ತುಮಕೂರು- ಯಶವಂತಪುರ ರಸ್ತೆ ಟ್ರಾಫಿಕ್ ಜಾಮ್‌ಗೆ ಶೀಘ್ರವೇ ಮುಕ್ತಿ

ಬೆಂಗಳೂರು, ಫೆ. 07: ಕಾಮಗಾರಿ ಪ್ರಯುಕ್ತ ಸ್ಥಗಿತಗೊಂಡಿರುವ ಗೊರಗುಂಟೆಪಾಳ್ಯ- ಚಿಕ್ಕಬಿದರಕಲ್ಲು ನಡುವಿನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಶೀಘ್ರದಲ್ಲಿಯೇ ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಅತಿ ಶೀಘ್ರದಲ್ಲಿಯೇ ತುಮಕೂರು ರಸ್ತೆಯ ವಾಹನ ದಟ್ಟಣೆಗೆ ಬ್ರೇಕ್ ಬೀಳಲಿದೆ.

ಪೀಣ್ಯ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಆರಂಭವಾಗಿದ್ದು ಕಳೆದ 48 ತಾಸು ಪರೀಕ್ಷಾರ್ಥ ವಾಹನ ಸಂಚಾರ ಮಾಡಲಾಗಿದೆ. ಗೊರಗುಂಟೆ ಪಾಳ್ಯದಿಂದ ಚಿಕ್ಕಬಿದರಕಲ್ಲು ವರೆಗೆ ಮೇಲ್ಸೇತುವೆ ಪರೀಕ್ಷಿಸಿದ್ದು, ಕೆಲವೇ ದಿನಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.

Goraguntepalya and Chikkabidarakallu Flyover road to open for vehicle traffic soon

ಮೇಲ್ಸೇತುವೆ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಪೀಣ್ಯ ಮೇಲ್ಸೇತುವೆ ರಸ್ತೆ ಬಂದ್ ಮಾಡಲಾಗಿತ್ತು. ಆದರೆ, ನಿಧಾನಗತಿಯ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ತ್ವರಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಪ್ರಾಧಿಕಾರ ಪರೀಕ್ಷಾರ್ಥ ವಾಹನ ಸಂಚಾರ ಮಾಡಿದೆ. ಕೆಲವೇ ದಿನಗಳಲ್ಲಿ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

Goraguntepalya and Chikkabidarakallu Flyover road to open for vehicle traffic soon

ವಾಹನ ದಟ್ಟಣೆ:

ಬೆಂಗಳೂರು ಮತ್ತು ತುಮಕೂರು ರಸ್ತೆಗೆ ಇರುವ ಏಕೈಕ ಮಾರ್ಗ ಪೀಣ್ಯ ರಸ್ತೆ. ವಾಹನ ದಟ್ಟಣೆ ತಪ್ಪಿಸುವ ಸಲುವಾಗಿ ಗೊರಗುಂಟೆ ಪಾಳ್ಯದಿಂದ ಚಿಕ್ಕಬಿದರಕಲ್ಲುವರೆಗೂ ಮೇಲ್ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ, ಮೇಲ್ಸೇತುವೆಯಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಇದರಿಂದ ತುಮಕೂರು ರಸ್ತೆಯಲ್ಲಿ ಪ್ರತಿ ನಿತ್ಯ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಸಂಚಾರ ನಿರ್ವವಣೆ ಮಾಡಲು ಸಂಚಾರ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದೀಗ ಮೇಲ್ಸೇತುವೆ ನಿರ್ವಹಣೆ ಕಾಮಗಾರಿ ಪೂರ್ಣಗಳಿಸಿದ್ದು, ಒಂದು ವಾರದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಸುವ ಸಾಧ್ಯತೆಯಿದೆ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

Recommended Video

      ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜಿನಲ್ಲಿ ಕೇಸರಿ ಶಾಲು vs ನೀಲಿ ಶಾಲು

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+