ಕೊರೊನಾ ಚಿಕಿತ್ಸೆಗೆ ಸಿಎಂ ಯಡಿಯೂರಪ್ಪರಿಂದ ಉತ್ತಮ ಸ್ಪಂದನೆ

ಬೆಂಗಳೂರು, ಏಪ್ರಿಲ್ 20: ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಸೋಮವಾರ ಮಾಹಿತಿ ನೀಡಿದೆ.

ಕೊರೊನಾ ಸೋಂಕು ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಏ.16ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿಎಂ ಬಿಎಸ್​ವೈ ದಾಖಲಾಗಿದ್ದ ರು. ಸದ್ಯ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯಕೀಯ ತಂಡ ಚಿಕಿತ್ಸೆ ಮುಂದುವರೆಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಕೊರೋನಾ ಪ್ರೋಟೋಕಾಲ್ ರೀತಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರೂ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬೆಂಗಳೂರು ಸಚಿವರು, ಶಾಸಕರು, ಸಂಸದರ ಸಭೆಯಲ್ಲಿ ಆಸ್ಪತ್ರೆಯಿಂದಲೇ ವಿಡಿಯೋ ಸಂವಾದದ ಮೂಲಕ ಭಾಗಿಯಾದರು.

 Good Response By CM Yediyurappa To Coronavirus Treatment

ಮಂಗಳವಾರ ರಾಜ್ಯಪಾಲ ವಜುಭಾಯ್ ವಾಲಾ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವರ್ಚುವಲ್ ಸಂವಾದದ ಮೂಲಕ ಭಾಗಿಯಾಗಲಿದ್ದಾರೆ.

Recommended Video

      'ಜನರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದರೆ, ಕಠಿಣ ಕ್ರಮದ ಅವಶ್ಯಕತೆ ಬರ್ತಿರಲಿಲ್ಲ' ಸಚಿವ ಸುಧಾಕರ್‌ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+