E-Khata: ಆಸ್ತಿ ಪತ್ರದಲ್ಲಿ ವಂಚನೆಗೆ ಒಳಗಾಗದೇ ಇ-ಖಾತಾ ಪಡೆಯಿರಿ: ಡಿಕೆ ಶಿವಕುಮಾರ್

ಬೆಂಗಳೂರು, ಜೂನ್ 30: ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಆಸ್ತಿ ದಾಖಲಾತಿ ವಿಚಾರದಲ್ಲಿ ವಂಚನೆಗೆ ಒಳಗಾಗಬೇಡಿ. ನೀವು ಇ-ಖಾತೆ ಪಡೆಯಿರಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಆಸ್ತಿ ಮಾಲೀಕರನ್ನು ಉದ್ದೇಶಿಸಿ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು.

Get E-Khata Without Bribes DK Shivakumar Assures Property Owners

ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು ಸಚಿವ ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಇಡುತ್ತಿದೆ. ಇಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಿದ್ದೇವೆ. ನಾವು ನಿಮ್ಮ ಹಿತಕ್ಕೆ, ನಿಮ್ಮ ಬದುಕು ಹಾಗೂ ನಿಮ್ಮ ಆಸ್ತಿ ರಕ್ಷಣೆಗೆ ನಾವು ಬಂದಿದ್ದೇವೆ. ಉಳುವವನಿಗೆ ಭೂಮಿ ಕೊಟ್ಟಿದ್ದು, ಎ ಖಾತಾ ಇಲ್ಲದವರಿಗೆ ಬಿ ಖಾತಾ ಕೊಟ್ಟಿದ್ದೇವೆ, ಬಗರ್ ಹುಕುಂ ಸಾಗುವಳಿ ರೈತರಿಗೆ ಭೂಮಿ ನೀಡಿದ್ದೇವೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಅಕ್ರಮ ಸಕ್ರಮ ಯೋಜನೆ ಮಾಡಿದ್ದೆವು. ಭೂಮಿ ಯೋಜನೆ ಮೂಲಕ ರೈತರಿಗೆ ಕೇವಲ 5 ರೂ.ಗೆ ಖಾತಾ ದಾಖಲೆ ನೀಡಿದ್ದೇವೆ ಎಂದು ವಿವರಿಸಿದರು.

ನಿಮ್ಮ ಆಸ್ತಿಗಳ ದಾಖಲೆ ಸರಿಪಡಿಸಲು ಪಾಲಿಕೆ ವ್ಯಾಪ್ತಿಯಲ್ಲಿ ನಿಮ್ಮ ಆಸ್ತಿ ದಾಖಲೆ ಸ್ಕ್ಯಾನ್ ಮಾಡಿಸಲಾಗಿದೆ. ನಿಮ್ಮ ಕ್ಷೇತ್ರದಲ್ಲಿ ಇಂದು ಯಾರೂ ಲಂಚ ನೀಡದೇ, ನಿಮ್ಮ ಆಸ್ತಿ ಖಾತಾ ದಾಖಲೆ ನೀಡಬೇಕು ಎಂಬುದು ನನ್ನ ಆಲೋಚನೆ. ನನ್ನ ಈ ಕನಸಿನ ಯೋಜನೆಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಬಲವಾಗಿ ನಿಂತಿದ್ದಾರೆ ಎಂದು ತಿಳಿಸಿದರು.

1,11,111 ಜನರಿಗೆ ಉಚಿತ ದಾಖಲೆ ಪತ್ರ

ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ತಾಂಡಾ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಮಾಡಿ 1,11,111 ಜನರಿಗೆ ಉಚಿತವಾಗಿ ದಾಖಲೆ ಪತ್ರ ನೀಡಿದ್ದೇವೆ. ಆ ಮೂಲಕ ನಮ್ಮ ಸರ್ಕಾರ ಆರನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಬಿಬಿಎಂಫಿ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಆಸ್ತಿಗಳಿವೆ. ಈ ಎಲ್ಲಾ ಆಸ್ತಿಗಳ ಡಿಜಿಟಲಿಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ನೀಡುವಂತೆ ಕ್ರಾಂತಿಕಾರಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ. ನೀವು ನಿಮ್ಮ ಆಸ್ತಿ ದಾಖಲೆಗಳನ್ನು ಅಪ್ ಲೋಡ್ ಮಾಡಿ ಈ ಖಾತಾ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ಇದು ಸಾಧ್ಯವಾಗದೆ ಇದ್ದರೆ ನಿಮಗೆ ನೀಡಲಾಗಿರುವ ದೂರವಾಣಿಗೆ ಕರೆ ಮಾಡಿ. ಅವರೇ ಬಂದು ನಿಮ್ಮ ದಾಖಲೆ ಅಪ್ ಲೋಡ್ ಮಾಡಿ ಇ ಖಾತಾ ಮಾಡುತ್ತಾರೆ ಎಂದು ತಿಳಿಸಿದರು.

