ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರದ ನಿರ್ಲಕ್ಷದಿಂದ ರಾಯಣ್ಣ ಪ್ರತಿಮೆ ವಿವಾದ

|
Google Oneindia Kannada News

ಬೆಂಗಳೂರು, ಆ. 28: ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಾಜ್ಯಗಳ ಗಡಿಗಳು ನಿಗದಿಯಾಗಿದ್ದರೂ ಬೆಳಗಾವಿಯಲ್ಲಿ ಮರಾಠಿಗರು ಕ್ಯಾತೆ ತೆಗೆಯುವುದು ಮಾತ್ರ ಕಡಿಮೆಯಾಗಿಲ್ಲ. ಈಗ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತಂತೆ ಮತ್ತೆ ಮರಾಠಿಗರು ಖ್ಯಾತೆ ತೆಗೆದಿದ್ದಾರೆ. ಇದೇ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ನೀತಿಯ ಬಗ್ಗೆ ಕಿಡಿ ಕಾರಿದ್ದಾರೆ.

Recommended Video

BMRCL ಕಳೆದ ವರ್ಷ ₹598 ಕೋಟಿ ರೂ ನಷ್ಟ | Oneindia Kannada

ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಾನು ಈಗಷ್ಟೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಅಲ್ಲಿನ ಜಿಲ್ಲಾಧಿಕಾರಿ‌, ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ.

Govt Negligence Is The Reason Behind Controversy Over Rayanna Statue At Belagavi

ಸಂಗೊಳ್ಳಿ‌ ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

English summary
Leader of the Opposition Siddaramaiah said that the police lathi charge on those who are fighting to establish the Sangolli Rayanna statue in Peranavadi in Belagavi. Read on for more information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X