ಬೆಂಗಳೂರಿನಲ್ಲಿ ಆಟೋ ಪ್ರಯಾಣ ದುಬಾರಿ?

Auto Rickshaw
ಬೆಂಗಳೂರು, ಸೆ.26 : ಬೆಲೆ ಏರಿಕೆ ಹೊರೆ ಎದುರಿಸುತ್ತಿರುವ ಬೆಂಗಳೂರಿನ ಜನರಿಗೆ ಮತ್ತೊಂದು ಕಹಿ ಸುದ್ದಿ ಕಾದಿದೆ. ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳದ ಪ್ರಸ್ತಾಪ ಕೇಳಿಬಂದಿದ್ದು, ಅಕ್ಟೋಬರ್ ನಲ್ಲಿ ಈ ಕುರಿತು ಅಂತಿಮ ಆದೇಶ ಹೊರಬೀಳಲಿದೆ.

ದಿನಬಳಕೆ ವಸ್ತುಗಳು, ಎಲ್‌ಪಿಜಿ ದರ, ಆಟೋ ರಿಕ್ಷಾ ಬೆಲೆ, ವಿಮೆ, ಬಿಡಿಭಾಗಗಳ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಆಟೋ ಮೀಟರ್ ದರವನ್ನು ಹೆಚ್ಚಳ ಮಾಡಬೇಕು ಎಂದು ಆಟೋ ಚಾಲಕರ ಸಂಘಟನೆಗಳು ಒತ್ತಾಯಿಸಿವೆ.

ಬುಧವಾರ ಬೆಂಗಳೂರಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಆಟೋ ಚಾಲಕರ ಸಂಘಟನೆಗಳ ಸಭೆ ನಡೆಯಿತು. ಈ ಸಭೆಯಲ್ಲಿ ದರ ಹೆಚ್ಚಿಸಲು ಅನುಮತಿ ನೀಡಬೇಕೆಂಬ ಪ್ರಸ್ತಾವನೆಯನ್ನು ಚಾಲಕರು ಮುಂದಿಟ್ಟಿದ್ದಾರೆ.

ಎಷ್ಟು ಹೆಚ್ಚು : ಸದ್ಯ ಪ್ರತಿ ಕಿಲೋ ಮೀಟರ್ ಗೆ ಇರುವ ರೂ. 11ರಿಂದ 12ಕ್ಕೆ ಹೆಚ್ಚಿಸಬೇಕು ಹಾಗೂ 1.8 ಕಿಲೋ ಮೀಟರ್ ಗೆ ಇರುವ ರೂ. 20 ಕನಿಷ್ಠ ದರವನ್ನು 25 ರೂ.ಗೆ ಹೆಚ್ಚಿಸುವಂತೆ ಆಟೋ ಚಾಲಕರು ಮನವಿ ಮಾಡಿದ್ದಾರೆ.

ಆಟೋ ಚಾಲಕರ ಮನವಿಯನ್ನು ಪರಿಗಣಿಸಿರುವ ಜಿಲ್ಲಾಧಿಕಾರಿ ಡಾ.ಜಿ.ಸಿ ಪ್ರಕಾಶ್, ಉಪ ಪೊಲೀಸ್ 15 ದಿನಗಳ ನಂತರ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಆದ್ದರಿಂದ ಅಕ್ಟೋಬರ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಯಾಣ ದರ ಹೆಚ್ಚಳದ ಬಗ್ಗೆ ತೀರ್ಮಾನವಾಗಲಿದೆ.

ಸಮಿತಿ ರಚನೆ : ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಆಟೋ ಪ್ರಯಾಣ ದರ ಹೆಚ್ಚಳದ ಕುರಿತು 15 ದಿನಗಳಲ್ಲಿ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ವರದಿ ಪರಿಶೀಲನೆ ನಡೆಸಿ, ಆಟೋ ದರ ಹೆಚ್ಚಳದ ಬಗ್ಗೆ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+