ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ : ಎಂಎನ್ ರೆಡ್ಡಿ
ಬೆಂಗಳೂರು, ಜೂ.23 : ಬೆಂಗಳೂರಿನಲ್ಲಿ ಸರಗಳ್ಳರ ಹಾವಳಿ ತಪ್ಪಿಸಲು ಗೂಂಡಾ ಕಾಯ್ದೆ ಜಾರಿಗೊಳಿಸಲು ಪೊಲೀಸರು ನಿರ್ಧರಿಸಿದ್ದಾರೆ. ಸರಗಳ್ಳರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದರು.
ಮಂಗಳವಾರ ಆಗ್ನೇಯ ವಿಭಾಗದ ಪೊಲೀಸರು ಕಳೆದ 5 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿ ವಶಪಡಿಸಿಕೊಂಡ ಸುಮಾರು 7ಕೋಟಿ ರೂ. ಮೌಲ್ಯದ ವಸ್ತುಗಳನ್ನು ವೀಕ್ಷಿಸಿ ಮಾತನಾಡಿದ ಪೊಲೀಸ್ ಆಯುಕ್ತರು, ಸರಗಳ್ಳರ ವಿರುದ್ಧ ಶೀಘ್ರದಲ್ಲೇ ಗೂಂಡಾ ಕಾಯ್ದೆ ಜಾರಿಗೊಳಿಸುತ್ತೇವೆ ಎಂದರು. [1 ಗಂಟೆಯಲ್ಲಿ 10 ಕಡೆ ಸರಗಳ್ಳತನ]

ಸರಗಳ್ಳರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಎಲ್ಲಾ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಲಾಗಿದೆ. ಶೀಘ್ರದಲ್ಲೇ ಇದು ಜಾರಿಗೆ ಬರಲಿದೆ ಎಂದು ಹೇಳಿದರು. ಸ್ಥಳೀಯರು ಮತ್ತು ಹೊರ ರಾಜ್ಯಗಳಿಂದ ಬಂದು ಸರಗಳ್ಳತನ ಮಾಡುವವರ ವಿರುದ್ಧ ಪೊಲೀಸರು ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು. [ಸರಗಳ್ಳತನ: ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು]
ಸರಗಳ್ಳತನ ಹೆಚ್ಚಾಗಿದೆ : ಜೂನ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಸರಗಳ್ಳತನ ಹೆಚ್ಚಾಗಿದೆ. ಜೂನ್ 11ರ ಗುರುವಾರ 1 ಗಂಟೆಯ ಅವಧಿಯಲ್ಲಿ 10 ಕಡೆ ಸರಗಳ್ಳತನ ನಡೆದಿತ್ತು. ಜೂನ್ 12ರಂದು 4 ಕಡೆ ಸರಗಳ್ಳತನ ವಾಗಿತ್ತು. ಪಲ್ಸರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ವೆಸಗುವುದು ಸಿಸಿಟಿವಿಯಲ್ಲಿ ದಾಖಲಾಗಿತ್ತು. [ಏನಿದು ಗೂಂಡಾ ಕಾಯ್ದೆ?]
ಬೆಂಗಳೂರಿನಲ್ಲಿ ನಡೆಯುತ್ತಿರುವ ಸರಗಳ್ಳತನದ ಹಿಂದೆ ಇರಾನಿ ಗ್ಯಾಂಗ್ ಕೈವಾಡವಿದೆ ಎಂದು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಳಗಾವಿಗೆ ತೆರಳಿ ಅಲ್ಲಿನ ಪೊಲೀಸರ ವಶದಲ್ಲಿರುವ ಇರಾನಿ ಗ್ಯಾಂಗ್‌ನ ಸದಸ್ಯ ಮೊಹಮದ್ ಇರಾನಿಯನ್ನು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು.
ಅಂದಹಾಗೆ ಮಂಗಳವಾರ ಬೆಂಗಳೂರಿನಲ್ಲಿ ಎರಡು ಕಡೆ ಸರಗಳ್ಳತನ ನಡೆದಿದೆ. ಬನಶಂಕರಿ ಮತ್ತು ಗಂಗಮ್ಮನ ಗುಡಿ ಸಮೀಪ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸರ ದೋಚಿ ಪರಾರಿಯಾಗಿದ್ದಾರೆ. ಬನಶಂಕರಿ 2ನೇ ಹಂತದಲ್ಲಿ ನೇಹಾ ಎಂಬುವವರ 30 ಗ್ರಾಂ ಚಿನ್ನದ ಸರವನ್ನು ದೋಚಲಾಗಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications