ಘಾಟಿ ಸುಬ್ರಮಣ್ಯದಲ್ಲಿ ಡಿಸೆಂಬರ್ 28ರಂದು ಬ್ರಹ್ಮರಥೋತ್ಸವ
ಬೆಂಗಳೂರು, ಡಿಸೆಂಬರ್ 04; ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು.
ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಬಸ್, ವೇಳಾಪಟ್ಟಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ನಡೆಯಲಿದೆ. ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು ಡಿಸೆಂಬರ್ 28ರಂದು ನಡೆಯಲಿದೆ.
ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ದಾಖಲೆಯ ಹುಂಡಿ ಹಣ ಸಂಗ್ರಹ
ಜಾನುವಾರುಗಳ ಸಂತೆ ರದ್ದು; ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, 'ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡಿಸೆಂಬರ್ 20 ರಿಂದ ಆರಂಭಗೊಳ್ಳಬೇಕಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ಜಾತ್ರೆಯನ್ನು ಮುಂದೂಡಲಾಗಿದೆ" ಎಂದು ತಿಳಿಸಿದರು.
ಕಾರವಾರದಲ್ಲೊಂದು ಬಲೂನ್ ಜಾತ್ರೆ, ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ವಿವರ
ಕೋವಿಡ್ ಪರಿಸ್ಥಿತಿಯ ಬಳಿಕ ಅದ್ದೂರಿಯಾಗಿ ಬ್ರಹ್ಮರಥೋತ್ಸವ ಆಚರಿಸಲಾಗುತ್ತಿದೆ. ಘಾಟಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಶಿಬಿರ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ನೆರೆ ರಾಜ್ಯ ಹಾಗೂ ವಿವಿಧ ಜಿಲ್ಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದರು.

ದೇವಾಲಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಜಾತ್ರೆಯ ಸಮಯದಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿಯುಳ್ಳ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ ಹಾಗೂ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯುವಂತೆ ತಿಳಿಸಿದರು ಹಾಗೂ ಯಾವುದೇ ಲೋಪವಾಗದಂತೆ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ. ಈ. ರವಿಕುಮಾರ್, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಘಾಟಿ ದೇವಾಲಯದ ಕಾರ್ಯ ನಿರ್ವಹಣಾ ಅಧಿಕಾರಿ ಹೇಮಾವತಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.