ದಾದಿಗೆ ಸೋಂಕು; ಆತಂಕದಲ್ಲಿ ಸರ್ಕಾರಿ ಡೆಂಟಲ್ ಕಾಲೇಜ್ ಸಿಬ್ಬಂದಿ!

ಬೆಂಗಳೂರು, ಜೂ. 21: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ಸರ್ಕಾರಿ ದಂತ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಆ ಬಳಿಕ ಇತರ ಸಿಬ್ಬಂದಿ ಆತಂಕದಲ್ಲಿದ್ದಾರೆ. ಕೋವಿಡ್ ಆಸ್ಪತ್ರೆಯಾಗಿ ಮಾರ್ಪಟ್ಟಿರುವ ವಿಕ್ಟೋರಿಯಾ ಆಸ್ಪತ್ರೆ ಕ್ಯಾಂಪಸ್‌ನಲ್ಲಿರುವ ಸರ್ಕಾರಿ ದಂತ ಮಹಾವಿದ್ಯಾಲಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೊರೊನಾ ವಾರಿಯರ್ ದಾದಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ.

Recommended Video

      ಮೋದಿಗಿಂತ ಮೊದಲೇ ಚೀನಾ ವಿರುದ್ಧ ತೊಡೆತಟ್ಟಿದ್ದ ಕುಮಾರಸ್ವಾಮಿ|HD KumarSwamy |Narendra Modi | Oneindia Kannada

      ನಂತರ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ದಾದಿಯರು ಹಾಗೂ ಇತರ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. ಇದೀಗ ದ್ವಿತೀಯ ಹಂತದ ಸಂಪರ್ಕ ಹೊಂದಿದ್ದವರನ್ನು ಪತ್ತೆ ಮಾಡಲಾಗುತ್ತಿದೆ. ಕೋವಿಡ್ ಪರೀಕ್ಷಾ ವರದಿ ಬರುವವರೆಗೆ ಸೋಂಕಿತ ಕೊರೊನಾ ವಾರಿಯರ್ ದಾದಿ ಆಸ್ಪತ್ರೆಯಲ್ಲಿಯೇ ಕರ್ತವ್ಯ ನಿರ್ವಹಿಸಿದ್ದಾರೆ. ಗಂಟಲಿನ ದ್ರವ ಪರೀಕ್ಷೆಯ ವರದಿಯಲ್ಲಿ ಅವರಿಗೆ ಸೋಂಕಿರುವುದು ದೃಢವಾಗುತ್ತಿದ್ದಂತೆಯೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

      ವಿಪರ್ಯಾಸ ಎಂದರೆ ಆಸ್ಪತ್ರೆಯ ದಾದಿಗೆ ಕೊರೊನಾ ವೈರಸ್‌ ದೃಢಪಟ್ಟರೂ ಕಟ್ಟಡವನ್ನು ಸ್ಯಾನಿಟೈಸ್ ಮಾಡುವ ಗೋಜಿಗೆ ಸಂಬಂಧಿಸಿದವರು ಹೋಗಿಲ್ಲ. ಕಾಲೇಜಿನ ಆಡಳಿತ ಮಂಡಳಿ, ಡೀನ್ ಅವರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಆಸ್ಪತ್ರೆ ಸಿಬ್ಬಂದಿ ಮಾಹಿತಿ ಕೊಟ್ಟಿದ್ದಾರೆ. ಇದರಿಂದಾಗಿ ಇತರ ಸಿಬ್ಬಂದಿಯೂ ಆತಂಕದಿಂದ ಕೆಲಸ ಮಾಡುತ್ತಿದ್ದಾರೆ. ಕಟ್ಟಡವನ್ನು ಕನಿಷ್ಠ ಸ್ಯಾನಿಟೈಸ್ ಮಾಡಲು ಏನು ತೊಂದರೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಇಡೀ ಕಟ್ಟಡವನ್ನು ತಕ್ಷಣಕ್ಕೆ ಸ್ಯಾನಿಟೈಸ್ ಮಾಡುವ ಮೂಲಕ ಸಿಬ್ಬಂದಿ ಆರೋಗ್ಯ ರಕ್ಷಣೆಗೆ ಬೆಂಗಳೂರಿನ ಸರ್ಕಾರಿ ದಂತ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಮುಂದಾಗಬೇಕಿದೆ.

      government dental college staff worried after nurse confirmed coronavirus infection

      ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 94 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಈವರೆಗೆ ಸೋಂಕಿಗೆ 61 ಜನರು ಬಲಿಯಾಗಿದ್ದು, 1,076 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಸಹಜವಾಗಿಯೆ ಆಸ್ಪತ್ರೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+