ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಸಾವಿರ ಕೋಟಿ ರೂ : ಎಚ್ಡಿಕೆ
ಬೆಂಗಳೂರು, ಸೆಪ್ಟೆಂಬರ್ 5: ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಬುಧವಾರ ಬೆಂಗಳೂರು ಕೇಂದ್ರ ವಿವಿ ಸ್ನಾತಕೋತ್ತರ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಕೇವಲ ಕಲಾ ಮತ್ತು ವಾಣೀಜ್ಯ ಕೋರ್ಸ್ ಗಳಿಗೆ ಅನುಮತಿ ಕೊಟ್ಟಿದೆ, ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರ ಒಂದು ಸಾವಿರ ಕೋಟಿ ರೂ. ಮೀಸಲಿಡಲು ತೀರ್ಮಾನಿಸಿದೆ ಎಂದರು.
ಉಪನ್ಯಾಸಕರು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ, 47ಎಕರೆ ಜಾಗ, ಹಣಕಾಸಿನ ನೆರವನ್ನು ನೀಡಲು ನಾನು ಸಿದ್ಧ, ಆದರೆ ಇಲ್ಲಿನ ಉಪಕುಲಪತಿ ಸೂಕ್ತವಾಗಿ ಕೆಲಸ ಮಾಡಬೇಕಿದೆ.

ರಾಜ್ಯದ ವಿವಿಗಳನ್ನು ಅಂತಾರಾಷ್ಟ್ರೀಯ ವಿವಿಗಳನ್ನಾಗಿಸಲು ನಾವು ಶ್ರಮಿಸಲು ಸಿದ್ಧರಿದ್ದೇವೆ ಎಲ್ಲಾ ನೆರವನ್ನು ಸರ್ಕಾರದಿಂದ ನೀಡಲಾಗುತ್ತದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.











Click it and Unblock the Notifications