ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್‌ಎಸ್‌ಎಸ್‌-ಬಿಜೆಪಿ ನಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ನಿರ್ಧಾರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಆರ್‌ಎಸ್‌ಎಸ್-ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಹೂಡಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಬಿಜೆಪಿ ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್ ಸರ್ಕಾರ ಇದ್ದ ಅವಧಿಯಲ್ಲಿ, ಟಿಪ್ಪು ಜಯಂತಿ ಪ್ರತಿಭಟನೆ ಮತ್ತು ಇತರ ಪ್ರತಿಭಟನೆಗಳ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು, ನಾಯಕರು, ಆರ್‌ಎಸ್‌ಎಸ್ ಕಾರ್ಯಕರ್ತರು, ನಾಯಕರ ಮೇಲೆ ಹೂಡಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುವುದೇನು?ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳುವುದೇನು?

ಟಿಪ್ಪು ಜಯಂತಿ ಆಚರಣೆಗೆ ವಿರೋಧಿಸಿ ಬಿಜೆಪಿ, ಆರ್‌ಎಸ್‌ಎಸ್, ಭಜರಂಗದಳ, ಶ್ರೀರಾಮಸೇನೆ ಇನ್ನೂ ಹಲವು ಸಂಘಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದು ಸುಮಾರು 150 ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.

Government Taking Back Cases On RSS-BJP Party Workers And Leaders

ಕಾರ್ಯಕರ್ತರು, ಮುಖಂಡರ ಮೇಲೆ ಆಗ ದಾಖಲಿಸಿದ್ದ ಕೇಸುಗಳನ್ನು ವಾಪಸ್ ಪಡೆಯಲು ಸಿಎಂ ಯಡಿಯೂರಪ್ಪ ತೀರ್ಮಾನಿಸಿದ್ದು, ರಾಜ್ಯದ ವಿವಿಧ ಠಾಣೆಗಳಲ್ಲಿನ ಇಂತಹಾ ಪ್ರಕರಣಗಳ ಮಾಹಿತಿ ಪಡೆದು ವರದಿ ಸಲ್ಲಿಸುವಂತೆ ಐಜಿ ನೀಲಮಣಿ ರಾಜು ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ.

ಬಿಜೆಪಿಯಲ್ಲಿ ಏನಿದು ಆರೋಗ್ಯ ಸಚಿವ ಶ್ರೀರಾಮುಲು ಮುನಿಸು?ಬಿಜೆಪಿಯಲ್ಲಿ ಏನಿದು ಆರೋಗ್ಯ ಸಚಿವ ಶ್ರೀರಾಮುಲು ಮುನಿಸು?

ಬಿಜೆಪಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ಅವರುಗಳು ಸರ್ಕಾರಕ್ಕೆ ಪತ್ರ ಬರೆದು ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಅದರಂತೆ ಮುಂದಿನ ಸಂಪುಟ ಸಭೆಯಲ್ಲಿ ಪ್ರಕರಣಗಳನ್ನು ಹಿಂಪಡೆಯುವ ತೀರ್ಮಾನಕ್ಕೆ ಅಂಕಿತ ಬೀಳುವ ಸಾಧ್ಯತೆ ಇದೆ.

English summary
CM Yediyurappa decides to take back cases put on RSS-BJP party workers and leaders by congress government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X