ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ ಸೇವೆ: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ NEET + 5 ಅಂಕ

|
Google Oneindia Kannada News

ಬೆಂಗಳೂರು, ಜುಲೈ 6: ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೋವಿಡ್-19 ಅನ್ನು ನಿಗ್ರಹಿಸುವುದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಂತರ ಪತ್ರಿಕಾ ಗೋಷ್ಠಿ ನಡೆಸಿದರು.

Recommended Video

Kushal Mendis arrested ಶ್ರೀಲಂಕಾ ಕ್ರಿಕೆಟಿಗರ್ ಕುಸಾಲ್ ಮೆಂಡಿಸ್ ಅರೆಸ್ಟ್ | Oneindia Kannada

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ಸುಮಾರು 2000 ವೈದ್ಯ ವಿದ್ಯಾರ್ಥಿಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸಲಾಗುವುದು ಎಂದು ಅವರು ಹೇಳಿದರು. ಅಲ್ಲದೆ ಅಂತಿಮ ಹಂತದಲ್ಲಿರುವ 2000 ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲು ಬಳಸುವುದಾಗಿ ಸುಧಾಕರ್ ತಿಳಿಸಿದ್ದಾರೆ. ಈ ಸೇವೆಯಲ್ಲಿ ತೊಡಗುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಲ್ಲಿ 5 ವಿಶೇಷಾಂಕಗಳನ್ನು ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದ್ದು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.

Govt may award 5 marks in NEET to Medical students involved Covid related work

 ಆರೋಗ್ಯಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರದ ಚಿಂತನೆ ಆರೋಗ್ಯಯೋಧರಿಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರದ ಚಿಂತನೆ

ಕೊರೋನ ಯೋಧರನ್ನು ಬೆಂಬಲಿಸಬೇಕು. ಕೊರೋನ ನಿಯಂತ್ರಣಕ್ಕೆ ನಮ್ಮ ಸರ್ಕಾರ ಬದ್ಧತೆಯಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ. ಮಾಧ್ಯಮದವರು ಜನರಲ್ಲಿ ಆತಂಕ ಹುಟ್ಟಿಸದೆ ಸರಿಯಾದ ಮಾಹಿತಿ ನೀಡಬೇಕು. ಸಂಘಟಿತರಾಗಿ ಅರಿವು ಮೂಡಿಸಬೇಕು. ತಪ್ಪು ತಿಳುವಳಿಕೆಯನ್ನು ಹೋಗಲಾಡಿಸಬೇಕು. ಸರ್ಕಾರದ ಜೊತೆ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಇದನ್ನು ನಿಯಂತ್ರಿಸಲು ಸಾಧ್ಯ ಎಂದು ಸಚಿವ ಸುಧಾಕರ್ ಈ ಸಂದರ್ಭದಲ್ಲಿ ಹೇಳಿದರು.

Govt may award 5 marks in NEET to Medical students involved Covid related work

ಕೋವಿಡ್ ನಿರ್ವಹಣೆಗೆ 8000 ಬೂತ್ ಮಟ್ಟದ ಟಾಸ್ಕ್ ಫೋರ್ಸ್: ಸುಧಾಕರ್ಕೋವಿಡ್ ನಿರ್ವಹಣೆಗೆ 8000 ಬೂತ್ ಮಟ್ಟದ ಟಾಸ್ಕ್ ಫೋರ್ಸ್: ಸುಧಾಕರ್

ಬೂತ್ ಮಟ್ಟದ ಟಾಸ್ಕ್ ಫೋರ್ಸ್ ರಚನೆಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು ಶೀಘ್ರದಲ್ಲೇ ಟಾಸ್ಕ್ ಫೋರ್ಸ್ ರಚನೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಇದು ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.

English summary
About 2000 medical students who are appearing for PG exams will be utilised for Covid related work. Govt is considering to award 5 marks in NEET exam to Medical students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X