ಮಾ.9ರಿಂದ ದ್ವಿತೀಯ ಪಿಯು ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಬೆಂಗಳೂರು, ಮಾರ್ಚ್ 8: ಮಾರ್ಚ್ 9 ರಿಂದ 27 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಯಾವುದೇ ಸಮಸ್ಯೆಯಿಲ್ಲದೆ ನಡೆಯಬೇಕೆಂಬ ಕಾರಣಕ್ಕೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ತಿಳಿಸಿದ್ದಾರೆ. [ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ]
ಪರೀಕ್ಷಾ ಕೇಂದ್ರಗಳ ಸಮೀಪವಿರುವ ಝೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆಯೂ ಆದೇಶ ಹೊರಡಿಸಲಾಗಿದೆ. [ವ್ಹೀಲ್ ಚೇರ್ನಲ್ಲೇ ಪರೀಕ್ಷೆ ಬರೆದವನ ಕರುಣಾಜನಕ ಕತೆಯನ್ನೊಮ್ಮೆ ಓದಿ]

ಕಳೆದ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾದ ಅವಾಂತರಗಳನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ಈ ಬಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಬೆಂಗಳೂರು ನಗರ ಜಿಲ್ಲೆಯ 147 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. [ಪಶ್ನೆ ಪತ್ರಿಕೆ ಸೋರಿಕೆ ತಡೆಗೆ ಖಜಾನೆಯೇ ಬದಲಾವಣೆ]
ರಾಜ್ಯದಲ್ಲಿ ಒಟ್ಟು 6.84 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದು, 998 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ 5.4 ಲಕ್ಷ ಹೊಸಬರು, 30 ಸಾವಿರ ಪುನಾವರ್ತಿತ ವಿದ್ಯಾರ್ಥಿಗಳು ಮತ್ತು 1 ಲಕ್ಷ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ ಶಿಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒನ್ಇಂಡಿಯಾ ಕನ್ನಡ ಶುಭಕೋರುತ್ತದೆ. [ಪ್ರತಿಯೊಬ್ಬ ವಿದ್ಯಾರ್ಥಿ ಓದಲೇಬೇಕಾದ ಲೇಖನವಿದು]












Click it and Unblock the Notifications