ಬೆಂಗಳೂರಿನ ಕ್ಲಬ್ ಗಳಲ್ಲಿ ಸಿಸಿಟಿವಿ ಕಡ್ಡಾಯ

ಬೆಂಗಳೂರು, ಸೆ.20 : ಮಹಾನಗರ ಬೆಂಗಳೂರಿನ ಭದ್ರತೆ ದೃಷ್ಟಿಯಿಂದ ಸರ್ಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವಂತೆ ಆದೇಶ ನೀಡಿದೆ. ಇದರ ಅನ್ವಯ ಕ್ಲಬ್, ಜಿಮ್ ಮುಂತಾದ ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ.

ಗುರುವಾರ ಈ ಕುರಿತು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ ಅದರಂತೆ, ಕ್ಲಬ್, ಈಜುಕೊಳ, ಅಮ್ಯೂಸ್ ಮೆಂಟ್ ಪಾರ್ಕ್, ಜಿಮ್ ಮುಂತಾದ ಸ್ಥಳಗಳ ಆವರಣದಲ್ಲಿ ಕಡ್ಡಾಯವಾಗಿ ಸಿಸಿಟಿವಿಯನ್ನು 60 ದಿನಗಳಲ್ಲಿ ಆಳವಡಿಸಬೇಕಾಗಿದೆ.

cctv

ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಆಳವಡಿಸುವ ಮೂಲಕ ಅಲ್ಲಿನ ಚಲನ ವಲನಗಳ ಬಗ್ಗೆ ಮಾಹಿತಿ ಸಂಗ್ರಹಸಿ, ಅಪರಾಧ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಗೆ ವಹಿಸಲು ಗೃಹ ಇಲಾಖೆ ತೀರ್ಮಾನಿಸಿದೆ. ಈಗಾಗಲೇ ಸಿಸಿಟಿವಿ ಆಳವಡಿಕೆಯಿಂದ ನಗರದಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗುತ್ತಿವೆ. ಈಗ ಮತ್ತಷ್ಟು ಸಿಸಿಟಿವಿ ಆಳವಡಿಕೆಯಿಂದ ಪೊಲೀಸರಿಗೆ ಸಹಾಯಕವಾಗಲಿದೆ.

ಸಾರ್ವಜನಿಕರು ಹೆಚ್ಚಾಗಿ ಸೇರುದ ಸ್ಥಳಗಳಲ್ಲಿ ಅಪರಾಧ ಚಟುವಟಿಕೆ ಹೆಚ್ಚಾಗಿ ನಡೆಯುತ್ತದೆ. ಆದ್ದರಿಂದ ಇಂತಹ ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಲು ಸರ್ಕಾರ ನಿರ್ಧರಿಸಿದೆ. ಇಂತಹ ಸ್ಥಳಗಳಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆದರೆ, ಸಿಸಿಟಿವಿ ದೃಶ್ಯಾವಳಿಗಳು ಪ್ರಮುಖ ಸಾಕ್ಷಿಗಳಾಗಲಿವೆ.

ಮುಂದಿನ ಹಂತದಲ್ಲಿ ಅಪಾರ್ಟ್ ಮೆಂಟ್, ವಾಣಿಜ್ಯ ಸಂಕೀರ್ಣಗಳು ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿಟಿವಿ ಆಳವಡಿಕೆ ನಿಯಮವನ್ನು ಕಡ್ಡಾಯವಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಸ್ಥಳಗಳ 200 ಮೀ ವ್ಯಾಪ್ತಿಯ ದೃಶ್ಯಾವಳಿಗಳನ್ನು ಸಿಸಿಟಿವಿಗಳು ಸೆರೆಹಿಡಿಯುವಂತಿರಬೇಕು.

ಪೊಲೀಸ್ ಇಲಾಖೆಗೆ ಸಿಸಿಟಿವಿ ಅಳವಡಿಸಲಾಗಿದೆಯೇ ಎಂದು ಪರಿಶೀಲಿಸುವ ಹೊಣೆಯನ್ನು ಸರ್ಕಾರ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸರ್ಕಾರ ದಿಟ್ಟಕ್ರಮ ಕೈಗೊಂಡಿದೆ. ಇದರ ಅನುಷ್ಟಾನ ಹೇಗೆ ಆಗುತ್ತದೆ? ಎಂದು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+