ರಾಜ್ಯಪಾಲರ ತಪ್ಪು ನಿರ್ಣಯವನ್ನು ಸುಪ್ರೀಂ ಸರಿ ಮಾಡಿದೆ: ಸಂತೋಷ್ ಹೆಗ್ಡೆ
ಬೆಂಗಳೂರು, ಮೇ 18: ಹೊಸ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದು ಉತ್ತಮ ನಿರ್ಧಾರವೇ ಆದರೆ 15 ದಿನಗಳ ಕಾಲಾವಕಾಶ ನೀಡಿದ್ದು ಮಾತ್ರ ಸೂಕ್ತವಾದ ಕ್ರಮವಲ್ಲ' ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
15 ದಿನಗಳ ಕಾಲಾವಕಾಶ ನೀಡಿದ್ದು ಪರೋಕ್ಷವಾಗಿ ಭ್ರಷ್ಟಾಚಾರ ನಡೆಸಲು ಕುಮ್ಮಕ್ಕು ನೀಡಿದಂತೆ ಎಂದು ದೂರಿದ ಅವರು, ರಾಜ್ಯಪಾಲರ ತಪ್ಪು ನಿರ್ಣಯವನ್ನು ಸುಪ್ರೀಂ ಕೋರ್ಟ್ ಸರಿ ಮಾಡಿದೆ ಎಂದು ಅವರು ಹೇಳಿದರು.

ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಬಿಜೆಪಿಗೆ 15 ದಿನಗಳ ಸುದೀರ್ಘ ಕಾಲಾವದಿ ನೀಡಿದ್ದರು. ರಾಜ್ಯಪಾಲರ ನಿರ್ಣಯದ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು, ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಾಳೆ (ಶನಿವಾರ) ಸಂಜೆ 4 ರ ಒಳಗೆ ಬಹುಮತ ಸಾಬೀತು ಮಾಡುವಂತೆ ಆದೇಶ ನೀಡಿದೆ.












Click it and Unblock the Notifications