ಬೆಂಗಳೂರು; ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಬೆಂಗಳೂರು, ಆಗಸ್ಟ್ 18 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿವೆ. ಬಿಬಿಎಂಪಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೊಸದಾಗಿ ಪಟ್ಟಿಗೆ ಈಗ ಹೆಸರು ಸೇರಿಸಲು ಅವಕಾಶವಿದೆ.

Recommended Video

      Chitradurgaದ ವ್ಯಕ್ತಿ ಮೇಲೆ Corona Vaccine ಪ್ರಯೋಗ | Oneindia Kannada

      ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ ಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವಾರ್ಡ್‌ಗಳು ಮರುವಿಂಗಡನೆ ಆಗಿರುವ ಕಾರಣ ಹೊಸ ಮತದಾರರ ಪಟ್ಟಿಯನ್ನು ತಯಾರು ಮಾಡಲಾಗುತ್ತದೆ.

      Get Ready To Enroll Name For Voters List In Bengaluru

      198 ವಾರ್ಡ್‌ಗಳ ಮತದಾರರ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಆಗಸ್ಟ್ 20ರಿಂದ ಆರಂಭವಾಗಲಿದೆ. ಆ.20 ರಿಂದ 25ರ ತನಕ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗುತ್ತದೆ. ಆ. 26ರಿಂದ ಸೆಪ್ಟೆಂಬರ್ 14ರ ತನಕ ಮನೆ-ಮನೆಗೆ ಭೇಟಿ ನೀಡಿ ಅಧಿಕಾರಿಗಳು ಮಾಹಿತಿ ಸಂಗ್ರಹ ಮಾಡಲಿದ್ದಾರೆ.

      ಅಕ್ಟೋಬರ್ 8ಕ್ಕೆ 198 ವಾರ್ಡ್‌ಗಳ ಮತದಾರರ ಪಟ್ಟಿ ಮುದ್ರಣಗೊಳ್ಳಲಿದೆ. ಅಕ್ಟೋಬರ್ 19ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ 28ರ ತನಕ ಅವಕಾಶ ನೀಡಲಾಗುತ್ತದೆ. ನವೆಂಬರ್ 30ಕ್ಕೆ ವಾರ್ಡ್‌ವಾರು ಅಂತಿಮ ಪಟ್ಟಿ ಪ್ರಕಟವಾಗಲಿದೆ.

      ಸೆಪ್ಟೆಂಬರ್‌ನಲ್ಲಿ 5ನೇ ಅವಧಿ ಮೇಯರ್ ಮತ್ತು ಉಪ ಮೇಯರ್ ಅವಧಿ ಪೂರ್ಣಗೊಳ್ಳಲಿದೆ. ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಇದ್ದು, ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕಗೊಳ್ಳಬಹುದು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+