ಸಬ್ಸಿಡಿ ನೀಡಿದರೂ ಇಂಧನ ಇಲಾಖೆಯಲ್ಲಿ ನಷ್ಟ: ಅದರ ತಡೆಗೆ ಸುಧಾರಣಾ ಕ್ರಮ:CM
basavaraj bommai, bescom, kptcl, energy, bengaluru, karnataka, ಕರ್ನಾಟಕ, ಬೆಂಗಳೂರು, ಬೆಸ್ಕಾಂ, ಕೆಪಿಟಿಸಿಎಲ್, ಬಸವರಾಜ ಬೊಮ್ಮಾಯಿ, ಇಂಧನ,
ಬೆಂಗಳೂರು, ಮಾರ್ಚ್ 06: ಇಂಧನ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿ ನಷ್ಟ ತಡೆಗೆ ಹಾಗೂ ವಿದ್ಯುತ್ ಉತ್ಪಾದನೆ, ಹಂಚಿಕೆ, ವಿತರಣೆಯಲ್ಲಿ ದಕ್ಷತೆ ತರಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವಿಕಂ ವ್ಯಾಪ್ತಿಯ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆ, ನೂತನ ಕಚೇರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನರವೇರಿಸಿ ಬೊಮ್ಮಾಯಿ ಮಾತನಾಡಿದರು.
ಸುಮಾರು 16 ಸಾವಿರ ಕೋಟಿ ರೂಪಾಯಿಯ ವಿದ್ಯುತ್ ಸಹಾಯಧನ ನೀಡಿದ್ದರು ರಾಜ್ಯದ ಎಸ್ಕಾಂಗಳು ಸಾಲದಲ್ಲಿ ಇವೆ. ಕಳೆದ ಒಂದೂವರೆ ವರ್ಷದಲ್ಲಿ ಇಂಧನ ಕ್ಷೇತ್ರಕ್ಕೆ 9 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದೆ. ಎಸ್ಕಾಂ ಹಾಗೂ ಕರ್ನಾಟಕ ರಾಜ್ಯ ವಿದ್ಯುತ್ ನಿಗಮಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಬೇಸಿಗೆಯಲ್ಲಿ ವಿದ್ಯುಶ್ಚಕ್ತಿಯ ನಿರ್ವಹಣೆ ಹಾಗೂ ಸಿದ್ಧತೆ, ವಿದ್ಯುತ್ ಉತ್ಪಾದನೆ ಹಾಗೂ ಸಂಗ್ರಹಣೆ ಮಾಡುವುದು ಮತ್ತು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ 2,500 ಕೋಟಿ ಲಾಭ ಆಗಿದೆ. ರೈತ,ಉದ್ಯಮಿ, ಬೀದಿ ಬದಿ ವ್ಯಾಪಾರಿ ಸೇರಿದಂತೆ ವಿದ್ಯುಚ್ಛಕ್ತಿಯ ಎಲ್ಲ ವರ್ಗದ ಗ್ರಾಹಕರಿಗೆ ಸಮರ್ಪಕವಾದ ಸೇವೆಯನ್ನು ನೀಡಲಾಗುತ್ತಿದೆ. ಬೇಸಿಗೆಯ ಕಾಲದಲ್ಲಿ ಹೆಚ್ಚಿನ ಸಂಖ್ಯೆಯ ಟ್ರಾನ್ಸಫಾರ್ಮರ್ ಗಳನ್ನು ಸಿದ್ಧಪಡಿಸಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.
ಪವರ್ ಪೊಲಿಟಿಕ್ಸ್ ನಡೆಯುತ್ತಿದೆ. ವಿದೇಶಿ ಕಲ್ಲಿದ್ದಲು ತರಿಸಿ ಅದನ್ನು ಸ್ಥಳೀಯ ಕಲ್ಲಿದ್ದಲು ಜೊತೆಗೆ ಬೆರೆಸಿ ಬಳಸಲು ಸಾಧ್ಯವಾಗದೆ ನಷ್ಟ ಅನುಭವಿಸಬೇಕಾಯಿತು. ಪೂರಕವಾದ ಇಂಧನ ನೀತಿ ಇಲ್ಲದ್ದರಿಂದ ಇಂಧನ ಇಲಾಖೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಯಿತು. ಹೀಗಾಗಿ ಈ ವಿದ್ಯುತ್ ಕ್ಷೇತ್ರದಲ್ಲಿ ನಷ್ಟ ಅನುಭವಿಸಬೇಕಾಯಿತು ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಪಿಟಿಸಿಲ್ ಗೆ 3000 ಕೋಟಿ ರೂ: ನೌಕರರಿಗೆ ಭರವಸೆ
ಕೇಂದ್ರ ಸರ್ಕಾರ ರೈತರಿಗೆ ಸೋಲಾರ್ ಪಂಪ್ ಸೆಟ್‌ಗಳಿಗೆ ಹಣ ಒದಗಿಸುತ್ತಿದೆ. ಪ್ರಸಕ್ತ ಬಜೆಟ್ ನಲ್ಲಿ 3000 ಕೋಟಿ ರೂ. ಸುಗಮ ವಿದ್ಯುತ್ ರವಾನೆಗೆಂದು ಕೆಪಿಟಿಸಿಲ್‌ಗೆ ಒದಗಿಸಲಾಗುತ್ತಿದೆ. ಈ ಇಲಾಖೆಯಿಂದ ಜನ್ನಷ್ಟು ಉತ್ತಮ ಹಾಗೂ ದಕ್ಷತೆಯಿಂದ ಕೆಲಸ ಮಾಡಬೇಕು. ಕೆಪಿಟಿಸಿಎಲ್ ಉದ್ಯೋಗಿಗಳ ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಇದೇ ವೇಳೆ ನೌಕರರಿಗೆ ಭರವಸೆ ನೀಡಿದರು.

