ಬೆಂಗಳೂರಿನಲ್ಲಿ ವೈಟ್ ಟಾಪಿಂಗ್‌ಗೆ ಮೀಸಲಿಟ್ಟ ಅನುದಾನ ಎಷ್ಟು ಕೋಟಿ ಗೊತ್ತಾ?: ಈ ಬಗ್ಗೆ ಡಿಸಿಎಂ ಡಿಕೆಶಿ ಹೇಳಿದ್ದೇನು?

ಬೆಳಗಾವಿ, ಡಿಸೆಂಬರ್‌, 14: ಸಿಲಿಕಾನ್‌ ಸಿಟಿ ಬೆಂಗಳೂರು ದಿನಿದಿಂದ ದಿನಕ್ಕೆ ಬೃಹದ್ಧಾಕಾರವಾಗಿ ಬೆಳೆಯುತ್ತಲಿದ್ದು, ಅಷ್ಟೇ ಪ್ರಮಾಣದಲ್ಲಿ ವಾಹನಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದರಿಂದ ನಗರಲ್ಲಿ ವಾಯುಮಾಲಿನ್ಯ ಹೆಚ್ಚಳ ಆಗುವುದಲ್ಲದೇ ಇವುಗಳ ಒತ್ತಡದಿಂದ ಬಹುತೇಕ ಕಡೆ ರಸ್ತೆಗಳು ಚರಂಡಿಯಾಗಿ ಮಾರ್ಪಟ್ಟಿವೆ. ಇನ್ನು ಸರ್ಕಾರ ರಸ್ತೆಗಳಿಗೆ ವೈಟ್‌ ಟಾಪಿಂಗ್‌ ಹಾಕುವ ಮೂಲಕ ಬೆಂಗಳೂರು ಅಭಿವೃದ್ಧಿಗೆ ಮುಂದಾಗಿದೆ. ಹಾಗಾದರೆ ಇದಕ್ಕೆ ಮೀಸಲಿಟ್ಟ ಅನುದಾನ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟ್ಯಾಪಿಂಗ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Government is How many crores allocated for white topping in Bengaluru?, know details

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಹೆಚ್. ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1,300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿ ಆಗುತ್ತಿವೆ.

ವೈಟ್ ಟಾಪಿಂಗ್‌ಗೆ ಮೀಸಲಿಟ್ಟ ಅನುದಾನ ಎಷ್ಟು?

ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ. ಹೀಗಾಗಿ ರಸ್ತೆಗುಂಡಿ ಮುಚ್ಚುವ ಕೆಲಸವನ್ನು ವಿಕೇಂದ್ರೀಕರಣ ಮಾಡಲಾಗಿದೆ. ಸಾರ್ವಜನಿಕರು ಅಥವಾ ಪೊಲೀಸ್ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುವ ಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಮುಚ್ಚಿಸುತ್ತಿದ್ದಾರೆ. ವೈಟ್ ಟಾಪಿಂಗ್‌ಗೆ 1,000 ಕೋಟಿ ಅನುದಾನವಿದ್ದು, ಮುಖ್ಯರಸ್ತೆಗಳಲ್ಲದೆ ಬೇರೆ ರಸ್ತೆಗಳನ್ನು ಮಾಡಬೇಕೆಂಬ ಬೇಡಿಕೆಯಿದೆ ಎಂದರು.

ಬೆಂಗಳೂರಿನಲ್ಲಿ ಕೇಬಲ್‌ಗಳ ಹಾವಳಿ ಹೆಚ್ಚಾಗಿದೆ. ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ. ಹೀಗಾಗಿ ಯೋಜಿತ ರೂಪದಲ್ಲಿ ವೈಟ್ ಟ್ಯಾಪಿಂಗ್ ಕೆಲಸ ಮಾಡಬೇಕಿದೆ. 25 ರಿಂದ 40 ವರ್ಷಗಳ ಕಾಲ ರಸ್ತೆಗಳು ಬಾಳಿಕೆ ಬರುವ ಹಿನ್ನೆಲೆ ವೈಟ್ ಟಾಪಿಂಗ್‌ಗೆ ಆದ್ಯತೆ ನೀಡಲಾಗಿದೆ. ಎಲ್ಲೆಲ್ಲಿಇದರ ಅಗತ್ಯವಿದೆ ಎಂಬುದರ ಚರ್ಚೆಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ಕರೆಯಲಿದ್ದೇನೆ ಎಂದರು.

