• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದಾದ್ಯಂತ ಎಣ್ಣೆ ಅಂಗಡಿ ಓಪನ್: ಷರತ್ತುಗಳು ಅನ್ವಯ!

|

ಬೆಂಗಳೂರು, ಮೇ.02: ಭಾರತ ಮೂರನೇ ಅವಧಿಯ ಲಾಕ್ ಡೌನ್ ಮುಂದುವರಿಕೆ ನಡುವೆಯೂ ಕರ್ನಾಟಕದಲ್ಲಿ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆ. ಆದರೆ ಎಲ್ಲ ಮದ್ಯದ ಅಂಗಡಿಗಳಲ್ಲೂ ಮದ್ಯ ಸಿಗುವುದಿಲ್ಲ. ಅದಕ್ಕಾಗಿ ಅಬಕಾರಿ ಇಲಾಖೆಯು ಕೆಲವು ಷರತ್ತುಗಳನ್ನು ವಿಧಿಸಿದೆ.
ರಾಜ್ಯದಲ್ಲಿ ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲ್ಪಟ್ಟಿರುವ ಪ್ರದೇಶಗಳನ್ನು ಹೊರತು ಪಡಿಸಿ ಎಲ್ಲ ವಲಯಗಳಲ್ಲೂ ಮೇ.04ರಿಂದ ಮದ್ಯದ ಅಂಗಡಿ ತೆರೆಯಲು ರಾಜ್ಯ ಅಬಕಾರಿ ಇಲಾಖೆಯು ಅನುಮತಿ ನೀಡಿದೆ. ಆದರೆ ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ.

ಭಾರತದಲ್ಲೇ ಅತಿಹೆಚ್ಚು ಸೋಂಕಿತರುಳ್ಳ ರಾಜ್ಯದಲ್ಲಿ ಮಹತ್ವದ ಆದೇಶ!
ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ರಾಜ್ಯ ಅಬಕಾರಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ಕೇಂದ್ರದ ಮಾರ್ಗಸೂಚಿ ಪಾಲನೆ ಕಡ್ಡಾಯ:
ಮದ್ಯ ಮಾರಾಟದ ವೇಳೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದಂತೆ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯವಾಗಿದೆ. ಅಲ್ಲದೇ ಸಾಮಾಜಿಕ ಅಂತರ ಪಾಲಿಸುವುದು ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೇ ಮದ್ಯವನ್ನು ಪಾರ್ಸಲ್ ಮೂಲಕ ಖರೀದಿಸುವುದಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ಮದ್ಯ ಮಾರಾಟಕ್ಕೆ ವಿಧಿಸಿರುವ ಷರತ್ತುಗಳು:
- ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಘೋಷಿಸಿರುವ ಕಂಟೇನ್ಮೆಂಟ್ ಝೋನ್ ಗಳಲ್ಲಿ ಯಾವುದೇ ಮದ್ಯ ಮಾರಾಟ ಸನ್ನದ್ದು ಕಾರ್ಯ ನಿರ್ವಹಿಸುವಂತಿಲ್ಲ.
- ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಘೋಷಿಸಿರುವ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮಾತ್ರವೇ ಸಿಎಲ್-2 ಮತ್ತು ಸಿಎಲ್ 11-ಸಿ(ಎಂಎಸ್ಐಎಲ್ ಮದ್ಯ ಮಳಿಗೆಗಳು)ಗಳನ್ನು ತೆರೆದು ಮದ್ಯ ಮಾರಾಟ ಮಾಡಲು ಹಾಗೂ ಕೆಎಸ್ ಬಿಸಿಎಲ್ ಡಿಪೋಗಳು ಮಾತ್ರ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ.
- ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸುವುದು
- ಒಂದು ಬಾರಿಗೆ ಕೇವಲ 5 ಜನ ಗ್ರಾಹಕರು ಮಾತ್ರ ಅಂಗಡಿ ಪ್ರವೇಶಿಸಲು ಅನುಮತಿ ನೀಡಿದ್ದು, 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ
- ಮದ್ಯ ಮಾರಾಟ ಮಾಡುವ ಸನ್ನದಿನಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರು ಮಾಸ್ಕ್ ಧರಿಸುವುದು ಕಡ್ಡಾಯ. ಸ್ಯಾನಿಟೈಸರ್ ಗಳನ್ನು ಬಳಸುವುದು ಕಡ್ಡಾಯ.
- ಕೇವಲ ಸ್ಟಾಂಡ್ ಅಲೋನ್ ಸಿಎಂಲ್-2 ಹಾಗೂ ಸಿಎಲ್ 11-ಸಿ ಸನ್ನದುಗಳನ್ನು ಮಾತ್ರ ಕಾರ್ಯನಿರ್ವಹಿಸುವುದು. ಮಾಲ್ ಗಳು ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ಸದರಿ ಸನ್ನದುಗಳು ಇದ್ದಲ್ಲಿ ಈ ಅನುಮತಿ ಅನ್ವಯವಾಗುವುದಿಲ್ಲ
- ಕೇಂದ್ರ ಸರ್ಕಾರದ ಈ ನಿಮಯಗಳನ್ನು ಉಲ್ಲಂಘಿಸಿದ್ದಲ್ಲಿ ಮದ್ಯದ ಅಂಗಡಿಗಳಿಗೆ ನೀಡಿದ ಲೈಸೆನ್ಸ್ ರದ್ದುಪಡಿಸುವುದರ ಜೊತೆಗೆ ಅಂಗಡಿಗಳನ್ನು ಬಂದ್ ಮಾಡಿಸಲಾಗುತ್ತದೆ.

English summary
Government Give Permission To Open Liquor Store In Karnataka From May.04
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X