ಬಿಪಿಎಲ್ ಪಡಿತರ ಚೀಟಿ ರದ್ದು ಕಾರ್ಯ ನಡುವೆಯೇ ಗುಡ್ ನ್ಯೂಸ್ ಕೊಟ್ಟ ಆಹಾರ ಇಲಾಖೆ
Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳ ರದ್ದು ಕಾರ್ಯ ಮುಂದುವರೆದಿದೆ. ಈ ನಡುವೆಯೇ ಆಹಾರ ಇಲಾಖೆ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಆದರೆ, ರಾಜ್ಯದಲ್ಲಿ ಅನರ್ಹರು ಸಹ ಬಿಪಿಎಲ್ ಪಡೆದುಕೊಂಡು ಬಡವರಿಗೆ ಸಿಗಬೇಕಾದ ಪಡಿತರ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದು, ಇದೀಗ ಇದಕ್ಕೆಲ್ಲ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ ಮಾಡಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದ ಅನ್ನವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯಲ್ಲಿನ ಗುಂಜೂರು ಒಟ್ಟು ಪಡಿತರ ಚೀಟಿ- 1346, ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಡಿಸೆಂಬರ್ 12, 2025ರಂದು ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನರ್ಹರ ಬಳಿ ಕಾರ್ಡ್ ರದ್ದು: ರಾಜ್ಯದಲ್ಲಿ ಅನರ್ಹರ ಬಳಿಯ 2.43 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ. ತಂತ್ರಜ್ಞಾನದ ಸಹಾಯದಿಂದ ಮತ್ತು ಆಧಾರ್ ಲಿಂಕ್ ಪರಿಶೀಲನೆ ಮೂಲಕ ಈ ಕ್ರಮ ಕೈಗೊಳ್ಳಲಾಗಿದೆ.
ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವೆ ನಿಮುಬೆನ್, ಆಧಾರ್ ಲಿಂಕ್ ಆಗದಿರುವುದು, ನಿಗದಿತ ಸಮಯದಲ್ಲಿ ಇ-ಕೆವೈಸಿ ಮಾಡಿಸದ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ. ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದವರ ಬಳಿಯ ಕಾರ್ಡ್‌ಗಳನ್ನು ರದ್ದುಪಡಿಲಾಗಿದೆ ಎಂದು ತಿಳಿಸಿದರು.
ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೂ ಹೆಸರು ತೆಗೆಸದಿರುವವರು,
ತೆರಿಗೆ ಪಾವತಿಸುವವರು ಮತ್ತು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದವರು, ಮನೆಯಲ್ಲಿ ಇಲ್ಲದಿದ್ದರೂ, 100 ವರ್ಷ ದಾಟಿದವರ ಹೆಸರಿನಲ್ಲಿ ಪಡಿತರ ಪಡೆಯುತ್ತಿರುವವರ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು. ಮತ್ತೊಂದೆಡೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ * ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ
* ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ)
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರಲಿದೆ.












Click it and Unblock the Notifications