Good News: ಜಾತಿ ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ಗೌರವಧನ ಬಿಡುಗಡೆ ಕುರಿತು ಗುಡ್ ನ್ಯೂಸ್
Good News: ಇತ್ತೀಚೆಗಷ್ಟೇ ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ಮಾಡಿಸಲಾಗಿತ್ತು. ಅದರಲ್ಲೂ ಬೆಂಗಳೂರಿನಲ್ಲಿ ಈ ಕಾರ್ಯಕ್ಕೆ ಬಳಸಿಕೊಂಡಿದ್ದವರಿಗೆ ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಗೌರವಧನ ವಿತರಣೆ ಕುರಿತು ಗುಡ್ ನ್ಯೂಸ್ ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದ ಮೇರೆಗೆ ಇತ್ತೀಚೆಗಷ್ಟೇ ಜಾತಿ ಗಣತಿ ಸಮೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ವಿತರಣೆ ಮಾಡುವ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ಸಂಬಂಧ ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳಿಗೆ ಒಟ್ಟು ₹23,87,47,200 ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಗಣತಿದಾರರಿಗೆ ಸಹಾಯಧನದ ಜೊತೆಗೆ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. ಜಿಬಿಎಯ ಎಸ್ಬಿಐ ಖಾತೆಯಿಂದ ಬೆಂಗಳೂರು ಕೇಂದ್ರ, ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣ ಪಾಲಿಕೆಗಳಿಗೆ ಈ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಹಾಗಾದ್ರೆ ಯಾವ ಪಾಲಿಕೆಗೆ ಎಷ್ಟು ಅನುದಾನ ನೀಡಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ತಿಳಿಯಿರಿ.
ಇನ್ನೂ ಈ ಹಣವನ್ನು ಜಾತಿ ಗಣತಿ ಸಮೀಕ್ಷೆ ನಡೆಸಿದ ಗಣತಿದಾರರಿಗೆ ಗೌರವಧನವಾಗಿ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಗೆ ಎಲ್ಲಾ ಗಣತಿದಾರರಿಗೆ ಪ್ರಮಾಣಪತ್ರ ವಿತರಣೆ ಕಡ್ಡಾಯ ಎಂದು ಜಿಬಿಎ ಸೂಚನೆ ನೀಡಿದ.
ಯಾವ ಪಾಲಿಕೆಗೆ ಎಷ್ಟು ಹಣ ಬಿಡುಗಡೆ?
* ಬೆಂಗಳೂರು ಕೇಂದ್ರ ಪಾಲಿಕೆ - 2,68,81,000 ರೂಪಾಯಿ
* ಬೆಂಗಳೂರು ಪೂರ್ವ ಪಾಲಿಕೆ - 4,25,04,850 ರೂಪಾಯಿ
* ಬೆಂಗಳೂರು ಪಶ್ಚಿಮ ಪಾಲಿಕೆ - 6,80,73,550 ರೂಪಾಯಿ
* ಬೆಂಗಳೂರು ಉತ್ತರ ಪಾಲಿಕೆ - 5,24,11,300 ರೂಪಾಯಿ
* ಬೆಂಗಳೂರು ದಕ್ಷಿಣ ಪಾಲಿಕೆ - 4,88,76,500 ರೂಪಾಯಿ
ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳಲಾಗಿತ್ತು. ಇದೇ ಕಾರಣದಿಂದ ರಾಜ್ಯದಲ್ಲಿ ಬೇಸಿಗೆ ರಜೆಯನ್ನು ಸಹ ವಿಸ್ತರಣೆ ಮಾಡಲಾಗಿತ್ತು. ಈ ವೇಳೆ ರಜೆ ಸಿಕ್ಕಿದ್ದು ಮಾತ್ರ ವಿದ್ಯಾರ್ಥಿಗಳಿಗೆ ಅಷ್ಟೇ. ಆದರೆ, ಶಿಕ್ಷಕರಿಗೆ ಯಾವುದೇ ರಜೆಯನ್ನು ನೀಡಿರಲಿಲ್ಲ. ಬದಲಾಗಿ ಅವರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗಿತ್ತು. ಇದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು. ವಿಪಕ್ಷದವರು ಸರ್ಕಾರ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಂಡು ಅವರಿಗೆ ಗೌರವಧನ ನೀಡುವುದಿಲ್ಲ. ರಜೆ ಕೂಡ ಕೊಡುವುದಿಲ್ಲ ಎಂದು ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದರು.
ಇದಕ್ಕೆ ಸ್ಪಷ್ಟನೆ ನೀಡಿದ್ದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನಾವು ಗೌರವಧನವನ್ನು ನಿಲ್ಲಿಸುವುದಿಲ್ಲ. ಕೊಟ್ಟೇ ಕೊಡುತ್ತೇವೆ. ಅವರಿಗೆ ಸಿಗಬೇಕಾದ ಗೌರವ ಧನ ದೊರೆಯುತ್ತದೆ ಎಂದು ತಿಳಿಸಿತ್ತು. ಅದರಂತೆಯೇ ಇದೀಗ ಬೆಂಗಳೂರೂ ವ್ಯಾಪ್ತಿಯಲ್ಲಿ ಬರುವ ಐದು ಪಾಲಿಕೆಗಳಿಗೆ ಜಿಬಿಎ ಅನುದಾನವನ್ನು ಬಿಡುಗಡೆ ಮಾಡಿದೆ. ಈ ಹಣವನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ನೀಡಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳುವಂತಿಲ್ಲ ಅಂತಲೂ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಹೀಗೆ ಗೌರವಧನ ನಿರೀಕ್ಷೆಯಲ್ಲಿದ್ದವರಿಗೆ ಜಿಬಿಎ ಗುಡ್ ನ್ಯೂಸ್ ಕೊಟ್ಟಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications