• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದ ಎಲ್ಲಾ ಲಕ್ಷಣ ಕಾಣುತ್ತಿದೆ; ಡಿಕೆಶಿ

|

ಬೆಂಗಳೂರು, ಏಪ್ರಿಲ್ 19: 'ಕೊರೊನಾ ವಿಚಾರವಾಗಿ ಸರ್ವಪಕ್ಷ ಸಭೆ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್, 'ಕೊರೊನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಇಂದು ಸಭೆ ನಡೆಸಿದ್ದು, ರಾಜ್ಯಪಾಲರು ನಾಳೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದಿದ್ದಾರೆ.

"ಇದೇ ಮೊದಲ ಬಾರಿಗೆ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯಪಾಲರ ಆಳ್ವಿಕೆ ಅಧಿಕೃತವಾಗಿ ಜಾರಿಯಾಗುವ ಲಕ್ಷಣ ಗೋಚರಿಸುತ್ತಿದೆ. ನಾಳೆ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ" ಎಂದು ತಿಳಿಸಿದ್ದಾರೆ.

"ಕೊರೊನಾ ವಾಸ್ತವಾಂಶದ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದು, ನಾಳೆ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇವೆ. ಕೊರೊನಾ ಲಸಿಕೆ ಪೂರೈಕೆ ಗುತ್ತಿಗೆಯನ್ನು ಕೇವಲ ಎರಡು ಕಂಪನಿಗಳಿಗೆ ಯಾಕೆ ನೀಡಲಾಗಿದೆ? ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರೂಪಾಯಿ ಮೀಸಲಿಡಬೇಕು. ಎಲ್ಲ ಅಭಿವೃದ್ಧಿ ಕೆಲಸ ನಿಲ್ಲಿಸಿ. ಈ ವಿಚಾರದ ಬಗ್ಗೆ ಗಮನ ಹರಿಸಿ. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು. ಆದರೆ ಈವರೆಗೂ ಯಾವುದೇ ಸಿದ್ಧತೆ ಆಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ" ಎಂದು ದೂರಿದ್ದಾರೆ.

ರಾಜ್ಯದಲ್ಲಿ ಕೊರೊನಾ ಏರಿಕೆ; ಏ.20ಕ್ಕೆ ರಾಜ್ಯಪಾಲರ ನೇತೃತ್ವದಲ್ಲಿ ಸಭೆರಾಜ್ಯದಲ್ಲಿ ಕೊರೊನಾ ಏರಿಕೆ; ಏ.20ಕ್ಕೆ ರಾಜ್ಯಪಾಲರ ನೇತೃತ್ವದಲ್ಲಿ ಸಭೆ

   #Covid19update : ದೇಶದಲ್ಲಿ 24 ಗಂಟೆಯಲ್ಲಿ 2,59,170 ಜನರಿಗೆ ಕೊರೊನಾ..! | Oneindia Kannada

   ನಾವು ಕಾಂಗ್ರೆಸ್ ಕಚೇರಿಯಲ್ಲಿ ವೈದ್ಯರ ಘಟಕದ ಜತೆ ಚರ್ಚೆ ಮಾಡಿ ಒಂದು ಹೆಲ್ಪ್ ಲೈನ್ ಆರಂಭಿಸಲು ತೀರ್ಮಾನಿಸಿದ್ದೇವೆ. ಅಲ್ಲಿ ಸೋಂಕಿತರಿಗೆ ಮಾರ್ಗದರ್ಶನ ನೀಡಿ ನೆರವಾಗುತ್ತೇವೆ ಎಂದು ತಿಳಿಸಿದರು.

   '70 ವರ್ಷ ಕಾಂಗ್ರೆಸ್ ಏನು ಮಾಡಿದೆ ಅಂತಾ ಸುಧಾಕರ್ ಕೇಳಿದ್ದಾರೆ. ಅವರು 1 ವರ್ಷದಿಂದ ಮಾತ್ರ ಬಿಜೆಪಿಯಲ್ಲಿದ್ದಾರೆ. ಉಳಿದ ಅವಧಿಯೆಲ್ಲಾ ಕಾಂಗ್ರೆಸ್ ನಲ್ಲೇ ಇದ್ದರಲ್ಲ. ಅವರನ್ನು ಬೆಳೆಸಿ, ಶಾಸಕರನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂದು ತಿರುಗೇಟು ನೀಡಿದ್ದಾರೆ.

   English summary
   Governor's rule is already started in state, reacted KPCC president DK Shivakumar on review meeting on april 20 with governor vajubhai vala
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X