ಬಿಬಿಎಂಪಿ ವಾರ್ಡ್‌ಗೆ ಗುಡ್‌ಬಾಯ್: ಆ. 3ರಿಂದ ಹೊಸ ವಾರ್ಡ್‌ಗಳ ರಚನೆ ಡಿಸಿಎಂ ಡಿ.ಕೆ ಶಿವಕುಮಾರ್!
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಚುನಾವಣೆಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ. ಆಗಸ್ಟ್ 3 ರಿಂದ ಜಿಬಿಎ ವಾರ್ಡ್‌ಗಳ ಮರುವಿಂಗಡಣಾ ಆಯೋಗದ ಕಾರ್ಯಾರಂಭವಾಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ವಾರ್ಡ್ ಗಳ ಮರುವಿಂಗಡಣಾ ಆಯೋಗವು ವಾರ್ಡ್ ಗಳ ಮರುರಚನೆ, ಗಡಿ ಗುರುತಿಸುವಿಕೆ ಕೆಲಸ ಆರಂಭಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಅವರು ವಿಧಾನಸೌಧದಲ್ಲಿ ಮಂಗಳವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು ಈ ಆಯೋಗವು ತಾತ್ಕಾಲಿಕ ವಾರ್ಡ್‌ಗಳು, ಗಡಿ ಗುರುತಿಸುವಿಕೆ, ತಕರಾರು ಅರ್ಜಿಗಳ ಸ್ವೀಕಾರ ಮತ್ತಿತರ ಕೆಲಸಗಳ ಅಂತಿಮ ನಿರ್ಣಯಗಳನ್ನು ಒಂದು ತಿಂಗಳ ಕಾಲ ಅಂದರೆ ಸೆಪ್ಟೆಂಬರ್ 1 ರವರೆಗೆ ನಿರ್ವಹಿಸಲಿದೆ. ಆನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದಾದ ನಂತರ ಈ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದಿದ್ದಾರೆ.

ಈ ಎಲ್ಲಾ ಪ್ರಕ್ರಿಯೆ ಮುಗಿದ ತಕ್ಷಣ ನಾವು ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತೇವೆ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡು, ವೇಳಾಪಟ್ಟಿ ನಿಗದಿ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತೇವೆ ಎಂದರು. ಇನ್ನು ವಿವಿಧ ಯೋಜನೆಗಳ ಅಡಿ ಫಲಾನುಭವಿಗಳಾಗಿ ಆಯ್ಕೆಯಾದ 10ರಿಂದ15 ಸಾವಿರ ಜನರಿಗೆ ಸೌಲಭ್ಯಗಳ ಹಂಚಿಕೆ ಮಾಡಲಾಗುವುದು. 3,700 ಬೀದಿಬದಿ ವ್ಯಾಪಾರಿಗಳು ತಳ್ಳುವ ಗಾಡಿಗಳಿಗೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.
ಬೀದಿ ನಾಯಿ ದಾಳಿ ವೃದ್ಧ ಸಾವು!
ಬೆಂಗಳೂರಿನ ಯಲಹಂಕ ವಲಯದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೆಂಪಗೌಡ ನಗರದಲ್ಲಿ ಜುಲೈ 28ರ ಬೆಳ್ಳಂ ಬೆಳಗ್ಗೆ 3 ಗಂಟೆಗೆ ಸುಮಾರು 68 ವಯಸ್ಸಿನ ಸೀತಪ್ಪ ಅವರು ಬೀದಿನಾಯಿಗಳ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ತನಿಖೆ ಪ್ರಕ್ರಿಯೆ ನಡೆದಿದೆ. ಸೀತಪ್ಪ ಅವರು ಮುಂಜಾನೆ 3 ಗಂಟೆಗೆ ಚಹಾ ಸೇವಿಸಲು ಸ್ಥಳೀಯ ಚಹಾ ಅಂಗಡಿಗೆ ತೆರೆಳಿದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ವಿಚಾರಣೆ ವೇಳೆಯಲ್ಲಿ ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ಸೀತಪ್ಪ ಅವರ ಮನಸ್ಥಿತಿ ಸರಿಯಿ ಇರಲಿಲ್ಲ ಎಂದು ಹೇಳಿದ್ದಾರೆ ಎಂದೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಘಟನೆಯ ಬಗ್ಗೆ ಯಾವುದೇ ನಿಖರ ಸಾಕ್ಷಾಧಾರಗಳು (CC TV Footage, Witness) ಲಭ್ಯವಾಗಿಲ್ಲ. ಮುಂಜಾನೆಯ ಸಮಯವಾಗಿರುವುದರಿಂದ ಜನ ಸಂಚಾರ ವಿರಳವಾಗಿದ್ದು, ಸಮಯಕ್ಕೆ ಸರಿಯಾಗಿ ಸಹಾಯ ದೊರೆಯದೆ ಇಲ್ಲದಿರುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಸ್ವಲ್ಪ ಸಮಯದ ನಂತರ ಸಾರ್ವಜನಿಕರಿಂದ ಸಹಾಯವಾಣಿ 112ಕ್ಕೆ ದೂರು ಸ್ವೀಕೃತವಾದ ಹಿನ್ನಲೆಯಲ್ಲಿ ಸ್ಥಳೀಯ ಪೋಲಿಸರು ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ಸೀತಪ್ಪ ಅವರನ್ನು ಯಲಹಂಕ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಆಸ್ಪತ್ರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಶವವನ್ನು ಸಾಗಿಸಲಾಗಿದೆ.
