ಬೀದಿಬದಿ ವ್ಯಾಪಾರಿಗಳಿಗೆ ಗುಡ್‌ನ್ಯೂಸ್: ಹೊಸ ಐಡಿ ಕಾರ್ಡ್ ವಿತರಣೆ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆಯ ನಂತರ, ಇದೀಗ ಸರ್ಕಾರವು ಕೆಲವೊಂದು ವಿಷಯಗಳಲ್ಲಿ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೀದಿಬದಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು ಹಾಗೂ ಸೂಚನೆಗಳ ವಿವರ ಇಲ್ಲಿದೆ.

* ಸರ್ಕಾರ ಬಡವರ ಪರವಾಗಿ ಸದಾ ಇರುತ್ತದೆ, ನಾಗರಿಕರು ಓಡಾಡಲು ಸುಗಮ ಮಾರ್ಗ ನಿರ್ಮಿಸಲು ನಾವು ಈ ಕ್ರಮ ಕೈಗೊಳ್ಳುತ್ತಿದ್ದೇವೆ

* ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನ ನಡೆಯಬೇಕೆನ್ನುವುದೇ ನಮ್ಮ ಆಶಯ. ಸುಪ್ರಿಂ ಕೋರ್ಟ್ ಆದೇಶವನ್ನು ನಾವು ಪಾಲಿಸಿಕೊಂಡು ಪಾದಚಾರಿ ಮಾರ್ಗದಲ್ಲಿರುವೆಲ್ಲಾ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದೇವೆ.

* ಪಾದಚಾರಿ ಮಾರ್ಗಗಳಲ್ಲಿ ಜನ ಓಡಾಡಲು ಸುಗಮ ಮಾರ್ಗವಿರಬೇಕು. ಅದರಲ್ಲಿ ಯಾವುದೇ ರಾಜಿಯಿಲ್ಲ.

* ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಬೀದಿ ಬದಿ ವ್ಯಾಪಾರಿಗಳ ಸಹಕಾರ ಪ್ರಮುಖವಾಗಿ ಬೇಕಿದೆ. ನಗರದ ಪ್ರಮುಖ ರಸ್ತೆಗಳಾದ 1,500 ಕಿ.ಮೀ ರಸ್ತೆಗಳಲ್ಲಿ ವ್ಯಾಪಾರ ಮಾಡಬೇಕು. ಉಳಿದ ಶೇ. 80-90 ರಷ್ಟು ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಅವಕಾಶವಿದೆ. ಅದಕ್ಕೆ ಪಾಲಿಕೆ ಸಂಪೂರ್ಣ ಸಹಕಾರ ನೀಡಲಿದೆ.

Good News

* ನಗರದಲ್ಲಿ ನಿನ್ನೆಯವರೆಗೆ 430 ಕಿ.ಮೀ ಒತ್ತುವರಿ ತೆರವು ಮಾಡಲಾಗಿದೆ. ಇದನ್ನು ನಿರಂತರವಾಗಿ ಮುಂದುವರಿಸಲಾಗುವುದು.

* ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಮಾತ್ರವಲ್ಲದೆ, ಶಾಪ್ಸ್, ಪೆಟ್ಟಿ ಅಂಗಡಿಗಳು, ತಳ್ಳುವ ಗಾಡಿಗಳು, ಶೀಟ್ಸ್/ಮೇಲ್ಚಾವಣಿ/ಕೆನೋಪಿ, ಮೆಟ್ಟಿಲುಗಳುರ‍್ಯಾಂಪ್ಸ್/ತಡೆಗೋಡೆಗಳು, ಜಾಹೀರಾತು/ನಾಮಫಲಕಗಳು, ತಾತ್ಕಾಲಿಕ/ಶಾಶ್ವತ ಶೆಡ್‌ಗಳನ್ನು ಸಹ ತೆರವುಗೊಳಿಸಲಾಗುತ್ತಿದೆ.

* ಮುಂದಿನ ದಿನಗಳಲ್ಲಿ ಪಾರ್ಕಿಂಗ್, ಗಾರ್ಡನ್ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿರುವ ಎಲ್ಲಾ ಅಡೆತಡೆಗಳನ್ನು ಹಂತ-ಹಂತವಾಗಿ ಕೈಗೆತ್ತಿಕೊಳ್ಳುತ್ತೇವೆ

* ಸುಪ್ರಿಂ ಕೋರ್ಟ್ ಅದೇಶ್ ಹಾಗೂ ಬೀದಿ ಬದಿ ವ್ಯಾಪಾರಿಗಳಿಗಾಗಿ ಇರುವ ಕಾಯ್ದೆ/ಕಾನೂನು ಅನುಷ್ಟಾನವನ್ನು ಪಾಲಿಸಲು ಕ್ರಮ ಕೈಗೊಳ್ಳಲಾಗುವುದು.

* ಸುಪ್ರಿಂ ಕೋರ್ಟ್ ಕೋರ್ಟ್ ಹೊಸ ಐಡಿ ಕೊಡಲು ಹೇಳಿದ್ದಾರೆ, ವಿತರಿಸಲು ಹೇಳಿದ್ದೇನೆ ಎಂದಿದ್ದಾರೆ.

* ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹೊಸ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸಂಸದರಾದ ರಾಜೀವ್ ಗೌಡ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕಾನೂನು ಕೋಶ ವಿಭಾಗದ ಮುಖ್ಯಸ್ಥರಾದ ಚಂದ್ರ ಶೇಖರ್ ಪಾಟೀಲ್, ಸಹಾಯ ಆಯುಕ್ತರಾದ ಮುರಳಿ, ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

ನಾಳೆಯಿಂದ ಹೊಸ ಕಾರ್ಯಾಚರಣೆ

ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 10ನೇ ಜುಲೈ 2026 ರಿಂದ ಅನ್ವಯವಾಗುವಂತೆ, ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು ಗುರುತಿಸಿ 5 ನಗರ ಪಾಲಿಕೆಗಳು ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಅವುಗಳ ವಿರುದ್ಧ ಜಂಟಿ ಕಾರ್ಯಾಚರಣೆಯ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+