ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೈಸ್ ಕಂಪನಿಗೆ ಸೇರಿದ ಭೂಮಿ ವಶಕ್ಕೆ ಪಡೆಯಲಿದೆ ಸರ್ಕಾರ?

|
Google Oneindia Kannada News

ಬೆಂಗಳೂರು, ಫೆಬ್ರವರಿ 18 : ನೈಸ್ ಕಂಪನಿಗೆ ಸೇರಿದ 370 ಎಕರೆ ಭೂಮಿ ವಶಕ್ಕೆ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ವರದಿಯನ್ನು ಪಡೆಯಲು ಸಂಪುಟ ಉಪ ಸಮಿತಿ ರಚನೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪ ಸಮಿತಿ ರಚನೆ ಮಾಡಲು ಒಪ್ಪಿಗೆ ನೀಡಲಾಗಿದೆ. 600 ಕೋಟಿ ರೂ. ಮೌಲ್ಯದ ಜಮೀನಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೈಸ್ ಸಂಸ್ಥೆ ನಡುವೆ ವಾಜ್ಯವಿದೆ.

ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಲು ಸಂಪೂರ್ಣ ಡಿಜಿಟಲ್ ವ್ಯವಸ್ಥೆ ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಲು ಸಂಪೂರ್ಣ ಡಿಜಿಟಲ್ ವ್ಯವಸ್ಥೆ

ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ ಪ್ರೈಸಸ್‌ (ನೈಸ್) ಮತ್ತು ಕರ್ನಾಟಕ ಸರ್ಕಾರದ ನಡುವೆ 1997ರಲ್ಲಿ ಬೆಂಗಳೂರು-ಮೈಸೂರು ನಡುವೆ 111 ಕಿ. ಮೀ.ಗಳ ಎಕ್ಸ್‌ಪ್ರೆಸ್ ಹೆದ್ದಾರಿ, 41 ಕಿ. ಮೀ.ಗಳ ಫೆರಿಫೆರಲ್ ರಸ್ತೆ 9.8 ಕಿ. ಮೀ.ಗಳ ಲಿಂಕ್ ರಸ್ತೆ ನಿರ್ಮಾಣಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

 ಬೆಂಗಳೂರಿಗರಿಗೆ ಸಿಹಿ ಸುದ್ದಿ: ನೈಸ್ ರಸ್ತೆಯಲ್ಲೂ ಮೆಟ್ರೋ ಮಾರ್ಗ ಬೆಂಗಳೂರಿಗರಿಗೆ ಸಿಹಿ ಸುದ್ದಿ: ನೈಸ್ ರಸ್ತೆಯಲ್ಲೂ ಮೆಟ್ರೋ ಮಾರ್ಗ

ಫೆರಿಫೆರಲ್ ರಸ್ತೆ, ಲಿಂಕ್ ರಸ್ತೆ ಮತ್ತು ಎಕ್ಸ್‌ಪ್ರೆಸ್ ಹೆದ್ದಾರಿಯ ಸ್ವಲ್ಪ ಭಾಗ ಪೂರ್ಣಗೊಂಡಿದೆ. ಆ ಬಳಿಕ ಯೋಜನೆ ಸ್ಥಗಿತಗೊಂಡಿದೆ. ಯೋಜನೆ ಸ್ಥಗಿತಗೊಳ್ಳಲು ಮುಖ್ಯ ಕಾರಣ ನೈಸ್ ಸಂಸ್ಥೆ ಯೋಜನೆ ಪೂರ್ಣಗೊಳಿಸಲು ಭೂಮಿಗಾಗಿ ಬೇಡಿಕೆ ಇಟ್ಟಿರುವುದು.