ಬಿಬಿಎಂಪಿ ಪಶುಪಾಲನಾ ವಿಭಾಗದಿಂದ ಘಟನೆ ನಡೆದ ಸ್ಥಳದಲ್ಲಿರುವ 16 ಬೀದಿನಾಯಿಗಳನ್ನು ಹಿಡಿದು ವೀಕ್ಷಣೆಗಾಗಿ ಯಲಹಂಕ ವಲಯದ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕೇಂದ್ರ(ಎಬಿಸಿ ಸೆಂಟರ್)ದಲ್ಲಿ ವೀಕ್ಷಣೆಗಾಗಿ ಇರಿಸಲಾಗಿದೆ. ಇನ್ನುಳಿದ ನಾಯಿಗಳನ್ನು ಹಿಡಿಯಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಮೃತಪಟ್ಟ ವ್ಯಕ್ತಿಯು ನಾಯಿ ಕಡಿತ/ದಾಳಿಯಿಂದ ಮರಣ ಹೊಂದಿರುವುದಾಗಿ ದೃಢಪಟ್ಟಲ್ಲಿ ಪಾಲಿಕೆಯ ವತಿಯಿಂದ ನಿಯಮಾನುಸಾರ ಪರಿಹಾರವನ್ನು ಕುಟುಂಬಸ್ಥರಿಗೆ ನೀಡಲಾಗುವುದು ಎಂದು ಬಿಬಿಎಂಪಿ ಹೇಳಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Cat: ಬೆಂಗಳೂರಲ್ಲಿ ಬೆಕ್ಕುಗಳ ಪ್ರೇಮ ಪ್ರಕರಣ - ಇತ್ಯರ್ಥಕ್ಕೆ ಪೊಲೀಸರೇ ಬರಬೇಕಾಯ್ತು, ವೈರಲ್ ಸುದ್ದಿ -
Bengaluru Rent Crisis: ಬೆಂಗಳೂರಲ್ಲಿ ಬಾಡಿಗೆ ಮನೆ ಡಿಮ್ಯಾಂಡ್ ಬಗ್ಗೆ ಯುವತಿ ವಿಡಿಯೋ ವೈರಲ್ -
ಬೆಂಗಳೂರು: ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದಿಂದ ರೈತರಿಗೆ ಉಚಿತ ಕಾಂಪೋಸ್ಟ್ ವಿತರಣೆ -
Bengaluru: ಬೆಂಗಳೂರು ತ್ಯಾಜ್ಯ ನಿರ್ವಹಣೆ: ಪ್ರತಿದಿನವೂ ವರದಿ ನೀಡಿಲು ಅಧಿಕಾರಿಗಳಿಗೆ ರಾಜೇಂದ್ರ ಚೋಳನ್ ಸೂಚನೆ -
ಬೆಂಗಳೂರು ಹೆಬ್ಬಾಳದ ಮೆಟ್ರೋ ಏಕೀಕೃತ ಸಾರಿಗೆ: 55 ಎಕರೆ ಭೂ ವಿವಾದ - ಸಿಬಿಐ ತನಿಖೆಗೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ -
Bengaluru Migration: ಬೆಂಗಳೂರಿಗೆ ನಾರ್ಥಿಗಳ ವಲಸೆಗೆ ಇದೇ ಕಾರಣ, ವೈರಲ್ ಪೋಸ್ಟ್ - ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.










Click it and Unblock the Notifications