Tunnel Road Construction: ಬೆಂಗಳೂರಿನ ಈ ಭಾಗದಲ್ಲಿ 40 ಕಿ.ಮೀ ಉದ್ದದ ಸುರಂಗ ರಸ್ತೆ; ವೆಚ್ಚ ಹಾಗೂ ಉಪಯೋಗಗಳೇನು?
ಬೆಂಗಳೂರು, ಡಿಸೆಂಬರ್, 08: ರಾಜ್ಯ ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಲಿದೆ. ನಗರ ವಿಸ್ತರಣೆಯದಂತೆಲ್ಲ ಅಭಿವೃದ್ಧಿ ಕಾರ್ಯಗಳು ನಡೆಯುತ್ತಲೇ ಇರುತ್ತಲೇ ಇವೆ. ಹಾಗೆಯೇ ಇದೀಗ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ 40 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿದೆ. ಹಾಗಾದರೆ, ಇದರ ವೆಚ್ಚ ಎಷ್ಟು ಹಾಗೂ ಉಪಯೋಗಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ 40 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದಕ್ಕೆ ಬಿಬಿಎಂಪಿ ಬರೋಬ್ಬರಿ 19,000 ಕೋಟಿ ರೂಪಾಯಿ ಸಾಲ ಪಡೆಯಲು ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಇದನ್ನು ನಿಯಂತ್ರಣ ಮಾಡಲು ಬಿಬಿಎಂಪಿ ವಿವಿಧ ರೀತಿಯ ಪ್ಲಾನ್‌ಗಳನ್ನು ಮಾಡುತ್ತಲೇ ಇದ್ದು, 40 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿದೆ. ಈ ಯೋಜನೆಗೆ ಹಣವನ್ನು ಸಾಲ ಪಡೆಯಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ 40 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಬಿಬಿಎಂಪಿ೦ ಮುಕ್ತ ಮಾರುಕಟ್ಟೆಯಲ್ಲಿ 19,000 ಕೋಟಿ ರೂಪಾಯಿಗಳ ಸಾಲ ಪಡೆಯಲು ಮುಂದಾಗಿದೆ. ಭಾರೀ ವಿರೋಧದ ನಡುವೆಯೂ ಸರ್ಕಾರ ಈ ಯೋಜನೆಗೆ ಆಸಕ್ತಿವಹಿಸಿದೆ.
ಈಗಾಗಲೇ ನಗರದಲ್ಲಿ 73 ಕಿ.ಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ 27,000 ಕೋಟಿ ರೂಪಾಯಿ ಸಾಲ ಪಡೆಯಲು ಬಿಬಿಎಂಪಿಗೆ ಗ್ಯಾರಂಟಿ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
ಈ ಎರಡೂ ಯೋಜನೆಗಳಿಗೆ ಬಿಬಿಎಂಪಿ 46,000 ಕೋಟಿ ರೂಪಾಯಿ ಸಾಲ ಪಡೆಯಲು ಮುಂದಾಗಿದೆ. ನಗರ ಮೂಲಭೂತ ಸೌಕರ್ಯಗಳಿಗಾಗಿ ಬಿಬಿಎಂಪಿ ಇತ್ತೀಚಿನ ವರ್ಷಗಳಲ್ಲಿ ಇದು ಅತೀ ದೊಡ್ಡ ಸಾಲದ ಮೊತ್ತ ಎಂದು ಹೇಳಲಾಗುತ್ತಿದೆ.
ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಖಾಸಗಿ ಬಂಡವಾಳ ಹರಿದುಬರುತ್ತಿಲ್ಲ. ಖಾಸಗಿ ಸಂಸ್ಥೆಗಳು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೆ ಈಗಾಗಲೇ ಎರಡು ಬಾರಿ ಜಾಗತಿಕ ಟೆಂಡರ್ ಆಹ್ವಾನಿಸಲಾಗಿತ್ತು. ಆದರೂ ಯಾವುದೇ ಟೆಂಡರ್ ಸಲ್ಲಿಕೆ ಆಗಿಲ್ಲ ಎಂದು ಪಾಲಿಕೆ ಮೂಲಗಳಿಂದ ತಿಳಿದುಬಂದಿದೆ.
40 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗದಲ್ಲಿ ಹೆಬ್ಬಾಳ ಮೇಲ್ಸೇತುವೆ- ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗಿನ 18 ಕಿಲೋ ಮೀಟರ್ ಮಾರ್ಗವು ಉತ್ತರ-ದಕ್ಷಿಣ ಕಾರಿಡಾರ್ ಸಂಪರ್ಕಿಸಲಿದೆ. 22 ಕಿಲೋ ಮೀಟರ್ ಉದ್ದದ ಮಾರ್ಗವು ಪೂರ್ವ ಪಶ್ಚಿಮ ಭಾಗವನ್ನು ಸಂಪರ್ಕಿಸಲಿದೆ. ಪೂರ್ವದಲ್ಲಿ ಕೆ.ಆರ್.ಪುರ ಮತ್ತು ಪಶ್ಚಿಮ ಭಾಗದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸಲಿದೆ.
ಸುರಂಗ ರಸ್ತೆಗೆ ಯೋಜನೆಗೆ ಖಾತ್ರಿ ನೀಡಲು ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಈ ಯೋಜನೆಗೆ ಒಪ್ಪಿಗೆ ಪಡೆದುಕೊಳ್ಳಲು ಈ ವಿಷಯ ಕುರಿತು ಶೀಘ್ರವೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಳೆದ ಆಗಸ್ಟ್‌ನಲ್ಲಿಯೇ ಸಚಿವ ಸಂಪುಟ ಈ ಯೋಜನೆಗೆ ಒಪ್ಪಿಗೆ ನೀಡಿತ್ತು. ಆದರೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಆಧಾರದಲ್ಲಿ ಸುರಂಗ ರಸ್ತೆ ಯೋಜನೆಯನ್ನು ಕೈಗೆತ್ತಿಗೊಳ್ಳಲು ಸಾಧ್ಯವೇ ಎಂದು ಪರಿಶೀಲಿಸಲು ನಿರ್ದೇಶನ ನೀಡಿದೆ. ಮೂಲಗಳ ಪ್ರಕಾರ ಸಾಲ ಪಡೆದು ಸುರಂಗ ರಸ್ತೆಯನ್ನು ನಿರ್ಮಿಸಲು ಬಿಬಿಎಂಪಿ ಆಸಕ್ತಿ ತೋರಿಸಿದೆ ಎಂದು ತಿಳಿದುಬಂದಿದೆ. ಬಿಬಿಎಂಪಿ ಮೂಲಗಳ ಪ್ರಕಾರ ಡಿಪಿಆರ್ ಸಿದ್ಧವಾಗಿದೆ. ಆದರೆ, ಸರ್ಕಾರ 6 ಪಥಗಳ ಅವಳಿ ಸುರಂಗ ಮಾರ್ಗವನ್ನೇ ನಿರ್ಮಾಣ ಮಾಡಲ ಮುಂದಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications