ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಜೂನ್ 21ರವರೆಗೂ 144 ಸೆಕ್ಷನ್ ಜಾರಿ

|
Google Oneindia Kannada News

ನವದೆಹಲಿ, ಜೂನ್ 15: ಬೆಂಗಳೂರಿನಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿರ್ಬಂಧಗಳನ್ನು ಮುಂದುವರೆಸಲು ಮಂಗಳವಾರ ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಿಆರ್‌ಪಿಸಿ ಸೆಕ್ಷನ್ 144 (ಕೆಲವು ಉದ್ದೇಶಿತ ಪ್ರದೇಶಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸೇರುವುದು ನಿಷೇಧ) ಜೂನ್ 21ರ ಮಧ್ಯರಾತ್ರಿವರೆಗೂ ಜಾರಿಯಲ್ಲಿರುತ್ತದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಹೊರತುಪಡಿಸಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಜೂನ್ 21ರಿಂದ 2ನೇ ಹಂತದ ಲಾಕ್‌ಡೌನ್ ಸಡಿಲಿಕೆ: ಏನಿರುತ್ತೆ?, ಏನಿರಲ್ಲ?ಜೂನ್ 21ರಿಂದ 2ನೇ ಹಂತದ ಲಾಕ್‌ಡೌನ್ ಸಡಿಲಿಕೆ: ಏನಿರುತ್ತೆ?, ಏನಿರಲ್ಲ?

ಜೂನ್ 14ರಂದು ಲಾಕ್‌ಡೌನ್ ಸಡಿಲಿಕೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿತ್ತು. ಒಂದು ತಿಂಗಳ ನಂತರ 19 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಇದ್ದಕ್ಕಿದ್ದಂತೆ ನಗರಕ್ಕೆ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Government Imposes Section 144 To Curb People Movements

ಇದರೊಂದಿಗೆ ದೈನಂದಿನ ಕೋವಿಡ್ ಕರ್ಫ್ಯೂ ಸಂಜೆ 7ರಿಂದ ಬೆಳಿಗ್ಗೆ 5ರವರೆಗೆ ಮತ್ತು ವಾರಾಂತ್ಯ ಕರ್ಫ್ಯೂ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಮುಂದುವರೆಯುತ್ತದೆ.

Recommended Video

ನಮ್ ಹೊಟ್ಟೆ ತುಂಬಿಲ್ಲ ಅಂದ್ರು ಗಾಡಿ ಹೊಟ್ಟೆ ತುಂಬಿಸಬೇಕು | Oneindia Kannada

ರಾಜ್ಯದಲ್ಲಿ ಕೊರೊನಾ ಹರಡುವಿಕೆ ತಡೆಗೆ ಏಪ್ರಿಲ್ 29ರಿಂದ ಲಾಕ್‌ಡೌನ್ ಜಾರಿ ಮಾಡಲಾಗಿತ್ತು.

English summary
Karnataka government on Tuesday decided to extend restrictions under section 144 in Bengaluru till June 21
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X