ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ: ಸುಧಾಕರ್ ಭರವಸೆ

|
Google Oneindia Kannada News

ಬೆಂಗಳೂರು, ಜು.7: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಸಹ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಭರವಸೆ ನೀಡಿದರು. ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ರಾಜ್ಯ ಸರ್ಕಾರ ತನ್ನ ಇತಿಮಿತಿಯೊಳಗೆ ನೌಕರರ ಎಲ್ಲ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸುತ್ತದೆ. ಇನ್ನು ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ನೌಕರರ ಖಾಯಮಾತಿಗೆ ಅಡಚಣೆ ಇದೆ

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ನಮಗೂ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿದೆ. ಹೀಗಾಗಿ ಅವರನ್ನು ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಕೆಲವು ಅಡಚಣೆಗಳಿವೆ. ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದರು.

Government will be Efforts to fulfill demands of medicale contract employees

ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆರೋಗ್ಯ ವಿಮೆ ವಿಸ್ತರಣೆಗೆ ಹಾಗೂ 10 ದಿನಗಳ ವೇತನ ಸಹಿತ ರಜೆ ನೀಡಲು ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ. ನಿಮ್ಮೆಲ್ಲರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಪ್ರಮಾಣಿಕ ಪ್ರಯತ್ನ ಮಾಡಲಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರ ಜನಪರವಾಗಿದೆ ಎಂದು ನೌಕರರಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಸರ್ಕಾರಿ ಆರೋಗ್ಯ ಮತ್ತು ವೈದ್ಯಕೀಯ ವ್ಯವಸ್ಥೆಯ ಬಗ್ಗೆ ನಾಡಿನ ಜನರು ಹೆಚ್ಚು ವಿಶ್ವಾಸ ಹೊಂದಿದ್ದಾರೆ. ಕೇವಲ ಮೂಲಭೂತ ಸೌಲಭ್ಯಗಳಿಂದ ಮಾತ್ರ ಜನರಿಗೆ ವಿಶ್ವಾಸ ಬರುವುದಿಲ್ಲ. ಬದಲಾಗಿ ನಿಮ್ಮಂತಹ ನೌಕರರಿಂದಲೇ ಇಲಾಖೆಗೆ ಉತ್ತಮ ಹೆಸರು ಬಂದಿದೆ. ಆರೋಗ್ಯ ಇಲಾಖೆ ಕೋವಿಡ್ ಕಾಲದಲ್ಲಿ ಉತ್ತಮ ಸೇವೆ ನೀಡಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲೂ ನೌಕರರೇ ಕಾರಣ.

Government will be Efforts to fulfill demands of medicale contract employees

ಮುಷ್ಕರ ಕೈ ಬಿಡಲು ಮನವಿ

ನೌಕರರಿಗೆ ನೋವು ಕೊಟ್ಟು ಮುಂದುವರಿಯಲು ಸರಿಯಲ್ಲ. ಕೆಲವು ಬೇಡಿಕೆ ಈಡೇರಿಸಲು ಕಾನೂನಾತ್ಮಕ, ತಾಂತ್ರಿಕ ತೊಡಕುಗಳಿವೆ. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿ, ಸಾಧ್ಯವಿರುವ ಎಲ್ಲಾ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ದೇಶದಲ್ಲೇ ಆರೋಗ್ಯ ಸೇವೆ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದಕ್ಕೆ ಪೂರಕವಾಗಿ ಕೆಲಸ ನಡೆಯಬೇಕಿದೆ. ಇದನ್ನು ಮನಗಂಡು ನೌಕರರು ಮುಷ್ಕರ ಕೈ ಬಿಟ್ಟು ಶೀಘ್ರದಲ್ಲೇ ಸೇವೆಗೆ ಹಿಂದಿರುಗಬೇಕು ಎಂದು ಸಚಿವರು ಮನವಿ ಮಾಡಿದರು.

Recommended Video

Swiggy ಹುಡುಗ ಕುದುರೆ ಏರಿ ಬಂದವನು ಅಸಲಿಗೆ ಯಾರುಗೊತ | OneIndia Kannada

English summary
Efforts to revise salary of contract and out sourced medicale employees, expansion of health isurance, Karnataka health minister Dr. K Sudhakar promised,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X