ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಿನಗೂಲಿ ನೌಕರರ ಬೇಡಿಕೆ ಈಡೇರಿಸುವಂತೆ ಸಿಎಂ ಬೊಮ್ಮಾಯಿಗೆ ಮನವಿ

|
Google Oneindia Kannada News

ಬೆಂಗಳೂರು, ಆಗಸ್ಟ್ 29: ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರಲ್ಲಿ ಅಧಿಸೂಚಿಸಲ್ಪಟ್ಟ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ವಿನಂತಿಸಲಾಯಿತು.

ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ಕ್ಷೇಮಾಭಿವೃದ್ದಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ. ಕೆ. ಕೋಳಿ ನೇತೃತ್ವದಲ್ಲಿ ಸಂಘದ ಇತರೆ ಪದಾಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರದ ಮೂಲಕ ಮನವಿ ಮಾಡಿದರು.

ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಿ ದಿನಗೂಲಿ ನೌಕರರ ಮನವಿಗೆ ಸ್ಪಂದಿಸಿದ ಸಿಎಸ್ ರವಿಕುಮಾರ್ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಿ ದಿನಗೂಲಿ ನೌಕರರ ಮನವಿಗೆ ಸ್ಪಂದಿಸಿದ ಸಿಎಸ್ ರವಿಕುಮಾರ್

ಪತ್ರದಲ್ಲೇನಿದೆ?
ಬಸವರಾಜ ಎಸ್. ಬೊಮ್ಮಾಯಿ,
ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ.

2012ರಲ್ಲಿ ಘನ ರಾಜ್ಯ ಸರ್ಕಾರವು ದಿನಗೂಲಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 'ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ 2012' ಜಾರಿಗೆ ತಂದಿದ್ದು, ಅದರಂತೆ ಆಯಾ ಹುದ್ದೆಗಳ ವೇತನ ಶ್ರೇಣಿಯ ಕನಿಷ್ಟ ವೇತನ ಹಾಗೂ ಶೇ.90ರಷ್ಟು ಹೆಚ್ಆರ್ಎ ಮತ್ತು ಶೇ.90ರಷ್ಟು ಡಿ.ಎಯನ್ನು ಮಾತ್ರ ನೀಡಲಾಗುತ್ತಿದೆ.

Govt Daily Wages Employees Appealed To CM Basavaraj Bommai For Fulfill Demands

ಆದರೆ ಅಧಿಸೂಚನೆ ಸಂಖ್ಯೆ ಸಿ ಆ ಸು ಇ 44 ಸೇ ಸ್ಥ 2013 ದಿನಾಂಕ: 22-2-2014ರನ್ವಯ ಮುಂಬಡ್ತಿ ಹೊರತುಪಡಿಸಿ ಇನ್ನುಳಿದ ಪೂರ್ಣಪ್ರಮಾಣದ ಸವಲತ್ತುಗಳನ್ನು ಇದುವರೆಗೂ ಕಲ್ಪಿಸಿರುವುದಿಲ್ಲ.

ಅಂದು 13 ಸಾವಿರ ಇದ್ದ ನೌಕರರ ಸಂಖ್ಯೆ ನಿವೃತ್ತಿ ಹಾಗೂ ಮರಣದಿಂದಾಗಿ ಈಗ ಸುಮಾರು 6 ರಿಂದ 7 ಸಾವಿರ ಮಾತ್ರ ಉಳಿದಿರುತ್ತಾರೆ. ಅವರುಗಳು ಸಹ 3- 4 ವರ್ಷಗಳಲ್ಲಿ ನಿವೃತ್ತಿ ಹೊಂದಲಿದ್ದಾರೆ. ನಿವೃತ್ತಿ ವೇತನ ಇಲ್ಲದೇ ಇರುವುದರಿಂದ ಬಹಳ ಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ಅಲ್ಲದೇ ಕೆಲವೊಂದು ನೌಕರರು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರಲ್ಲಿ ಆಧಿಸೂಚಿಸಲ್ಪಟ್ಟ ನೌಕರರಿಗೆ ಈ ಕೆಳಕಂಡ ಮೂಲಭೂತ ಸವಲತ್ತುಗಳನ್ನು ಕಲ್ಪಿಸುವಂತೆ ಹಾಗೂ ಸಾಕಷ್ಟು ವರ್ಷಗಳಿಂದ ನೆನಗುದಿಗೆ ಬಿದ್ದ ಈ ಬಡ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ತಮ್ಮಲ್ಲಿ ಕಳಕಳಿಯಿಂದ ಸಂಘದ ಪರವಾಗಿ ತಮ್ಮಲ್ಲಿ ವಿನಂತಿಸಲಾಗಿದೆ.

