ಚೀನಾ ವಸ್ತುಗಳ ನಿರ್ಬಂಧಕ್ಕಾಗಿ ಆ.15 ರಂದು ಸೈಕಲ್ ಜಾಥಾ

ಬೆಂಗಳೂರು, ಆಗಸ್ಟ್ 14: 71ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಸಮರ್ಥ ಭಾರತ ಸಂಸ್ಥೆಯು ಆಯೋಜಿಸಿರುವ 'ಗೋ ಸ್ವದೇಶಿ, ಗೋ ಗ್ರೀನ್ ಮತ್ತು ಗೋ ಹೆಲ್ದಿ' ಎಂಬ ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸೈಕಲ್ ಜಾಥಾ ಮೂಲಕ ಸ್ವದೇಶಿ ವಸ್ತುಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ.

"Go Swadeshi, Go Green and Go Healthy" on Aug 15th in Bengaluru

ಬೆಂಗಳೂರಿನ ಸುಬ್ರಹ್ಮಣ್ಯನಗರದ ಮಿಲ್ಕ್ ಕಾಲನಿ ಗ್ರೌಂಡ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಥ್ರೋಬಾಲ್ ತಂಡದ ನಾಯಕಿ ಸಂಪೂರ್ಣಾ ಹೆಗಡೆ ಮತ್ತು ಸ್ವದೇಶಿ ಜಾಗರಣ ಮಂಚ್ ನ ಪ್ರಮುಖರಾದ ಜಗದೀಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯವಾಗಿ ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಕುರಿತು ಚರ್ಚೆ ನಡೆಯಲಿದ್ದದು, ಚೀನೀ ವಸ್ತುಗಳನ್ನು ಬಹಿಷ್ಕರಿಸಿ, ಸ್ವದೇಶೀ ವಸ್ತುಗಳನ್ನೇ ಉಪಯೋಗಿಸುವ ಬಗ್ಗೆ ಕಾರ್ಯಕ್ರಮದಲ್ಲಿ ಸಂಕಲ್ಪ ಕೈಗೊಳ್ಳಲಾಗುತ್ತದೆ.

ದೇಶದ ಹಿತದ ದೃಷ್ಟಿಯಿಂದ ವಿವಿಧ ಉತ್ತಮ ಕೆಲಸಗಳನ್ನು ಆಯೋಜಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಸ್ಥೆಗಳಲ್ಲಿ ಸಮರ್ಥ ಭಾರತ ಬಹುಮುಖ್ಯವಾದುದು. ಇದೀಗ ಸೈಕಲ್ ಜಾಥಾ ಆಯೋಜಿಸಿರುವ ಹಿಂದೆಯೂ ಸ್ವದೇಶಿ ಆಂದೋಲವನ್ನು ನೆನಪಿಸುವ ಇಂಗಿತವಿದೆ. ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿರಲಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+