• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೆಡ್ಡಿ ಗಾಗಿ ಸಿಸಿಬಿ ತಲಾಶ್‌ನಲ್ಲಿ ಸರ್ಕಾರದ ಪಾತ್ರ ಇಲ್ಲ: ಡಿ.ಕೆ.ಶಿವಕುಮಾರ್

|

ಬೆಂಗಳೂರು, ನವೆಂಬರ್ 08: ಜನಾರ್ದನ ರೆಡ್ಡಿ ವಿರುದ್ಧ ಸಿಸಿಬಿ ಪೊಲೀಸರು ನಡೆಸುತ್ತಿರುವ ತನಿಖೆ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪ ಅಥವಾ ಪ್ರಭಾವ ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದರು, ಕಾನೂನು ಪ್ರಕಾರ ಏನು ಕ್ರಮ ಆಗಬೇಕಿದೆಯೋ ಅದು ಆಗಿಯೇ ತೀರುತ್ತದೆ ಎಂದು ಅವರು ಹೇಳಿದ್ದಾರೆ.

ಆಂಬಿಡೆಂಟ್‌ಗೂ ನನಗೂ ಯಾವುದೇ ಸಂಬಂಧವಿಲ್ಲ: ರಾಮಲಿಂಗಾರೆಡ್ಡಿ

ಆಂಬಿಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚ ಪಡೆದ ಮತ್ತು ನೀಡಿದ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಆರೋಪಿ ಆಗಿದ್ದು, ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿಗಾಗಿ ಬಲೆ ಬೀಸಿದ್ದಾರೆ. ಆದರೆ ಅವರು ಹೈದರಾಬಾದ್‌ನಲ್ಲಿ ಅಡಗಿದ್ದಾರೆ ಎನ್ನಲಾಗಿದೆ.

ವಂಚನೆ ಕೇಸ್ : ಇಷ್ಟಕ್ಕೂ ಗಾಲಿ ಜನಾರ್ದನ ರೆಡ್ಡಿ ಬಂಧನದ ಅಗತ್ಯವೇನು?

ಟಿಪ್ಪು ಜಯಂತಿ ವಿವಾದದ ಸಂಬಂದವೂ ಇದೇ ವೇಳೆಯಲ್ಲಿ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಯು ರಾಜಕೀಯ ದುರುದ್ದೇಶದಿಂದ ಟಿಪ್ಪು ಜಯಂತಿಗೆ ವಿರೋಧ ಮಾಡುತ್ತಿದೆ ಎಂದರು.

ಜನಾರ್ದನ ರೆಡ್ಡಿ ಪ್ರಕರಣ: ಬಿಜೆಪಿ ನಾಯಕರ ಬಾಯಿಗೆ ಹೈಕಮಾಂಡ್ ಬೀಗ

ಟಿಪ್ಪು ಸುಲ್ತಾನನಿಗೆ ಭವ್ಯ ಇತಿಹಾಸ ಇದೆ, ಟಿಪ್ಪು ಜಯಂತಿ ಆಚರಿಸುವ ಸರ್ಕಾರದ ನಿರ್ಧಾರ ಸಮರ್ಪಕವಾಗಿಯೇ ಇದೆ. ಟಿಪ್ಪು ಜಯಂತಿಯನ್ನು ವಿರೋಧಿಸುವ ಮೂಲಕ ಬಿಜೆಪಿಯು ಹಿಂದೂ ಹಾಗೂ ಹಿಂದುಳಿದ ಸಮುದಾಯದ ಮಧ್ಯೆ ಬಿರುಕು ಮೂಡಿಸುವ ಯತ್ನ ಮಾಡುತ್ತಿದೆ ಎಂದು ಅವರು ಹೇಳಿದರು.

English summary
The government has nothing to do with this type of investigation. We don't want to interfere as he is a BJP leader says minister DK Shivakumar about Janardhan Reddy case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X