1. ಅಧಿನಿಯಮ ಜಾರಿಗೊಂಡ ದಿನಾಂಕದಿಂದ ಅನ್ವಯವಾಗುವಂತೆ ವಾರ್ಷಿಕ ವೇತನ ಬಡ್ತಿ ನೀಡುವುದು, ಹಾಗೂ ಹೆಚ್ಆರ್ಎ ಹಾಗೂ ತುಟ್ಟಿ ಭತ್ಯೆಯನ್ನು ಶೇ.100 ರಷ್ಟು ನೀಡುವುದು ಹಾಗೂ ಹಬ್ಬದ ಮುಂಗಡ ಸೌಲಭ್ಯವನ್ನು ನೀಡುವುದು.

2. ವೈದ್ಯಕೀಯ ಸೌಲಭ್ಯ, ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ನೀಡುವುದು.

3. ನಿವೃತ್ತಿ ಮರಣ ಹೊಂದಿದ ನೌಕರರ ಕುಟುಂಬಗಳಿಗೆ ನಿವೃತ್ತಿ ವೇತನ ಮಂಜೂರು ಮಾಡುವುದು.

4. ಮರಣ ಹೊಂದಿದ ದಿನಗೂಲಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಹುದ್ದೆ ನೀಡುವುದು, ಒಟ್ಟಾರೆ ಸರ್ಕಾರಿ ನೌಕರರಿಗೆ ಒದಗಿಸಲಾದ ಎಲ್ಲ, ಸೌಲಭ್ಯಗಳನ್ನು ವಿಸ್ತರಿಸುವುದು.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪರಿಗೂ ಮನವಿ ಮಾಡಲಾಗಿತ್ತು. ಅವರೂ ಸಹ ದಿನಗೂಲಿ ನೌಕರರ ಬೇಡಿಕೆ ಈಡೇರಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದ್ದರು. ಆದರೆ ಕಾರಣಾಂತರಗಳಿಂದ ಇನ್ನೂ ಬೇಡಿಕೆಯಾಗಿಯೇ ಉಳಿದಿದೆ.

ಸಂಘದ ಬೇಡಿಕೆಗಳು ಕುರಿತು ಸುದೀರ್ಘ ಚರ್ಚೆಸಲಾಗಿದ್ದು, ನೂತನ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿಯವರು ನೌಕರರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರವಾಗಿ ಬೇಡಿಕೆ ಇಡೇರಿಸುವುದಾಗಿ ಭರವಸೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಭೇಟಿ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ದಿನಗೂಲಿ ಕ್ಷೇಮಾಭಿವೃದ್ದಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ. ಕೆ. ಕೋಳಿ, ಕಾರ್ಯಾಧ್ಯಕ್ಷ ಶೇಖ್ ಅಲಿ, ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ ಸವದತ್ತಿ, ಉಪಾಧ್ಯಕ್ಷ ಎಂ ಮಹದೇವ ಸೇರಿದಂತೆ ಇತರೆ ಸದಸ್ಯರು, ನಿರ್ದೇಶಕರು ಉಪಸ್ಥಿತರಿದ್ದರು.

Recommended Video

ಶ್ರೀಲಂಕಾ ಕ್ರಿಕೆಟ್ ಮಂಡಳಿಯಿಂದ RCB ಗೆ ಸಿಹಿ ಸುದ್ದಿ!! | Oneindia Kannada

English summary
The Karnataka State Government Daily Welfare Employees Union has requested the CM Basavaraj Bommai to address the demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X