ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಗೆ ಗೂಗಲ್ ನಮನ
ಬೆಂಗಳೂರು, ಏ.14: ಭಾರತದ ಸಂವಿಧಾನ ಶಿಲ್ಪಿ, ಆರ್ಥಿಕ ತಜ್ಞ, ಕಾನೂನು ಪಂಡಿತ, ಸಮಾಜ ಸುಧಾರಕ, ದೀನ ದಲಿತರ ದನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 124ನೇ ಜನ್ಮ ದಿನಾಚರಣೆಯನ್ನು ಸರ್ಚ್ ಇಂಜಿನ್ ದಿಗ್ಗಜ ಗೂಗಲ್ ಕೂಡಾ ವಿಭಿನ್ನವಾಗಿ ಆಚರಿಸುತ್ತಿದೆ. ಗೂಗಲ್ ಡೂಡ್ಲ್ ಮೂಲಕ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಲಾಗುತ್ತಿದೆ.
ಡಾ. ಬಿ.ಆರ್ ಅಂಬೇಡ್ಕರ್ ಅವರ 124ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳವಾರ(ಏ.14) ದೇಶದೆಲ್ಲೆಡೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ 'ಜೈ ಭೀಮ್' ಎಂಬ ಜಯಘೋಷ ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಗೂಗಲ್ ವಿಶಿಷ್ಟ ರೀತಿಯ ಡೂಡಲ್ ರಚಿಸಿ ನಮನ ಸಲ್ಲಿಸುತ್ತಿದೆ. [ಜಾತಿ ಮೀಸಲಾತಿ ನಿಷೇಧ ಅಸಾಧ್ಯ, ಏಕೆಂದರೆ?]

ಗೂಗಲ್ ಇಂಗ್ಲೀಷ್ ಅಕ್ಷರಗಳ ನಡುವೆ ಅಂಬೇಡ್ಕರ್ ಅವರ ಭಾವಚಿತ್ರ ಕಾಣಿಸಿಕೊಂಡಿದೆ. ಈ ಚಿತ್ರವನ್ನು ಕ್ಲಿಕ್ ಮಾಡಿದರೆ ಗೂಗಲ್ ಸರ್ಚ್ ಇಂಜಿನ್ B.R Ambedkar ಸರ್ಚ್ ಪುಟಕ್ಕೆ ನಿಮ್ಮನ್ನು ಕರೆದೊಯ್ಯುತ್ತದೆ. ಭಾರತ ರತ್ನ ಅಂಬೇಡ್ಕರ್ ಅವರ ಹೆಸರಿನಲ್ಲಿ ಡೂಡ್ಲ್ ರಚಿಸುವ ಮೂಲಕ ದೇಶದೆಲ್ಲೆಡೆ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಸಂಭ್ರಮಕ್ಕೆ ಇನ್ನಷ್ಟು ಮೆರಗು ತರಲಾಗಿದೆ. [ಜಾತಿ ಗಣತಿ: ಯಾವ ಜಾತಿಗೆ ಯಾವ ಕಾಲಂ]
ಖ್ಯಾತ ನಾಮರ ಹುಟ್ಟುಹಬ್ಬ, ಹಬ್ಬ ಹರಿದಿನ, ವಾರ್ಷಿಕೋತ್ಸವ ದಿನಗಳಲ್ಲಿ ಗೂಗಲ್ ಲೋಗೋವನ್ನು ಅಲಂಕರಿಸಿ ಪ್ರದರ್ಶಿಸಲಾಗುತ್ತದೆ. ಗೂಗಲ್ ಲೋಗೋವನ್ನು ಕಲಾತ್ಮಕವಾಗಿ ರೂಪಿಸುವುದಕ್ಕೆ ಡೂಡಲ್ಸ್ ಎನ್ನಲಾಗುತ್ತದೆ. ಪ್ರತಿ ವರ್ಷ ಆಯ್ದ ವಿಶೇಷ ಸಂದರ್ಭಕ್ಕಾಗಿ ಡೂಡ್ಲ್ ರಚಿಸಲು ಶಾಲಾ ಮಕ್ಕಳಿಗೆ ವಿವಿಧ ಹಂತದ ಸ್ಪರ್ಧೆ ಏರ್ಪಡಿಸಲಾಗುತ್ತದೆ.ವಿಜೇತ ಡೂಡ್ಲ್ ಗೂಗಲ್ ಇಂಡಿಯಾ ಪೇಜ್ ನಲ್ಲಿ ಕಾಣಿಸಿಕೊಳ್ಳಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications