• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ಸಹಕಾರ: ಸುರೇಶ್ ಕುಮಾರ್

|
Google Oneindia Kannada News

ಬೆಂಗಳೂರು, ಜನವರಿ 06: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಬುಧವಾರ ವಿಧಾನ ಸೌಧದದಲ್ಲಿ ನಡೆದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಕಳೆದ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಬ್ರಾಹ್ಮಣ ವಿದ್ಯಾರ್ಥಿಗಳನ್ನು ಗೌರವಿಸಿ ಮತ್ತು ಮಂಡಳಿಯ 'ಅರುಂಧತಿ' ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮುಂದೆ ಓದಿ...

"ಮಕ್ಕಳ ಪ್ರತಿಭೆ ಅನಾವರಣಕ್ಕೆ ಅವಕಾಶವಾಯಿತು"

ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಮಂಡಳಿ ಪರೀಕ್ಷೆ ಕೈಬಿಟ್ಟಾಗ ಮಕ್ಕಳ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಮಂಡಳಿ ಪರೀಕ್ಷೆಯನ್ನು ನಡೆಸಿದ್ದರಿಂದ ಇಂತಹ ಅನೇಕ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರತಿಭೆಗಳ ಅನಾವರಣಕ್ಕೆ ಅವಕಾಶವಾಯಿತು ಎಂದರು. ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಸೇರಿದಂತೆ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ಮಕ್ಕಳು ವೇದಿಕೆಯಲ್ಲಿ ಗೌರವಕ್ಕೆ ಪಾತ್ರರಾದದ್ದನ್ನು ನೋಡಿದ ಸಚಿವರು, ಪರೀಕ್ಷೆ ನಡೆಸದೇ ಹೋಗಿದ್ದರೆ ಇಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತಿತ್ತು ಎಂದು ಹೇಳಿದರು.

ಖಾಸಗಿ ಶಾಲೆಗಳ ಶುಲ್ಕ: ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸುರೇಶ್ ಕುಮಾರ್!ಖಾಸಗಿ ಶಾಲೆಗಳ ಶುಲ್ಕ: ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸುರೇಶ್ ಕುಮಾರ್!

"ಎಷ್ಟೇ ಕಷ್ಟವೆನಿಸಿದರೂ ಪರೀಕ್ಷೆ ನಡೆಸಿದೆವು"

ಪ್ರತಿಭಾವಂತರಿಗೆ ಅನ್ಯಾಯವಾಗುವುದನ್ನು ತಪ್ಪಿಸುವ ಕಾರಣದಿಂದಲೇ ಎಷ್ಟೇ ಕಷ್ಟವಾದರೂ ನಮ್ಮ ಸರ್ಕಾರ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಿತು. ಅಂದು ನಡೆದ ಪರೀಕ್ಷೆಯ ಯಶಸ್ಸು ಅಂದು ಮನೆಯಿಂದ ಧೈರ್ಯವಾಗಿ ಹೊರಬಂದು ಪರೀಕ್ಷೆ ಬರೆದ 8.5 ಲಕ್ಷ ಮಕ್ಕಳಿಗೆ ಸಲ್ಲಬೇಕಿದೆ ಎಂದರು.

"ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಪಠ್ಯಗಳಿಲ್ಲ"

ಕಳೆದ ತಿಂಗಳು ಆರನೇ ತರಗತಿ ಪುಸ್ತಕದಲ್ಲಿ ವಿಪ್ರ ಸಮಾಜಕ್ಕೆ ಅವಹೇಳನವಾಗುವಂತಹ ಪಠ್ಯವೊಂದಿರುವ ಕುರಿತು ಮಂತ್ರಾಲಯ ಶ್ರೀಮಠದ ಪೂಜ್ಯರು ನನ್ನ ಗಮನಕ್ಕೆ ತಂದಿದ್ದಲ್ಲದೇ ಪಠ್ಯಗಳಲ್ಲಿ ಯಾವುದೇ ಸಮಾಜದ ಇಲ್ಲವೇ ಯಾವುದೇ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಪಠ್ಯಗಳಿರಬಾರದು ಎಂದರು. ತಕ್ಷಣವೇ ಅವರಿಗೆ ಮಾತು ಕೊಟ್ಟಂತೆ ತಾವು ಅದನ್ನು ಸರಿಪಡಿಸಿದೆವು. ಈ ಪಠ್ಯ ನಮ್ಮ ಸರ್ಕಾರದ ಅವಧಿಯಲ್ಲಿ ಪರಿಷ್ಕರಿಸಿದ್ದಾಗಿರಲಿಲ್ಲ ಎಂಬುದನ್ನು ನಾನು ಮಂತ್ರಾಲಯದ ಶ್ರೀಗಳ ಗಮನಕ್ಕೆ ತಂದು ಯಾವುದೇ ಸಮಾಜದ ಭಾವನೆಗಳಿಗೆ ಧಕ್ಕೆಯಾಗುವಂತಹ ಪಠ್ಯಗಳಿದ್ದರೆ ಅವುಗಳನ್ನು ಪಠ್ಯದಿಂದ ಕೈಬಿಡುವ ಕುರಿತು ಗಮನ ಹರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಶೀಘ್ರ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸುರೇಶ್ ಕುಮಾರ್ಶೀಘ್ರ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಸುರೇಶ್ ಕುಮಾರ್

  IPL ಮಿನಿ ಹರಾಜು ಪ್ರಕ್ರಿಯೆಗೆ ಆಟಗಾರರು ಸಿದ್ದ | Oneindia Kannada

  "ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಸರ್ಕಾರದ ಸಹಕಾರ"

  ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿಯವರು ತಮಗೆ ದೊರೆತ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು ಸಮಾಜದ ಬಡವರ ಆರ್ಥಿಕಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದಾರೆಂದು ಕೃತಜ್ಞತೆ ವ್ಯಕ್ತಪಡಿಸಿದರು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಬ್ರಾಹ್ಮಣರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುವುದು ಎಂದು ಹೇಳಿದರು.

  ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೋವಿಂದ ಕಾರಜೋಳ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಆರ್. ಅಶೋಕ್, ಕೆ. ಗೋಪಾಲಯ್ಯ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕರಾದ ಎಸ್.ಆರ್. ಶ್ರೀನಿವಾಸ್, ಎಸ್.ಎ. ರಾಮದಾಸ್, ಉದಯಗರುಡಾಚಾರ್, ಪೂರ್ಣಿಮಾ ಶ್ರೀನಿವಾಸ್, ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್, ಹಿಂದಿನ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ಮತ್ತಿತರರು ಭಾಗವಹಿಸಿದ್ದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಿದ್ದರು.

  English summary
  All co operation would be provided by the government with a view to facilitate economically weaker brahmins under brahmin development board said primary and secondary education minister suresh kumar
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X