ ಮಹದೇವ ಪ್ರಸಾದ್ ಅವರಿಂದ ತೆರವಾಗಿದ್ದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಅವರು ಜಯ ಸಾಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರಿಗೆ ಲಿಂಗಾಯತ ಕೋಟಾದಲ್ಲಿ ಸಚಿವ ಸ್ಥಾನ ನೀಡಲಾಗಿದೆ.
ಆದರೆ, ಲಿಂಗಾಯತ ಕೋಟಾದಲ್ಲೇ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಭಾರೀ ಪ್ರಯತ್ನ ನಡೆಸಿದ್ದ ವಿಧಾನ ಪರಿಷತ್ ಸದಸ್ಯ ಷಡಕ್ಷರಿ ಅವರಿಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿ ಹೋಗಿದೆ ಎಂದು ಹೇಳಲಾಗಿದೆ.
ಇನ್ನು, ಈ ಮೊದಲೇ ನಿರೀಕ್ಷಿಸಿದಂತೆ ವಿಧಾನ ಪರಿಷತ್ ಸದಸ್ಯರಾದ ಎಚ್.ಎಂ. ರೇವಣ್ಣ ಹಾಗೂ ಆರ್ ಬಿ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ಕಲ್ಪಿಸಲಾಗಿದೆ.












Click it and Unblock the Notifications