ನೈಸ್ ವಿರುದ್ಧ ಕ್ರಮ:ಸರ್ಕಾರಕ್ಕೆ ಸೂಚನೆ ಕೊಡುವೆ ಎಂದ ದೇವೇಗೌಡ ನೈಸ್ ವಿರುದ್ಧ ಕ್ರಮ:ಸರ್ಕಾರಕ್ಕೆ ಸೂಚನೆ ಕೊಡುವೆ ಎಂದ ದೇವೇಗೌಡ

ಸರ್ಕಾರ ನೀಡಿದ್ದ ಜಮೀನು ಪರಭಾರೆ

ಸರ್ಕಾರ ನೀಡಿದ್ದ ಜಮೀನು ಪರಭಾರೆ

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಗೆಂದು ಮಂಜೂರಾದ 756 ಎಕರೆ ಜಾಗವನ್ನು ನೈಸ್ ಮಾಲೀಕರು ಪರಭಾರೆ ಮಾಡಿದ್ದಾರೆ ಎಂಬ ಅಂಶವನ್ನು ಲೋಕೋಪಯೋಗಿ ಇಲಾಖೆ ಬಹಿರಂಗ ಪಡಿಸಿತ್ತು. ಸರ್ಕಾರ ಮತ್ತು ನೈಸ್ ಸಂಸ್ಥೆ ನಡುವೆ ಜಮೀನಿನ ವಿಚಾರದಲ್ಲಿ ಜಟಾಪಟಿ ನಡೆಯುತ್ತಿದೆ.

ಸದನ ಸಮಿತಿ ರಚನೆ ಮಾಡಲಾಗಿತ್ತು

ಸದನ ಸಮಿತಿ ರಚನೆ ಮಾಡಲಾಗಿತ್ತು

ನೈಸ್ ಸಂಸ್ಥೆ ಸರ್ಕಾರದ ಜೊತೆ ಮಾಡಿಕೊಂಡ ಕ್ರಿಯಾ ಒಪ್ಪಂದವನ್ನು ಉಲ್ಲಂಘಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳದೇ ಇರುವುದರ ತನಿಖೆಗೆ 2014ರಲ್ಲಿ ಸದನ ಸಮಿತಿಯನ್ನು ರಚನೆ ಮಾಡಲಾಗಿತ್ತು. ಒಪ್ಪಂದದಲ್ಲಿ ಸೇರಿರದ ಭೂಮಿಯನ್ನು ನೈಸ್ ಸಂಸ್ಥೆ ತನ್ನದೆಂದು ಪ್ರತಿಪಾದಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

ರೈತರಿಂದ ಭೂಮಿ ಖರೀದಿ

ರೈತರಿಂದ ಭೂಮಿ ಖರೀದಿ

ನೈಸ್ ಕಂಪನಿಯು ಬೆಂಗಳೂರು-ಮೈಸೂರು ಹೆದ್ದಾರಿಯ ಅಕ್ಕಪಕ್ಕದಲ್ಲಿನ ರೈತರಿಂದ ಕೃಷಿ ಭೂಮಿಯನ್ನು ಖರೀದಿ ಮಾಡಿದೆ. ಅದನ್ನು ನಿಯಮ ಬಾಹಿರವಾಗಿ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಪರಭಾರೆ ಮಾಡಿದೆ ಎಂಬ ಆರೋಪವೂ ಇದೆ. ಈಗ ಸರ್ಕಾರ ಮತ್ತು ನೈಸ್ ಕಂಪನಿ ನಡುವೆ 370 ಎಕರೆ ಭೂಮಿ ಬಗ್ಗೆ ವಾಜ್ಯವಿದ್ದು, ಇದರ ಬೆಲೆ ಕೋಟ್ಯಾಂತರ ರೂಪಾಯಿ ಆಗಿದೆ.

ಆರು ಪಥದ ರಸ್ತೆ ಯೋಜನೆ

ಆರು ಪಥದ ರಸ್ತೆ ಯೋಜನೆ

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಅರ್ಧಕ್ಕೆ ನಿಂತಿದೆ. ಇತ್ತ ಕಡೆ ಸರ್ಕಾರ ಬೆಂಗಳೂರು-ಮೈಸೂರು ನಡುವೆ 6 ಪಥದ ರಸ್ತೆಯನ್ನು ನಿರ್ಮಾಣ ಮಾಡುತ್ತಿದೆ. ಅದರ ಕಾಮಗಾರಿ ಈಗಾಗಲೇ ಆರಂಭವಾಗಿದೆ. ಆದ್ದರಿಂದ, ನೈಸ್ ಪಡೆದಿರುವ ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದೆ.

English summary
Karnataka government may take over the 370 acre of land allotted to the Bangalore-Mysore Infrastructure Corridor (BMIC) project popularly known as NICE road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X