ಸರ್ಕಾರ ಎಷ್ಟೇ ಅನುದಾನ ನೀಡಿದರೂ ಪಾಲಿಕೆ ಹೆಚ್ಚಿನ ಆದಾಯ ಗಳಿಸುವ ಅಗತ್ಯವಿದೆ. ಇದಕ್ಕಾಗಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದ್ದೇವೆ. ಆ ಮೂಲಕ ಪಾಲಿಕೆಗೆ ಆರ್ಥಿಕ ಶಕ್ತಿ ಮೂಲಕ ತುಂಬಾ ಕೆಲಸ ಮಾಡುತಿದ್ದೇವೆ. ಈ ಬಗ್ಗೆ ನಿಮ್ಮ ಬಳಿ ಸಲಹೆಗಳಿದ್ದರೆ ನೀಡಿ. ಬೆಂಗಳೂರಿನ ಗೌರವ, ಸ್ವಾಭಿಮಾನ ಉಳಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಬೆಂಗಳೂರಿನ ಸ್ವಚ್ಛತೆ, ಮೂಲಭೂತ ಸೌಕರ್ಯ ಅಭಿವೃದ್ಧಿ, ಅಪರಾಧ ತಡೆ ಹಾಗೂ ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಘನತೆ ಉಳಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಭಾರತಿ ಶೆಟ್ಟಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಭಾರತಿ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಬೆಂಗಳೂರಿನ ಬಗ್ಗೆ ಬಹಳ ಆಸಕ್ತಿ ಹೊಂದಿದ್ದಾರೆ. ಸ್ವಚ್ಛತೆ ವಿಚಾರದಲ್ಲಿ ಮಂಗಳೂರು, ಬೆಳಗಾವಿ ಬೆಂಗಳೂರಿಗಿಂತ ಉತ್ತಮವಾಗಿವೆ. ಜಯನಗರ, ಚಾಮರಾಜಪೇಟೆ, ಮಲ್ಲೇಶ್ವರಂ ಪ್ರದೇಶಗಳ ಹೊರತಾಗಿ ಬೆಂಗಳೂರು ಯೋಜಿತ ನಗರವಲ್ಲ.

ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 60 ಲಕ್ಷ ಇತ್ತು. ಈಗ 1.40 ಕೋಟಿ ಆಗಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಕುಡಿಯುವ ನೀರು ಪೂರೈಕೆ, ಘನತ್ಯಾಜ್ಯ ವಿಲೇವಾರಿ ದೊಡ್ಡ ಸವಾಲು. ಕಸ ತೆಗೆಯುವುದೇ ದೊಡ್ಡ ಸಮಸ್ಯೆ, ದಂಧೆ ಆಗಿದೆ. ಕಸ ವಿಲೇವಾರಿಗೆ ಬೇರೆ ರಾಜ್ಯಗಳಲ್ಲಿ ಅಳವಡಿಸಿರುವ ವ್ಯವಸ್ಥೆಗಳನ್ನು ಅಧ್ಯಯನ ಮಾಡಲಾಗುತ್ತಿದೆ. ನವದೆಹಲಿ, ಹೈದರಾಬಾದ್‌ನಲ್ಲಿ ಅಧ್ಯಯನ ಮಾಡಲಾಗಿದೆ. ಇಂಧೋರ್‌ಗೆ ತೆರಳಬೇಕಿದೆ. ಈ ಬಗ್ಗೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರ ಸಲಹೆ ಪಡೆದಿದ್ದೇನೆ ಎಂದರು.

ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಸಾರ್ವಜನಿಕರಿಂದ 70 ಸಾವಿರ ಸಲಹೆ ಸಂಗ್ರಹವಾಗಿದೆ. ಆರೋಗ್ಯ, ಕುಡಿಯುವ ನೀರು, ತಂತ್ರಜ್ಞಾನ, ಪರಿಸರ ಕ್ಷೇತ್ರಗಳಾಗಿ ವಿಭಜನೆ ಮಾಡಿ ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಬೆಂಗಳೂರು ಎಲ್ಲರ ನೆಚ್ಚಿನ ನಗರ. ಬೆಂಗಳೂರಿನ ಆದಾಯ ಹಳ್ಳಿಗಳ ಅಭಿವೃದ್ಧಿಗೆ ನೆರವಾಗುತ್ತಿದೆ. ದೇಶದ ರಫ್ತು ಆದಾಯದಲ್ಲಿ ಶೇಕಡಾ 39ರಷ್ಟು ಬೆಂಗಳೂರಿನಿಂದ ಸಂಗ್ರಹವಾಗುತ್ತಿದೆ. ಹೀಗಾಗಿ ಬೆಂಗಳೂರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ.

ಸಾರ್ವಜನಿಕರ ಸಲಹೆಗಳನ್ನು ಪರಿಶೀಲಿಸಲು ಕೆಲವು ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ನಾವು ಹೆಬ್ಬಾಳ ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದಾಗ ದೇವನಹಳ್ಳಿಯಲ್ಲಿ ವಿಮಾನ ನಿಲ್ದಾಣ ಇರಲಿಲ್ಲ. ಈಗ ವಿಮಾನ ನಿಲ್ದಾಣವಾಗಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಬೆಂಗಳೂರು ಉತ್ತರ ಭಾಗ ಬೆಳೆಯುತ್ತಿದೆ ಎಂದರು.

