ನೈಸ್ ಕಂಪನಿಗೆ ಸೇರಿದ ಭೂಮಿ ವಶಕ್ಕೆ ಪಡೆಯಲಿದೆ ಸರ್ಕಾರ?
ಬೆಂಗಳೂರು, ಫೆಬ್ರವರಿ 18 : ನೈಸ್ ಕಂಪನಿಗೆ ಸೇರಿದ 370 ಎಕರೆ ಭೂಮಿ ವಶಕ್ಕೆ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ವರದಿಯನ್ನು ಪಡೆಯಲು ಸಂಪುಟ ಉಪ ಸಮಿತಿ ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪ ಸಮಿತಿ ರಚನೆ ಮಾಡಲು ಒಪ್ಪಿಗೆ ನೀಡಲಾಗಿದೆ. 600 ಕೋಟಿ ರೂ. ಮೌಲ್ಯದ ಜಮೀನಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೈಸ್ ಸಂಸ್ಥೆ ನಡುವೆ ವಾಜ್ಯವಿದೆ.
ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸಸ್ (ನೈಸ್) ಮತ್ತು ಕರ್ನಾಟಕ ಸರ್ಕಾರದ ನಡುವೆ 1997ರಲ್ಲಿ ಬೆಂಗಳೂರು-ಮೈಸೂರು ನಡುವೆ 111 ಕಿ. ಮೀ.ಗಳ ಎಕ್ಸ್‌ಪ್ರೆಸ್ ಹೆದ್ದಾರಿ, 41 ಕಿ. ಮೀ.ಗಳ ಫೆರಿಫೆರಲ್ ರಸ್ತೆ 9.8 ಕಿ. ಮೀ.ಗಳ ಲಿಂಕ್ ರಸ್ತೆ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಫೆರಿಫೆರಲ್ ರಸ್ತೆ, ಲಿಂಕ್ ರಸ್ತೆ ಮತ್ತು ಎಕ್ಸ್‌ಪ್ರೆಸ್ ಹೆದ್ದಾರಿಯ ಸ್ವಲ್ಪ ಭಾಗ ಪೂರ್ಣಗೊಂಡಿದೆ. ಆ ಬಳಿಕ ಯೋಜನೆ ಸ್ಥಗಿತಗೊಂಡಿದೆ. ಯೋಜನೆ ಸ್ಥಗಿತಗೊಳ್ಳಲು ಮುಖ್ಯ ಕಾರಣ ನೈಸ್ ಸಂಸ್ಥೆ ಯೋಜನೆ ಪೂರ್ಣಗೊಳಿಸಲು ಭೂಮಿಗಾಗಿ ಬೇಡಿಕೆ ಇಟ್ಟಿರುವುದು.

ಸರ್ಕಾರ ನೀಡಿದ್ದ ಜಮೀನು ಪರಭಾರೆ
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಗೆಂದು ಮಂಜೂರಾದ 756 ಎಕರೆ ಜಾಗವನ್ನು ನೈಸ್ ಮಾಲೀಕರು ಪರಭಾರೆ ಮಾಡಿದ್ದಾರೆ ಎಂಬ ಅಂಶವನ್ನು ಲೋಕೋಪಯೋಗಿ ಇಲಾಖೆ ಬಹಿರಂಗ ಪಡಿಸಿತ್ತು. ಸರ್ಕಾರ ಮತ್ತು ನೈಸ್ ಸಂಸ್ಥೆ ನಡುವೆ ಜಮೀನಿನ ವಿಚಾರದಲ್ಲಿ ಜಟಾಪಟಿ ನಡೆಯುತ್ತಿದೆ.

ಸದನ ಸಮಿತಿ ರಚನೆ ಮಾಡಲಾಗಿತ್ತು
ನೈಸ್ ಸಂಸ್ಥೆ ಸರ್ಕಾರದ ಜೊತೆ ಮಾಡಿಕೊಂಡ ಕ್ರಿಯಾ ಒಪ್ಪಂದವನ್ನು ಉಲ್ಲಂಘಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಇರುವುದರ ತನಿಖೆಗೆ 2014ರಲ್ಲಿ ಸದನ ಸಮಿತಿಯನ್ನು ರಚನೆ ಮಾಡಲಾಗಿತ್ತು. ಒಪ್ಪಂದದಲ್ಲಿ ಸೇರಿರದ ಭೂಮಿಯನ್ನು ನೈಸ್ ಸಂಸ್ಥೆ ತನ್ನದೆಂದು ಪ್ರತಿಪಾದಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

ರೈತರಿಂದ ಭೂಮಿ ಖರೀದಿ
ನೈಸ್ ಕಂಪನಿಯು ಬೆಂಗಳೂರು-ಮೈಸೂರು ಹೆದ್ದಾರಿಯ ಅಕ್ಕಪಕ್ಕದಲ್ಲಿನ ರೈತರಿಂದ ಕೃಷಿ ಭೂಮಿಯನ್ನು ಖರೀದಿ ಮಾಡಿದೆ. ಅದನ್ನು ನಿಯಮ ಬಾಹಿರವಾಗಿ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಪರಭಾರೆ ಮಾಡಿದೆ ಎಂಬ ಆರೋಪವೂ ಇದೆ. ಈಗ ಸರ್ಕಾರ ಮತ್ತು ನೈಸ್ ಕಂಪನಿ ನಡುವೆ 370 ಎಕರೆ ಭೂಮಿ ಬಗ್ಗೆ ವಾಜ್ಯವಿದ್ದು, ಇದರ ಬೆಲೆ ಕೋಟ್ಯಾಂತರ ರೂಪಾಯಿ ಆಗಿದೆ.

ಆರು ಪಥದ ರಸ್ತೆ ಯೋಜನೆ
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಅರ್ಧಕ್ಕೆ ನಿಂತಿದೆ. ಇತ್ತ ಕಡೆ ಸರ್ಕಾರ ಬೆಂಗಳೂರು-ಮೈಸೂರು ನಡುವೆ 6 ಪಥದ ರಸ್ತೆಯನ್ನು ನಿರ್ಮಾಣ ಮಾಡುತ್ತಿದೆ. ಅದರ ಕಾಮಗಾರಿ ಈಗಾಗಲೇ ಆರಂಭವಾಗಿದೆ. ಆದ್ದರಿಂದ, ನೈಸ್ ಪಡೆದಿರುವ ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications