Get Updates
Get notified of breaking news, exclusive insights, and must-see stories!

B Khata: ಬಿ - ಖಾತಾದಿಂದ ಎ - ಖಾತಾ: ಸರ್ಕಾರದಿಂದ ಮತ್ತೊಂದು ಗುಡ್‌ನ್ಯೂಸ್ ನಿರೀಕ್ಷೆ

ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಬಿ - ಖಾತಾದಿಂದ ಎ - ಖಾತಾ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಬಿ - ಖಾತಾದಿಂದ ಎ ಖಾತಾ ಮಾಡುವ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ವರ್ಷಗಳಿಂದ ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳಬೇಕು ಎಂದು ಆಸ್ತಿದಾರರು ಕಾಯುತ್ತಿದ್ದರು. ಈ ವರ್ಷ ಸರ್ಕಾರವೇ ಅಧಿಕೃತವಾಗಿ ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಅವಕಾಶ ನೀಡಿದೆಯಾದರೂ, ಆಸ್ತಿದಾರರು ಬಿ ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಮುಂದೆ ಬರುತ್ತಿಲ್ಲ.

ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಿದೆ. ಆದರೆ ಲಕ್ಷಾಂತರ ಅರ್ಜಿ ಸಲ್ಲಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಆ ಲೆಕ್ಕಾಚಾರಗಳು ಇದೀಗ ತಲೆಕೆಳಗಾಗಿವೆ.

Good News for B-Khata Holders Government Plans Easier Upgrade to A-Khata and more

ಬಿ ಖಾತಾ ಪರಿವರ್ತನೆ ಮಾಡುವುದಕ್ಕೆ ವಿಧಿಸಲಾಗಿರುವ ದುಬಾರಿ ಶುಲ್ಕವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಅಲ್ಲದೇ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ದುಬಾರಿ ಹಣ ನೀಡಿ ಬಿ ಖಾತಾ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ. ಮುಂದಿನ ದಿನಗಳಲ್ಲಿ ಉಚಿತವಾಗಿ ಬಿ ಖಾತಾ ಸೇವೆ ಇರಲಿದೆ.

ನಾವು ಅಧಿಕಾರಕ್ಕೆ ಬಂದರೆ ಲಕ್ಷ ಲಕ್ಷ ರೂಪಾಯಿ ಪಡೆದುಕೊಳ್ಳದೆ ಉಚಿತವಾಗಿ ಬಿ ಖಾತಾ ಮಾಡಿಕೊಡಲಿದ್ದೇವೆ ಎಂದು ಭರವಸೆ ನೀಡಿದ್ದರು. ಈ ಅಂಶವೂ ಸಹ ಬಿ ಖಾತಾ ದಿಂದ ಎ ಖಾತಾ ಪರಿವರ್ತನೆಯಲ್ಲಿ ಭಾರೀ ಹಿನ್ನಡೆ ಉಂಟಾಗಿದೆ ಎಂದು ಹೇಳಲಾಗಿದೆ. ಎ ಖಾತಾ ವಿತರಣೆ ಮಾಡುವುದಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.

ಎ ಖಾತಾ ಪರಿವರ್ತನೆಗೆ ಅರ್ಜಿ ಸಲ್ಲಿಸುವುದಕ್ಕೆ ಗ್ರೇಟರ್ ಬೆಂಗಳುರು ಪ್ರಾಧಿಕಾರದಿಂದ 100 ದಿನಗಳ ಕಾಲಾವಕಾಶ ಇರಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. 1, 2025 ರಿಂದ 100 ದಿನಗಳ ಅಭಿಯಾನ ಪ್ರಾರಂಭಿಸಲಾಗಿದೆ. ಆದರೆ ಒಂದು ತಿಂಗಳು ಪೂರ್ಣಗೊಳ್ಳುವ ಸಮಯ ಬಂದರೂ, ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಬೆಂಗಳೂರಿನಲ್ಲಿ ಕೇವಲ 3 ಸಾವಿರ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಗಳಲ್ಲಿ 35 ಅರ್ಜಿಗಳನ್ನು ಪರಿಶೀಲನೆ ಮಾಡಿ ವಿತರಣೆ ಮಾಡಲಾಗಿದೆ.

7.5 ಲಕ್ಷ ಬಿ ಖಾತಾ ಆಸ್ತಿ

ಬೆಂಗಳೂರಿನಲ್ಲಿ ಅಂದಾಜು 25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಅದರಲ್ಲಿ ಅಂದಾಜು ಏಳೂವರೆ ಲಕ್ಷ ಬಿ ಖಾತಾಗಳಿವೆ. ಅದರಲ್ಲಿ ಇಲ್ಲಿಯ ವರೆಗೆ ಕೇವಲ 3 ಸಾವಿರ ಬಿ ಖಾತಾದಾರರು ಮಾತ್ರ ಎ ಖಾತಾಗೆ ಅರ್ಜಿ ಸಲ್ಲಿಸಿದ್ದಾರೆ. ಬಿ ಖಾತಾದಾರರು ಎ ಖಾತಾ ಮಾಡಿಸಿಕೊಳ್ಳುವುದಕ್ಕೆ ಮುಂದೆ ಬರುತ್ತಿಲ್ಲ. ಹೀಗಾಗಿ, ಬಿ ಖಾತಾಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡಲಾಗುತ್ತಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೈಡ್ ಲೈನ್ಸ್ ವ್ಯಾಲ್ಯೂ ಕಾರಣ

ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ರಾಜ್ಯ ಸರ್ಕಾರವು ಗೈಡ್ ಲೈನ್ಸ್ ವ್ಯಾಲ್ಯೂ 5% ನಿಗದಿ ಮಾಡಿರುವುದು ಭಾರೀ ಹಿನ್ನಡೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ. ಇದೀಗ ಗೈಡ್ ಲೈನ್ಸ್ ವ್ಯಾಲ್ಯೂ 5% ಹಿಂಪಡೆಯುವುದಕ್ಕೆ ರಾಜ್ಯ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ಇದು ಆದರೆ ನಿಜಕ್ಕೂ ಬಿ ಖಾತಾ ಆಸ್ತಿದಾರರಿಗೆ ಗುಡ್‌ನ್ಯೂಸ್ ಸಿಕ್ಕಂತೆ ಆಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+