200 ಯುನಿಟ್ ಉಚಿತ ಎಂದರೆ ಏನರ್ಥ: ಸಿಎಂ ವ್ಯಂಗ್ಯ
ರಾಜ್ಯದಲ್ಲಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ ಯೋಜನೆ ಅಡಿ ಬಡಜನರಿಗೆ 40ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತಿದೆ. ಗರಿಷ್ಟ 60-70 ಯೂನಿಟ್ ಖರ್ಚಾಗುತ್ತಿದ್ದರೂ ಸುಖಾಸುಮ್ಮನೆ 200 ಯುನಿಟ್ ವರೆಗೆ ಒದಗಿಸಲಾಗುವುದು ಎಂದು ಭರವಸೆ ನೀಡುವುದರಲ್ಲಿ ಏನು ಅರ್ಥ ಇದೆ. ಇಂಧನ ಕ್ಷೇತ್ರದಲ್ಲಿ ಪವರ್ ಪಾಲಿಟಿಕ್ಸ್ ಮಾಡಬಾರದು. ಇದು ಜನರಿಗೆ ಮೋಸ ಮಾಡುವ ತಂತ್ರ ಎಂದು ಅವರು ಕಿಡಿ ಕಾರಿದರು.

ಇಂಧನ ಬೇಡಿಕೆ ಇದ್ದೇ ಇದೆ: ಸಿಎಂ ಬೊಮ್ಮಾಯಿ
ಏಷ್ಯಾದಲ್ಲೇ ಮೊದಲು ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಆರಂಭವಾಯಿತು. ಬೇಡಿಕೆ ಹೆಚ್ಚಾಗಿ ಜಲ ವಿದ್ಯುತ್ ನಂತರ ಥರ್ಮಲ್ ವಿದ್ಯುತ್ ಈಗ ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದಲ್ಲಿ ಪವನ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದರಲ್ಲಿಯೂ ನಾವು ಮುಂಚೂಣಿಯಲ್ಲಿದ್ದೇವೆ. ಕರ್ನಾಟಕ ಅಭಿವೃದ್ಧಿಶೀಲ ರಾಜ್ಯವಾಗಿದ್ದು, ಇಂಧನದ ಬೇಡಿಕೆ ನಿರಂತರ ವಾಗಿ ಹೆಚ್ಚಾಗುತ್ತದೆ. ಉತ್ಪಾದನೆಯನ್ನು ಹೆಚ್ಚಿಸಿಕೊಂಡು ಹೋದರೇ ಮಾತ್ರ ಬೇಡಿಕೆಯನ್ನು ಸರಿದೂಗಿಸಬಹುದು. 30 ಸಾವಿರ ಮೆಗಾ ವ್ಯಾಟ್ ಉತ್ಪಾದನೆ ಮಾಡಹುದು ಎಂದು ಅವರು ಭವಿಷ್ಯ ಕುರಿತು ವಿವರಿಸಿದರು.

ಸ್ಕಾಡಾ-2 ಗೆ ಅನುಮತಿ ನೀಡಲು ಇದೇ ಕಾರಣ
ಇಂಧನ ಇಲಾಖೆ ಸ್ಕಾಡಾವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದೆ. ಸ್ಕಾಡಾ ಇರುವಿದರಿಂದಲೇ ಸುಮಾರು 200 ಕಿಮೀ ಜಾಲದ ಸ್ಕಾಡಾ-2 ಗೆ ಅನುಮತಿಸಲಾಗಿದೆ. ಅಲ್ಲದೇ ನವೀಕರಿಸಬಹುದಾದ ಇಂಧನವನ್ನು ಹೆಚ್ಚು ಬಳಸಿ ಪಂಪ್ ಸ್ಟೋರೇಜ್ ಸಾಮರ್ಥ್ಯ ಹೆಚ್ಚಿಸಲು ಕ್ರಮ ವಹಿಸಿದ್ಏವೆ. ಶರಾವತಿ ಯೋಜನೆಯನ್ನು ಪಂಪ್ ಸ್ಟೋರೇಜ್ ಅಡಿ ಕೈಗೊಳ್ಳಲಾಗಿದೆ. ನವೀಕರಿಸಬಹುದಾದ ಇಂಧನ ಬಳಕೆಗೆ ಪಂಪ್ ಸ್ಟೋರೇಜ್ ಅಗತ್ಯ ವಿದ್ಯುತ್ ಸ್ಟೋರೇಜ್ ಸಲುವಾಗಿ ಸೋಲಾರ್ ಬ್ಯಾಟರಿಗಳ ತಯಾರಿಕೆಗೆ ಆದ್ಯತೆ ನೀಡುತ್ತಿದ್ದೇವೆ ಎಂದು ಸರ್ಕಾರ ಹಾಗೂ ಇಂಧನ ಇಲಾಖೆ ಸಾಧನೆ ವಿವರಿಸಿದರು.
ಕಾಯಕ್ರಮದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications