ಬೆಂಗಳೂರಿಗೆ ಬರುತ್ತಿದ್ದ ಗೋಏರ್ ವಿಮಾನದಲ್ಲಿ ಬೆಂಕಿ

ಬೆಂಗಳೂರು, ಫೆಬ್ರವರಿ 18: ಅಹಮದಾಬಾದಿನಿಂದ ಬೆಂಗಳೂರಿಗೆ ಬರುತ್ತಿದ್ದ ಗೋಏರ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ವಿಮಾನ ಟೇಕ್‌ಆಫ್ ಆಗುವ ವೇಳೆ ವಿಮಾನದ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ವಿಮಾನ ರನ್​ವೇಯಲ್ಲಿ ಸಾಗುತ್ತಿರುವಾಗಲೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಕೂಡಲೆ ವಿಮಾನದ ಇಂಜಿನ್ ಆಫ್​ ಮಾಡಿ, ತುರ್ತು ನಿರ್ಗಮನ ದ್ವಾರದ ಮೂಲಕ ಪ್ರಯಾಣಿಕರನ್ನು ಹೊರಗೆ ಕಳುಹಿಸಲಾಗಿದೆ. ಈ ವಿಮಾನದಲ್ಲಿ ಎಷ್ಟು ಮಂದಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ.

GoAir Flight Catches Fire

ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಅಹಮದಾಬಾದ್​- ಬೆಂಗಳೂರು ಮಾರ್ಗದ ಗೋಏರ್​ ವಿಮಾನದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಅಹಮದಾಬಾದ್​ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಲು ಸಿದ್ಧತೆ ನಡೆಸುತ್ತಿದ್ದಂತೆ ಹಕ್ಕಿಯ ರೆಕ್ಕೆ ಬಡಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿತ್ತು. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಗೋಏರ್​ ವಿಮಾನದ ವಕ್ತಾರರು, ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+