Get E-Khata Without Bribes DK Shivakumar Assures Property Owners

ಪಾಲಿಕೆ ವ್ಯಾಪ್ತಿಯ 25 ಲಕ್ಷ ಆಸ್ತಿಗಳ ಕರಡು ಇ-ಖಾತೆಗಳಿವೆ. ಆ ಪೈಕಿ 5 ಲಕ್ಷ ಆಸ್ತಿ ದಾಖಲೆಗಳನ್ನು ಈ ರೀತಿ ವಿತರಣೆ ಮಾಡಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದಲ್ಲಿ 50 ಸಾವಿರ ಮನೆಗಳಿಗೆ ಈ ದಾಖಲೆ ವಿತರಣೆ ಮಾಡಲಾಗಿದೆ. ನಿಮ್ಮ ಗುರುತಿನ ಚೀಟಿಗೆ ಹೇಗೆ ಪ್ರತ್ಯೇಕ ಸಂಖ್ಯೆ ನೀಡಲಾಗಿದೆಯೋ ಅದೇ ರೀತಿ ನಿಮ್ಮ ಆಸ್ತಿಗಳಿಗೂ ಪ್ರತ್ಯೇಕ ಸಂಖ್ಯೆ ನೀಡಲು ನಿಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

1 ಲಕ್ಷ ಕೋಟಿ ಮೊತ್ತದ ಯೋಜನೆ

ಈ ಸರ್ಕಾರ ಬೆಂಗಳೂರಿನಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಹಾಗೂ ಸಮಗ್ರ ಅಭಿವೃದ್ಧಿಗೆ ರೂ. 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ. ಈ ಪೈಕಿ ಪಿ.ಆರ್. ಆರ್ ರಸ್ತೆ ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗಲಿದೆ.

ಮುಂದಿನ ದಿನಗಳಲ್ಇ ನೀವು ಮನೆ ಕಟ್ಟುವಾಗ ಕಟ್ಟಡ ನಕ್ಷೆ ಅನುಮತಿಗಾಗಿ ಕಚೇರಿಗಳಿಗೆ ಅಲೆಯುವಂತಿಲ್ಲ. ನಂಬಿಕೆ ನಕ್ಷೆ ಯೋಜನೆ ಮೂಲಕ 50x80 ವಿಸ್ತೀರ್ಣವರೆಗಿನ ನಿವೇಶನವರೆಗೂ ಕಟ್ಟಡ ನಕ್ಷೆಯನ್ನು ನೋಂದಾಯಿತ ಇಂಜಿನಿಯರ್ ಗಳ ಮೂಲಕ ಒಂದೇ ದಿನದಲ್ಲಿ ಅನುಮತಿ ಪಡೆಯಬಹುದು. ಈ ಯೋಜನೆ ಮೂಲಕ ನಾವು ಈವರೆಗೂ 9 ಸಾವಿರ ಕಟ್ಟಡ ನಕ್ಷೆಗಳಿಗೆ ಮಂಜೂರಾತಿ ನೀಡಿದ್ದೇವೆ. ಇನ್ನು ನಗರದಲ್ಲಿ ಆಸ್ತಿ ತೆರಿಗೆ ಕಟ್ಟದವರಿಗೆ ಒನ್ ಟೈಮ್ ಸೆಟ್ಲಮೆಂಟ್ ಯೋಜನೆ ಮೂಲಕ ಒಂದು ಅವಕಾಶ ನೀಡಲಾಗಿತ್ತು ಎಂದು ಮಾಹಿತಿ ನೀಡಿದರು.

ಕ್ಷೇತ್ರದ ಮೂಲಸೌಕರ್ಯಕ್ಕಾಗಿ 2000 ಕೋಟಿ

ಸದರಿ ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯವಾಗಿರುವ ಮೇಲ್ಸೇತುವೆ, ರಸ್ತೆ ಅಭಿವೃದ್ಧಿಗೆ ನೂರಾರು ಕೋಟಿ ಮೊತ್ತದ ಯೋಜನೆ ಹಮ್ಮಿಕೊಳ್ಳಲಾಗಿದೆ. ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರಿನ ಕೊಳಚೆ ನೀರು ಕಾಲುವೆಗಳ ತಡೆಗೋಡೆ ಎತ್ತರಿಸಲು 2 ಸಾವಿರ ಕೋಟಿ ಅನುದಾನ ತಂದಿದ್ದಾರೆ ಎಂದು ಕಂದಾಯ ಸಚಿವರ ಕುರಿತು ಹರ್ಷ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+