ಬೆಂಗಳೂರಿನ ಸಂಚಾರ ಸಮಸ್ಯೆ ಬಗೆಹರಿಸಲು 9 ಸಂಸ್ಥೆಗಳ ಜೊತೆ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ನಿನ್ನೆ ಕೂಡ ಸಭೆ ಮಾಡಿದ್ದೇನೆ. ಸಂಚಾರ ಹಾಗೂ ಅಪರಾಧ ತಡೆಗಟ್ಟಲು ಆರ್ಟಿಫಿಷಲ್ ಇಂಟಲಿಜೆನ್ಸ್‌ನಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಗೃಹ ಸಚಿವಾಲಯದ ಜೊತೆ ಸೇರಿ ಯೋಜನೆ ರೂಪಿಸುತ್ತಿದ್ದೇವೆ.
5 ಪ್ರಮುಖ ರಸ್ತೆಗಳಿಂದ ನಗರದ ಒಳಗೆ ಸಂಚಾರಿ ದಟ್ಟಣೆ ಹೆಚ್ಚಾಗಿದೆ. ಇದಕ್ಕೆ ದೀರ್ಘಾವಧಿಯ ಯೋಜನೆ ಬೇಕಾಗಿದೆ. ಬೆಂಗಳೂರನ್ನು ಪ್ರವಾಸಿ ತಾಣ ಮಾಡಲು ಯೋಜನೆ ರೂಪಿಸಲಾಗಿಲ್ಲ. ವಿದೇಶಿ ಪ್ರವಾಸಿಗರಿಗೆ ವಿಧಾನಸೌಧ ಹಾಗೂ ಹೈಕೋರ್ಟ್ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲ ಎಂದರು.

ಸರ್ಕಾರಿ ಆಸ್ತಿ ರಕ್ಷಣೆಗೆ ಪ್ರತ್ಯೇಕ ವಿಭಾಗ ರಚನೆ

ಬಿಡಿಎ ಸ್ವತ್ತು ವ್ಯಾಜ್ಯಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿ ವ್ಯಕ್ತಿಗಳ ಪರ ತೀರ್ಪು ಬರುತ್ತಿರುವುದರ ಬಗ್ಗೆ ಮರೀತಿಬ್ಬೆಗೌಡರ ಪ್ರಶ್ನೆಗೆ ಉತ್ತರಿಸಿ, ನಾನು ಮರಿತಿಬ್ಬೆಗೌಡರ ವಾದ ಒಪ್ಪುತ್ತೇನೆ. ಅಲ್ಲಿ ದೊಡ್ಡ ಮಾಫಿಯಾ ಇದೆ. ಯಾವುದೇ ಹೊಣೆಗಾರಿಕೆ ಇಲ್ಲವಾಗಿದೆ. ಈ ಹಿಂದಿನ ಸರ್ಕಾರಗಳು ಅಡ್ವೊಕೇಟ್‌ಗಳನ್ನು ನೇಮಕ ಮಾಡಿದರೂ ಶೇಕಡಾ 90ರಷ್ಟು ತೀರ್ಪು ಖಾಸಗಿಯವರ ಪರವಾಗಿವೆ ಎಂದರು.

ಇತ್ತೀಚೆಗೆ ಸಚಿವ ಹೆಚ್.ಕೆ.ಪಾಟೀಲರು ರಾಜ್ಯದ ಅಡ್ವೊಕೇಟ್‌ಗಳ ಜೊತೆ ಚರ್ಚೆ ಮಾಡಿದ್ದಾರೆ. ಬಿಡಿಎ ಹಾಗೂ ಪಾಲಿಕೆ ವಿಚಾರದಲ್ಲಿ ಮುಂದಿನ ಶನಿವಾರ ಅಡ್ವೊಕೇಟ್‌ಗಳ ಸಭೆ ನಿಗದಿ ಮಾಡಿದ್ದು, ಯಾರು ಎಷ್ಟು ಕೇಸ್ ವಾದ ಮಾಡಿದ್ದಾರೆ?, ಎಷ್ಟು ಕೇಸ್ ಗೆದ್ದಿದ್ದಾರೆ? ಮುಂದೆ ಅವರ ಕಾರ್ಯಯೋಜನೆ ಏನು ಎಂದು ಪರಿಶೀಲನೆ ಮಾಡಲಾಗುವುದು. ನಾವು ಏಕಾಏಕಿ ಒಂದೇ ದಿನ ತೆಗೆದುಹಾಕುವುದಿಲ್ಲ. ಸದಸ್ಯರು ಹೇಳಿದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬಿಡಿಎ ಆಸ್ತಿ ಕುರಿತ ಪ್ರಕರಣಗಳ ಪರಿಶೀಲನೆಗೆ ಪ್ರತ್ಯೇಕ ವಿಭಾಗ ರೂಪಿಸಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಅಡ್ವೊಕೇಟ್‌ಗಳಿಗೆ ಹೊಣೆಗರಿಕೆ ನಿಗದಿ ಮಾಡುತ್ತೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+