ಸಿಹಿ ಸುದ್ದಿ.... ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ- ಸಿಎಂ ಘೋಷಣೆ
ಬೆಂಗಳೂರು ಮಾರ್ಚ್ 12: ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಬಡವರಿಗೆ ಸಿಎಂ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಘೋಷಣೆಗೂ ಮುನ್ನ ಏರ್ಪೋರ್ಟಲ್ಲೂ ಇಂದಿರಾ ಕ್ಯಾಂಟೀನ್ ಅನ್ನು ಸಿಎಂ ಸೋಮವಾರ ಉದ್ಘಾಟಿಸಿದರು.
ರಾಜ್ಯದಲ್ಲಿ ಈಗಾಗಲೇ ಆರಂಭವಾದ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಗೊಳಿಸಿ, 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ದವಾಗಿವೆ ಎಂದು ಸಿಎಂ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂಪಾಯಿ. ಮಧ್ಯಾಹ್ನ ಮತ್ತು ರಾತ್ರಿ ಊಟ 10 ರೂಪಾಯಿಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಮದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿ ಹಾಗೂ ರಾಜ್ಯದಿತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂ ಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಅವುಗಳನ್ನು ಪ್ರಾರಂಭಿಸಿದ್ದೇವೆ ಎಂದರು.
ಬೆಂಗಳೂರಿನ ಎಲ್ಲಾ ವಾರ್ಡ್‌ನಲ್ಲೂ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಜೊತೆಗೆ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.
ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರೂ ಕೂಡ ಎರಡು ಮೂರು ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಕರ್ ಮೂಲಕ, ಹೊಸ ಕೊಳವೆ ಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications