ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗರಿಗೆ ಆಘಾತಕಾರಿ ಸುದ್ದಿ: ಗೂಗಲ್ RMZ ಕಂಪನಿಯಲ್ಲಿ ಕೊರೊನಾ!

|
Google Oneindia Kannada News

ಬೆಂಗಳೂರು, ಮಾರ್ಚ್ 13: ವಿಶ್ವದಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ವೈರಸ್ ಸೋಂಕು ಬೆಂಗಳೂರಿಗರನ್ನೂ ನಿದ್ದೆಗೆಡಿಸಿದೆ. ಸಿಲಿಕಾನ್ ಸಿಟಿಯಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Recommended Video

Google office Employee in Bengaluru tests positive for Coronavirus | Bengaluru | Oneindia Kannada

ಬೆಂಗಳೂರಿನಲ್ಲಿರುವ RMZ ಇನ್ಫಿನಿಟಿಯಲ್ಲಿರುವ Search Engine Giant ಗೂಗಲ್ ಕಂಪನಿಯ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ವಿದೇಶಗಳಲ್ಲಿ ಪ್ರಯಾಣ ಬೆಳೆಸಿ, ಮೊನ್ನೆಯಷ್ಟೇ ಬೆಂಗಳೂರಿಗೆ ವಾಪಸ್ ಆಗಿದ್ದ ಆ ಪ್ರತಿಷ್ಟಿತ ಕಂಪನಿಯ ಉದ್ಯೋಗಿಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಸಂಖ್ಯೆ 5ಕ್ಕೆ ಏರಿಕೆಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಸಂಖ್ಯೆ 5ಕ್ಕೆ ಏರಿಕೆ

ಆ ಮೂಲಕ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಆದ್ರೆ, ಅವಶ್ಯಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ತನ್ನ ಎಲ್ಲಾ ಉದ್ಯೋಗಿಗಳಿಗೆ ಕಂಪನಿಯ ಮುಖ್ಯಸ್ಥರು ಬರೆದಿರುವ ಈ-ಮೇಲ್ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿದೇಶದಿಂದ ಬಂದಿದ್ದ ಉದ್ಯೋಗಿಗೆ ಕೊರೊನಾ ಸೋಂಕು

ವಿದೇಶದಿಂದ ಬಂದಿದ್ದ ಉದ್ಯೋಗಿಗೆ ಕೊರೊನಾ ಸೋಂಕು

ಬೆಂಗಳೂರಿನಲ್ಲಿ ಇರುವ ಪ್ರತಿಷ್ಟಿತ Search Engine Giant ಗೂಗಲ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ವಿದೇಶಕ್ಕೆ ಪ್ರಯಾಣ ಬೆಳೆಸಿದ್ದ ಆ ಉದ್ಯೋಗಿ ವಾಪಸ್ ಆದ್ಮೇಲೆ ಮಾರ್ಚ್ 9 ರಂದು ಬೆಂಗಳೂರಿನ ಕಚೇರಿಗೆ ಆಗಮಿಸಿದ್ದರು.

ಪ್ರತ್ಯೇಕ ಚಿಕಿತ್ಸೆ

ಪ್ರತ್ಯೇಕ ಚಿಕಿತ್ಸೆ

ಬೆಂಗಳೂರಿನ ಗೂಗಲ್ ಕಚೇರಿಗೆ ವಾಪಸ್ ಆದ್ಮೇಲೆ, ಕೊರೊನಾ ಸೋಂಕಿನ ಲಕ್ಷಣಗಳು ಆ ಉದ್ಯೋಗಿಗೆ ಕಾಣಿಸಿಕೊಂಡಿದೆ. ಹೀಗಾಗಿ ಆ ಉದ್ಯೋಗಿ ಮನೆಗೆ ತೆರಳಿದ್ದಾರೆ. ಬಳಿಕ ಆಸ್ಪತ್ರೆಗೆ ಆ ಉದ್ಯೋಗಿ ದಾಖಲಾಗಿದ್ದಾರೆ. ಸದ್ಯಕ್ಕೆ ಆ ಉದ್ಯೋಗಿಯನ್ನ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಮಾಧಾನ ತಂದ ಹೊಸ ಸಂಶೋಧನೆ: ಸಕಲ ಜ್ವರಗಳಿಗೂ ಒಂದೇ ಲಸಿಕೆ!ಸಮಾಧಾನ ತಂದ ಹೊಸ ಸಂಶೋಧನೆ: ಸಕಲ ಜ್ವರಗಳಿಗೂ ಒಂದೇ ಲಸಿಕೆ!

ಇತರರಿಗೆ ವರ್ಕ್ ಫ್ರಮ್ ಹೋಮ್

ಇತರರಿಗೆ ವರ್ಕ್ ಫ್ರಮ್ ಹೋಮ್

ಉದ್ಯೋಗಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಎಚ್ಚೆತ್ತುಕೊಂಡ ಗೂಗಲ್, ಬೆಂಗಳೂರಿನ ತನ್ನ ಎಲ್ಲಾ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ) ಮಾಡಲು ಸೂಚಿಸಿದೆ. ಅತ್ತ ಇಡೀ ಆಫೀಸನ್ನೂ ಸ್ವಚ್ಛಗೊಳಿಸುವ ಕಾರ್ಯಕ್ಕೆ ಗೂಗಲ್ ಮುಂದಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು

ಅಮೇರಿಕಾ ಮತ್ತು ದುಬೈಗೆ ಹೋಗಿ ಬೆಂಗಳೂರಿಗೆ ವಾಪಸ್ ಆಗಿದ್ದ ಟೆಕ್ಕಿ, ಆತನ ಪತ್ನಿ, ಮಗಳು ಮತ್ತು ಸಹೋದ್ಯೋಗಿಗೆ ಕೊರೊನಾ ಸೋಂಕು ತಗುಲಿದ ಪ್ರಕರಣ ಬೆಂಗಳೂರಿನಲ್ಲಿ ಮೊದಲು ವರದಿ ಆಗಿತ್ತು. ನಿನ್ನೆಯಷ್ಟೇ ಗ್ರೀಸ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಇರುವುದು ತಿಳಿದು ಬಂದಿತ್ತು. ಇದೀಗ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಆರನೇ ಪ್ರಕರಣ ಪತ್ತೆ ಆಗಿದೆ.

ಕೊರೊನಾ ಕರಿನೆರಳು: ಎಚ್ಚರ ತಪ್ಪಿದ್ರೆ ಬೆಂಗಳೂರಿಗೆ ಅಪಾಯ ಕಟ್ಟಿಟ್ಟಬುತ್ತಿ!ಕೊರೊನಾ ಕರಿನೆರಳು: ಎಚ್ಚರ ತಪ್ಪಿದ್ರೆ ಬೆಂಗಳೂರಿಗೆ ಅಪಾಯ ಕಟ್ಟಿಟ್ಟಬುತ್ತಿ!

English summary
Search Engine Giant Google office Employee in Bengaluru tests positive for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X