ಸಾಂಕ್ರಾಮಿಕವಲ್ಲದ ರೋಗ ಪತ್ತೆಗೆ ವಿಶೇಷ ಕಾರ್ಯಕ್ರಮ: ಪಂಕಜ್

ಬೆಂಗಳೂರು, ಸೆ.29: ರಾಜ್ಯ ಸರ್ಕಾರ ಸಾಂಕ್ರಾಮಿಕವಲ್ಲದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ನಂತಹ ರೋಗಗಳ ಪತ್ತೆ ಮಾಡುವ ಕುರಿತು ಬಜೆಟ್ ನಲ್ಲಿ ಯೋಜನೆ ಘೊಷಣೆ ಮಾಡಿದೆ. ಶೀಘ್ರವೇ ಸಂಪುಟದ ಮುಂದೆ ತಂದು ಯೋಜನೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಾಗುತ್ತಿದೆ. ಜನರು ವ್ಯಾಯಾಮ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯಾಘಾತ ಆಗುವುದನ್ನು ತಡೆಯಬಹುದು ಎಂದರು.

ಆಧುನಿಕ ಜೀವನ ಶೈಲಿಯಿಂದ ಹೃದಯ ಸಂಬಂಧಿ ಹಾಗೂ ಡಯಾಬಿಟಿಸ್ ಖಾಯಿಲೆಗಳು ಹೆಚ್ಚಾಗುತ್ತಿವೆ ಎಂದು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು. ನಗರದ ಪ್ರೀಡಂ ಪಾರ್ಕ್ ನಲ್ಲಿ ನಡೆದ 'ನನ್ನ ಹೃದಯ ನಿಮ್ಮ ಹೃದಯ' ವಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಪೀಳಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನಾವು ತಿನ್ನುವ ಆಹಾರದಲ್ಲಿಯೂ ಸಾಕಷ್ಟು ವ್ಯತ್ಯಾಸವಾಗಿರುವುದರಿಂದ ಹೃದಯ ಸಂಬಂಧಿ ಖಾಯಿಲೆ ಬರುತ್ತಿದೆ. ಪೌಷ್ಠಿಕ ಹಾಗೂ ಸತ್ವಯುತ ಆಹಾರ ಸೇವನೆಯಿಂದ ರೋಗಗಳನ್ನು ತಡೆಯಬಹುದು.

ಸತ್ಯವಾಗ್ಲೂ ಕಣ್ರೀ, ಹೃದ್ರೋಗಕ್ಕೆ ಅತ್ಯುತ್ತಮ ಪರಿಹಾರ ಮದುವೆಯಂತೆ!

Govt plans special project to trace out non communique disease

ತಥಾಗತ್ ಹೃದಯ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಮಹಾಂತೇಶ್ ಚರಂತಿಮಠ್ ಮಾತನಾಡಿ, ಯುವಕರಲ್ಲಿ ಹೃದಯ ಸಬಂಧಿ ಖಾಯಿಲೆಗಳು ಹೆಚ್ಚಾಗುತ್ತಿದೆ. ನೂರು ಜನರಲ್ಲಿ ಶೇಕಡಾ 40 ರಷ್ಟು ಜನರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದಾರೆ.

ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ತಥಾಗತ್ ಸಂಸ್ಥೆವತಿಯಿಂದ ಪ್ರತಿ ವರ್ಷ ವಾಕಥಾನ್ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+