ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳಾ ಮೀಸಲಾತಿ ಶೇ.30 ರಿಂದ 33ಕ್ಕೆ ಏರಿಕೆ

By Vanitha
|
Google Oneindia Kannada News

ಬೆಂಗಳೂರು, ಅಕ್ಟೋಬರ್, 08 : ನಾನಾ ಕ್ಷೇತ್ರದಲ್ಲಿ ಮಹಿಳಾ ಸಹಭಾಗಿತ್ವವನ್ನು ಹೆಚ್ಚಿಸಲು ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ ಮಹಿಳಾ ಮೀಸಲಾತಿ ಪ್ರಮಾಣವನ್ನು 30% ರಿಂದ 33% ಕ್ಕೆ ಏರಿಸಿದ್ದು ರಾಜ್ಯ ಸರ್ಕಾರ ತನ್ನ ಆದೇಶ ಪತ್ರದಲ್ಲಿ ನಿರ್ಧಾರ ಪ್ರಕಟಿಸಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಿಸಿದ್ದ ಮಾಲಿಕಯ್ಯ ಗುತ್ತೇದಾರ್ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಕ್ಟೋಬರ್ 8ರ ಬುಧವಾರದಂದು ಸಲ್ಲಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಮಿತಿಯ ಶಿಫಾರಸ್ಸನ್ನು ಜಾರಿ ಮಾಡಿದೆ.[ಮಹಿಳೆಯರಿಗೆ ಮೀಸಲಾತಿ ಯಾಕೆ ಬೇಕು?]

Government increase women reservation from 30 to 33

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒತ್ತಾಯಕ್ಕೆ ಮಣಿದ ಸರ್ಕಾರ ಸರ್ಕಾರಿ ಉದ್ಯೋಗದಲ್ಲಿಯೂ ಮಹಿಳಾ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದು, ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಇನ್ನಷ್ಟು ಪ್ರೋತ್ಸಾಹಿಸಿದೆ. ಸುಮಾರು ದಿನಗಳಿಂದ ಮಹಿಳಾ ಮೀಸಲಾತಿ ಹೆಚ್ಚಳದ ಕೂಗಿಗೆ ಇದೀಗ ತೆರೆ ಬಿದ್ದಂತಾಗಿದೆ.

ಒಟ್ಟಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಘನತೆ ಹೆಚ್ಚಿಸಿಕೊಳ್ಳಲು ಹಾತೊರೆಯುತ್ತಿರುವ ಮಹಿಳೆಯರಿಗೆ ರಾಜ್ಯಸರ್ಕಾರ ದಸರಾ ಹಬ್ಬದ ಪ್ರಯುಕ್ತ ಬಂಪರ್ ಕೊಡುಗೆ ನೀಡಿದ್ದು, ಮಹಿಳಾ ಉದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆ ಇದೆ.

English summary
Government has increased women reservation from 30% to 33% on Thursday October 8th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X