ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Gitam University : ಗೀತಂ ವಿವಿ ಕಟ್ಟಡದಿಂದ ಬಿದ್ದ ವಿದ್ಯಾರ್ಥಿನಿ ಹಸೀನಾ, ಸಾವಿನ ಬಗ್ಗೆ ಅನುಮಾನಾ?

|
Google Oneindia Kannada News

ಬೆಂಗಳೂರು, ಏಪ್ರಿಲ್ 28: ದೊಡ್ಡಬಳ್ಳಾಪುರದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ಸಾವು ಸಂಭವಿಸಿದೆ. ವಿಶ್ವವಿದ್ಯಾಲಯದ ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಆದರೆ, ಆಕೆ ಸಾವು ಆಕಸ್ಮಿಕವಲ್ಲ ಎಂದು ಆಕ್ರೋಶ ವ್ಯಕ್ತವಾಗಿದ್ದು, ಸಹಪಾಠಿಗಳು ಪ್ರತಿಭಟನೆ ನಡೆಸಿದ್ದಾರೆ.

ಗೀತಂ ವಿಶ್ವವಿದ್ಯಾಲಯದ ಬಹುಮಹಡಿ ಮೇಲಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿಯನ್ನು 24 ವರ್ಷ ವಯಸ್ಸಿನ ಹಸೀನಾ ಎಂದು ಗುರುತಿಸಲಾಗಿದೆ. ಗೀತಂ ವಿಶ್ವವಿದ್ಯಾಲಯಕ್ಕೆ ಹೊಂದಿಕೊಂಡಂತೆ ಇರುವ ಕಾಲೇಜಿನ ಕಟ್ಟಡದ 6ನೇ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಉಗಾಂಡಾ ಮೂಲದ ಹಸೀನಾ, ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಮಹಡಿ ಒಣಗಲು ಬಟ್ಟೆ ಹರಡಿದ್ದರು. ಒಟ್ಟೆ ತೆಗೆದುಕೊಳ್ಳಲು ಹೋದಾಗ, ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎಂದು ಪ್ರಾಥಮಿಕ ತನಿಖಾ ವಿವರಗಳಿಂದ ತಿಳಿದು ಬಂದಿದೆ.

Breaking news: Gitam Varsity Engineering student dies after falling from building


ಆದರೆ, ಹಸೀನಾ ಸಾವು ಅನುಮಾನಾಸ್ಪದವಾಗಿದೆ ಎಂದು ಸ್ನೇಹಿತರು ಆಕ್ರೋಶ ವ್ಯಕ್ತಪಡಿಸಿ, ಗಲಾಟೆ ನಡೆಸಿದ್ದಾರೆ. ವಿಶ್ವ ವಿದ್ಯಾಲಯದ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

''ಹಸೀನಾ ಉತ್ತಮ ವಿದ್ಯಾರ್ಥಿನಿಯಾಗಿದ್ದಳು, ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ, ಆಯತಪ್ಪಿ ಕೆಳಗೆ ಬಿದ್ದಿರುವ ಸಾಧ್ಯತೆಯೂ ಕ್ಷೀಣವಾಗಿದ್ದು, ಆಕೆ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದೆ, ಕೆಲಗೆ ಬಿದ್ದಿದ್ದ ಹಸೀನಾಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲು ಯತ್ನಿಸಲಾಯಿತು, ಆದರೆ, ತೀವ್ರ ರಕ್ತಸ್ರಾವದಿಂದ ಮೃತಪಟ್ಟಳು'' ಎಂದು ಸಹಪಾಠಿಯೊಬ್ಬರು ಹೇಳಿದ್ದಾರೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಪೊಲೀಸರು, ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡು, ವಿಚಾರಣೆ ನಡೆಸಿದ್ದಾರೆ.

English summary
Gitam Varsity Engineering student dies after falling from building. The police identified the deceased as Hasina(24), a native of Uganda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X