Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ 'ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್', 495 ಎಕರೆ ಭೂ ಸ್ವಾಧೀನ ಅಪ್ಡೇಟ್ಸ್, ರೈತರಿಗೆ ಗುಡ್‌ನ್ಯೂಸ್

ಬೆಂಗಳೂರು, ಜೂನ್ 24: ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕೆ, ವಿವಿಧ ಉತ್ಪನ್ನ, ಉಪಕರಣಗಳ ತಯಾರಿಕೆ ಘಟಕೆ ಸ್ಥಾಪನೆಗೆ ಹೂಡಿಕೆ ಹರಿದು ಬರುತ್ತಿದೆ. ಇದೀಗ ಉದ್ದೇಶಿತ 'ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್' ಅಭಿವೃದ್ಧಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲ್ಲೂಕಿನ ಕೆಲವು ಗ್ರಾಮಸ್ಥರಿಗೆ ಕರ್ನಾಟಕ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಗುಡ್ ನ್ಯೂಸ್ ನೀಡಿದ್ದಾರೆ.

ಇಂದು ಮಂಗಳವಾರ ವಿಧಾನಸೌದದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ.ಎಚ್ ಮುನಿಯಪ್ಪ ಅವರ ಜತೆ ಮಹತ್ವದ ಸಭೆ ನಡೆಸಿದರು. ಈ ವೇಳೆ 'ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗಾಗಿ ಉದ್ದೇಶಿಸಿದ್ದ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Government Drops Land Acquisition for 495 Acres in Devanahalli Villages for Aerospace Park

ಅಷ್ಟೇ ಅಲ್ಲದೇ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರ್ಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮಾಹಿತಿ ನೀಡಿದರು.

ಭೂಸ್ವಾಧೀನಕ್ಕೆ 4 ವರ್ಷಗಳ ಹಿಂದೆ ಅಧಿಸೂಚನೆ

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಯೋಜನೆ, ಭೂಮಿ ಸ್ವಾಧಿನ ಬಗ್ಗೆ ವಿವರಿಸಿದರು. ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು.

ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ ಎಂದು ವಿವರಿಸಿದರು.

ಸರ್ಕಾರದಿಂದ 1,232 ಎಕರೆ ಭೂಸ್ವಾಧೀನ

ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು.

ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು. ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು. ರೈತರ ನೋವು ನಮಗೆ ಅರ್ಥವಾಗುತ್ತದೆ ಎಂದರು. ಸಚಿವ ಮುನಿಯಪ್ಪ ಅವರು ಪ್ರತಿಭಟನೆ ಕೈ ಬಿಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಎಲ್ಲಿಯೂ ಈ ರೀತಿ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು ಎಂದು ತಿಳಿ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+