ಎರಡೂವರೆ ನಿಮಿಷಕ್ಕೊಂದು ನಮ್ಮ ಮೆಟ್ರೋ ರೈಲು ಸಂಚಾರ
ಬೆಂಗಳೂರು, ಏಪ್ರಿಲ್ 29 : ನಮ್ಮ ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮತ್ತು ಕೆಂಪು ಮಾರ್ಗದಲ್ಲಿ ರೈಲಿಗಾಗಿ ಜನರು ಹೆಚ್ಚು ಹೊತ್ತು ಕಾಯಬೇಕಾಗಿಲ್ಲ. ಎರಡೂವರೆ ನಿಮಿಷಕ್ಕೆ ಒಂದು ರೈಲು ಸಂಚಾರ ನಡೆಸಲಿದೆ.
ಬಿಎಂಆರ್‌ಸಿಎಲ್ ಈ ಮಾರ್ಗದಲ್ಲಿ ಸುಧಾರಿತ ಸಂವಹನ ಆಧಾರಿತ ರೈಲು ನಿಯಂತ್ರಣ (ಸಿಬಿಟಿಸಿ) ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿದೆ. ಇದರಿಂದಾಗಿ ಪ್ರಯಾಣಿಕರು ನಿಮಿಷಗಳಲ್ಲಿಯೇ ರೈಲನ್ನು ಏರಬಹುದಾಗಿದೆ.
2ನೇ ಹಂತದ ಮೆಟ್ರೋ ಯೋಜನೆಯ ಎರಡು ಮಾರ್ಗದಲ್ಲಿ ಸಿಬಿಟಿಸಿ ಆಧಾರಿತ ವ್ಯವಸ್ಥೆ ಜಾರಿಗೆ ಬರುತ್ತಿದೆ. ಈ ವ್ಯವಸ್ಥೆ ಆಳವಡಿಕೆ ಮಾಡಿಕೊಳ್ಳು ಬಂದಿದ್ದ ಬಿಡ್‌ಗಳನ್ನು ಕಳೆದ ಶನಿವಾರ ಬಿಎಂಆರ್‌ಸಿಎಲ್ ತೆರೆದಿದೆ.

ಆರ್. ವಿ. ರಸ್ತೆ-ಬೊಮ್ಮಸಂದ್ರ 19 ಕಿ. ಮೀ. ಹಳದಿ ಮಾರ್ಗ, ಸೆಂಟ್ರಲ್ ಸಿಲ್ಕ್ ಬೋರ್ಡ್-ಎಲೆಕ್ಟ್ರಾನಿಕ್ ಸಿಟಿ ಮಾರ್ಗದಲ್ಲಿ ಸಿಬಿಟಿಸಿ ವ್ಯವಸ್ಥೆ ಅಳವಡಿಕೆ ಮಾಡಲಾಗುತ್ತದೆ. ಇದಕ್ಕಾಗಿ ಟೆಂಡರ್ ಸಹ ಸಲ್ಲಿಕೆಯಾಗಿದೆ.
21 ಕಿ. ಮೀ. ಗೊಟ್ಟಿಗೆರೆ-ನಾಗವಾರ ಜಂಕ್ಷನ್ ಮಾರ್ಗದಲ್ಲಿಯೂ ಸಿಬಿಟಿಸಿ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ. ಆದರೆ, ಇನ್ನೂ ಹಲವು ಕಾಮಗಾರಿ ಮತ್ತು ಸುರಂಗ ಮಾರ್ಗ ನಿರ್ಮಾಣ ಬಾಕಿ ಇರುವುದರಿಂದ ಟೆಂಡರ್ ಕರೆದಿಲ್ಲ.
ನಮ್ಮ ಮೆಟ್ರೋ ಯೋಜನೆಯ 2ನೇ ಹಂತದ 6 ಮಾರ್ಗದಲ್ಲಿ ಸಿಬಿಟಿಸಿ ವ್ಯವಸ್ಥೆ ಜಾರಿಗೊಳಿಸಿ ವಿಭಿನ್ನ ಸಿಗ್ನಲಿಂಗ್ ಪ್ರಕ್ರಿಯೆ ಅಳವಡಿಕೆ ಮಾಡಲು ಬಿಎಂಆರ್‌ಸಿಎಲ್ ತೀರ್ಮಾನಿಸಿದೆ. ಈ ಮೂಲಕ ಮೆಟ್ರೋ ಮಾರ್ಗವನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಭವೃದ್ಧಿ ಮಾಡಲಾಗುತ್ತದೆ.
ಪ್ರಸ್ತುತ ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿರುವ 42 ಕಿ. ಮೀ. ಮಾರ್ಗದಲ್ಲಿ ಡಿಟಿಜಿ ತಂತ್ರಜ್ಞಾನ ಬಳಸಿ ರೈಲುಗಳನ್ನು ನಿಯಂತ್ರಿಸಲಾಗುತ್ತಿದೆ. ಪೀಕ್ ಹವರ್‌ನಲ್ಲಿ ನಾಲ್ಕೂವರೆ ನಿಮಿಷ, ನಾನ್ ಪೀಕ್ ಅವರ್‌ನಲ್ಲಿ 10 ನಿಮಿಷಕ್ಕೊಂದು ರೈಲು ಸಂಚಾರ ನಡೆಸುತ್ತಿವೆ.
ಈಗ ಕಾಮಗಾರಿ ನಡೆಯುತ್ತಿರುವ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್, ಮೈಸೂರು ರಸ್ತೆ-ಕೆಂಗೇರಿ, ಯಲಚೇನಹಳ್ಳಿ-ಅಂಜನಾಪುರ ಟೌನ್ ಶಿಪ್, ನಾಗಸಂದ್ರ-ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಮಾರ್ಗದಲ್ಲಿ ಇದೇ ತಂತ್ರಜ್ಞಾನ ಬಳಕೆಯಾಗುತ್ತಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು -
IPL ಪ್ರೇಕ್ಷಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications