• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೈಯಪ್ಪನಹಳ್ಳಿಯ ಚಿತಾಗಾರದಲ್ಲಿ ಇಂದು ಸಂಜೆ ಕಾರ್ನಾಡ್ ಅಂತ್ಯಕ್ರಿಯೆ

|

ಬೆಂಗಳೂರು, ಜೂನ್ 10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡದ ಮೇರು ನಾಟಕಕಾರ, ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಬಹು ದಿನಗಳಿಂದ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಲ್ಯಾವೆಲ್ಲೆ ರೋಡ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಾಹಿತ್ಯ ಲೋಕ, ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದರು, ರಾಜಕಾರಣಿಗಳು ಗಿರೀಶ್​ ಕಾರ್ನಾಡ್​ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ

ಕಾರ್ನಾಡ್ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಯಾವುದೇ ವ್ಯವಸ್ಥೆಯನ್ನು ಏರ್ಪಡಿಸಲಾಗಿಲ್ಲ. ಕಾರ್ನಾಡ್​ ಪತ್ನಿ ಸರಸ್ವತಿ ಅವರು, ಯಾರೂ ಅಪಾರ್ಟ್ ಮೆಂಟ್ ಬಳಿ ಬಾರದಂತೆ ಮನವಿ ಮಾಡಿದ್ದಾರೆ. ಮನೆಯ ಬಳಿ ಸಾಕಷ್ಟು ಜನರು ಸೇರಿದರೆ ತೊಂದರೆ ಆಗುತ್ತದೆ ಎಂಬ ಉದ್ದೇಶದೊಂದಿಗೆ ಈ ಬೇಡಿಕೆ ಇಟ್ಟಿದ್ದಾರೆ. ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೇ ಕಾರ್ನಾಡ್ ಅವರ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

ಬೆಂಗಳೂರಿನ ಬೈಯಪ್ಪನಹಳ್ಳಿಯ ಕಲ್ಪಳ್ಳಿ ಚಿತಾಗಾರದಲ್ಲಿ ಇಂದು ಸಂಜೆ ಅಂತ್ಯಕ್ರಿಯೆಯನ್ನು ನಡೆಸಲು ತೀರ್ಮಾನಿಸಲಾಗಿದ್ದು, ಅಲ್ಲೇ ಅಂತಿಮ ದರ್ಶನಕ್ಕೂ ಅವಕಾಶ ನೀಡಲಾಗಿದೆ. ಸಮಯವನ್ನು ಇನ್ನೂ ಖಚಿತಪಡಿಸಿಲ್ಲ.

English summary
girish karnad funeral will take place in kallappalli graveyard in bayappana halli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X