Bengaluru: ಬೆಂಗಳೂರಿನ ಈ ವ್ಯಾಪಾರಿಗಳಿಗೆ ಬಿಬಿಎಂಪಿಯಿಂದ ಗುಡ್‌ನ್ಯೂಸ್‌

ಬೃಹತ್‌ ಬೆಂಗಳೂರು ಮಹಾನಗರ ( ಬಿಬಿಎಂಪಿ) ಪಾಲಿಕೆಯು ಬೀದಿಬದಿ ವ್ಯಾಪಾರಿಗಳಿಗೆ ಗುಡ್‌ನ್ಯೂಸ್‌ವೊಂದನ್ನು ನೀಡಿದೆ. ಬೆಂಗಳೂರಿನಲ್ಲಿ ಸಾವಿರಾರು ಜನ ಬೀದಿ ವ್ಯಾಪಾರಿಗಳು ಇದ್ದಾರೆ. ಅವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿಶೇಷ ಸೌಲಭ್ಯಗಳೂ ಸಹ ಇವೆ. ಆದರೆ, ಕೆಲವೊಂದು ಸೌಲಭ್ಯಗಳು ಅವರಿಗೆ ಸಿಗುತ್ತಿಲ್ಲ. ಅದಕ್ಕೆ ಪರಿಹಾರ ಕಂಡುಕೊಳ್ಳಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿಯ ಈ ಹೊಸ ಕ್ರಮದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಲಾಭವಾಗಲಿದೆ.

ಬೆಂಗಳೂರಿನಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಬೇಕು ಎನ್ನುವ ಒತ್ತಾಯ ಹಲವು ವರ್ಷಗಳಿಂದ ಇದೆ. ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯು ಹಲವು ಕಾರಣಗಳಿಂದ ಮುಂದೂಡಿಕೆಯಾಗುತ್ತಲ್ಲೇ ಇತ್ತು. ಇದೀಗ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಮಾಡಲು ಬಿಬಿಎಂಪಿ ಮುಂದಾಗಿದೆ.

Good news from BBMP for these traders of Bengaluru

ಬೆಂಗಳೂರಿನಲ್ಲಿ ಒಟ್ಟು 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಗೆ ಸಂಬಂಧಿಸಿದಂತೆ ಹಲವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಸಮೀಕ್ಷೆಗೆ ಬೇಕಾದ ತರಬೇತಿ ಈಗಾಗಲೇ ನೀಡಲಾಗಿದೆ. ಅಲ್ಲದೇ ಸಮೀಕ್ಷೆ ವೇಳೆ ಬಳಸುವ ತಂತ್ರಜ್ಞಾನ ಸೌಲಭ್ಯವನ್ನೂ ನೀಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ವರ್ಷಗಳಿಂದ ಸ್ಥಗಿತವಾಗಿದ್ದ ಸರ್ವೇ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯು ಕಳೆದ ಎರಡು ವರ್ಷಗಳಿಂದ ಸ್ಥಗಿತವಾಗಿತ್ತು. 2017ರಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆದಿತ್ತು. ಆದರೆ, ಪೂರ್ಣ ಪ್ರಮಾಣದಲ್ಲಿ ಆಗಿರಲಿಲ್ಲ. ಬೀದಿ ಬದಿ ವ್ಯಾಪಾರಿಗಳು ಎಲ್ಲೆಲ್ಲಿ ಇದ್ದಾರೆ, ಎಷ್ಟು ಸಂಖ್ಯೆಯಲ್ಲಿ ಇದ್ದಾರೆ ಎನ್ನುವ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಸ್ಥಗಿತವಾಗಿದ್ದರಿಂದ ಬೀದಿ ಬದಿ ವ್ಯಾಪಾರಿಗಳು ಸಮಸ್ಯೆ ಎದುರಿಸಿದ್ದರು. ಬೀದಿ ಬದಿ ವ್ಯಾಪಾರಿಗಳ ವಲಯಗಳನ್ನು ಗುರುತಿಸದೆ ಹಾಗೂ ಸಮೀಕ್ಷೆ ಮಾಡದೆ ಅವರನ್ನು ಸ್ಥಳಾಂತರಿಸುವಂತಿಲ್ಲ ಎನ್ನುವ ನಿಯಮ ಇದೆ. ಕಳೆದ ಎರಡು ವರ್ಷಗಳ ಹಿಂದೆ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಅಂದಾಜು 25,000 ಸಾವಿರ ಬೀದಿ ವ್ಯಾಪಾರಿಗಳು ಬೆಂಗಳೂರಿನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಆದರೆ, 1,00,000 (ಒಂದು ಲಕ್ಷಕ್ಕೂ)ಕ್ಕೂ ಹೆಚ್ಚು ಜನ ಬೀದಿ ಬದಿ ವ್ಯಾಪಾರಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ, ಸಮೀಕ್ಷೆ ನಡೆಸಿದವರಲ್ಲಿ ಕೇವಲ 13,000 ಜನರಿಗೆ ಮಾತ್ರ ಪ್ರಮಾಣ (ಬೀದಿಬದಿ) ಪತ್ರಗಳನ್ನು ನೀಡಲಾಗಿದೆ ಎನ್ನಲಾಗಿದೆ.

ಶೀಘ್ರ ಸಮೀಕ್ಷೆ ಮುಕ್ತಾಯ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ (ಕಲ್ಯಾಣ) ಸೂರಳ್ಕರ್‌ ವಿಕಾಸ್ ಕಿಶೋರ್ ಅವರು , ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯು ಒಂದು ತಿಂಗಳು ಅಥವಾ ಒಂದೂವರೆ (30 ಅಥವಾ 45 ದಿನಗಳಲ್ಲಿ) ತಿಂಗಳಿನಲ್ಲಿ ಮುಕ್ತಾಯವಾಗಲಿದೆ ಎಂದಿದ್ದಾರೆ.

ಪಿ-ಎಂ ಸ್ವನಿಧಿ: ಬೀದಿ ಬದಿ ವ್ಯಾಪಾರಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಪಿಎಂ ಸ್ವ- ನಿಧಿ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯ ಮೂಲಕ ಬೀದಿ ವ್ಯಾಪಾರಿಗಳಿಗೆ ಕೈಗೆಟಕುವ ದರದಲ್ಲಿ ಕಿರು ಸಾಲ ಸೌಲಭ್ಯ ನೀಡಲಾಗುತ್ತಿದೆ. ರಸ್ತೆಬದಿ ವ್ಯಾಪಾರಿಗಳಿಗೆ 10,000 (ಹತ್ತು ಸಾವಿರ) ಸಾವಿರ ರೂಪಾಯಿಯ ವರೆಗೆ ಸಾಲ ಸೌಲಭ್ಯ ಸಿಗಲಿದೆ. ನಿಯಮಿತ ಸಾಲ ಮರುಪಾವತಿಗೆ ಉತ್ತೇಜಿಸಲಾಗುತ್ತದೆ ಹಾಗೂ ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+