• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

72ನೇ ಗಣರಾಜ್ಯೋತ್ಸವ: ರಾಜ್ಯಪಾಲ ವಿಆರ್ ವಾಲಾರ ಮಾತುಗಳು

|

ಬೆಂಗಳೂರು,ಜನವರಿ 26: 72ನೇ ಗಣರಾಜ್ಯೋತ್ಸವವನ್ನು ಇಂದು ದೇಶಾದ್ಯಂತ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲ ವಿಆರ್ ವಾಲಾ ಕೂಡ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಕೊರೊನಾ ಅಲೆ ತಗ್ಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಅದಕ್ಕೆ ಜನರ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದರು.

ಸಪ್ತ ಗಣರಾಜ್ಯೋತ್ಸವದಲ್ಲಿ ಪ್ರಧಾನಿ ಮೋದಿಯ ವಿಶಿಷ್ಟ ಗೆಟಪ್

ಕೊರೊನಾ ಬಿಕ್ಕಟ್ಟಿನ ಅವಕಾಶವನ್ನು ತಮ್ಮ ಸಾಮರ್ಥ್ಯ ವೃದ್ಧಿಸಲು ಮತ್ತು ಆರೋಗ್ಯ ಮೂಲಸೌಕರ್ಯ ಹಾಗೂ ಪಿಪಿಇ ಕಿಟ್ , ವೆಂಟಿಲೇಟರ್ ಉತ್ಪಾದನೆ ಹೆಚ್ಚಿಸಲು ಬಳಸಿಕೊಂಡಿದ್ದೇವೆ. ಇದು ಪ್ರಧಾನಿ ಮೋದಿ ಅವರ ದೂರದರ್ಶಿತ್ವ ಆತ್ಮ ನಿರ್ಭರ ಭಾರತ ಕಾರ್ಯಕ್ರಮದ ದಿಸೆಯಲ್ಲಿ ಉತ್ತಮ ಹೆಜ್ಜೆಯಾಗಿದೆ ಎಂದು ಹೇಳಿದರು.

ಕೊರೊನಾ ಕೊನೆಯ ಹಂತಕ್ಕೆ ತಲುಪಿದ್ದೇವೆ, ಆದರೆ ನಿರ್ಲಕ್ಷ್ಯ ಮಾಡಬೇಡಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿರಲಿದೆ.

ಈ ಬಾರಿ ಮಹಿಳಾ ಕೇಂದ್ರಿತ ಬಜೆಟ್‌ಗೆ ಆದ್ಯತೆ ನೀಡಲಾಗುವುದು, ಅಂಗನವಾಡಿಗಳು, ಸಂತಾನೋತ್ಪತ್ತಿ ಮತ್ತು ಮಹಿಳಾ ಆರೋಗ್ಯ ಕಾರ್ಯಕರ್ತರ ಮೂಲಕ ಗರ್ಭಿಣಿಯರಿಗೆ ಸೇವೆ ನೀಡಲು ಪ್ರಯತ್ನ ಮಾಡಲಾಗುತ್ತಿದೆ.

72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ

ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರೆಗಳ ಸಂರಕ್ಷಣೆ ಮಾಡಿದ್ದೇವೆ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗುತ್ತಿದೆ ಎಂದು ಹೇಳಿದರು.

ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಈ ಗಣರಾಜ್ಯೋತ್ಸವವನ್ನು ಅರ್ಪಿಸುತ್ತೇನೆ, ಇದೊಂದು ಶತ್ರುವಿನ ವಿರುದ್ಧ ಪಡೆದ ಜಯವಾಗಿದೆ. 2020ರಲ್ಲಿ ಹಿಂದೆಂದೂ ಕಂಡರಿಯದ ಕೊರೊನಾ ಸವಾಲನ್ನು ಜಗತ್ತು ಎದುರಿಸುತ್ತಿರುವಾಗ, ನಾವು ನವ ಚೈತನ್ಯ ಮತ್ತು ಆಶೋತ್ತರದೊಂದಿಗೆ ಹೊಸ ವರ್ಷ 2021ಕ್ಕೆ ಹೆಜ್ಜೆ ಇರಸಿದ್ದೇವೆ ಎಂದು ವಿಆರ್ ವಾಲಾ ಹೇಳಿದರು.

   Vijayapura: 72ನೇಯ ಗಣರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಸಚಿವೆ ಶಶಿಕಲಾ ಜೊಲ್ಲೆ | Oneindia Kannada

   English summary
   Karnataka Governor VR Vala Speech during Republic Day Program At Manekshaw Parade ground.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X