'ನವ ಬೆಂಗಳೂರು-ನವ ಭಾರತ' ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ
ಬೆಂಗಳೂರು, ಮಾರ್ಚ್ 22 : ಬೆಂಗಳೂರು ಬಿಜೆಪಿ ಘಟಕದ ವತಿಯಿಂದ ನ್ಯೂ ಬೆಂಗಳೂರು-ನ್ಯೂ ಇಂಡಿಯಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾಲೇಜು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
'ನವ ಬೆಂಗಳೂರು-ನವ ಭಾರತ' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸಮಸ್ಯೆಗಳ ಬಗ್ಗೆ 5 ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ 500ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಾದ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಬಹುಮಾನದ ಹಣವನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಉದ್ಘಾಟಿಸಿದರು. 'ವಿದ್ಯಾರ್ಥಿಗಳಲ್ಲಿ ಜಾಗೃತ ಮನಸ್ಸುಗಳು ಹೆಚ್ಚಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಂಖ್ಯೆಯನ್ನು ನೋಡಿ ಆಶ್ಚರ್ಯವಾಯಿತು' ಎಂದರು.

'ಬಿಜೆಪಿ ವಿಭಿನ್ನವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ. ಪ್ರಧಾನಿ ನರೇಂದ್ರ ಮೋದಿ ವಿಶ್ವನಾಯಕರಾಗಿದ್ದಾರೆ. ವಿದ್ಯಾರ್ಥಿಗಳ ಮನಸ್ಸಿನಲ್ಲಿ ನರೇಂದ್ರ ಮೋದಿಯವರ ಒಬ್ಬ ಅಪ್ರತಿಮ ನಾಯಕರಾಗಿದ್ದಾರೆ' ಎಂದು ಹೇಳಿದರು.
'ಕೇಂದ್ರ ಸರ್ಕಾರ ವಿದ್ಯಾರ್ಥಿಗಳು ಮತ್ತು ಯುವಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಪ್ರಯೋಜನಗಳನ್ನು ಎಲ್ಲರೂ ಪಡೆದುಕೊಳ್ಳಬೇಕು' ಎಂದು ರವಿ ಸುಬ್ರಮಣ್ಯ ಕರೆ ನೀಡಿದರು.












Click it and Unblock the Notifications