ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತರು ಹಿಂದೂಗಳಲ್ಲ: ಹೈಕೋರ್ಟ್‌ಗೆ ಸರ್ಕಾರ ಹೇಳಿಕೆ

|
Google Oneindia Kannada News

ಬೆಂಗಳೂರು, ಮಾರ್ಚ್ 15: ಲಿಂಗಾಯತರು ಹಿಂದೂಗಳಲ್ಲ, ವೀರಶೈವರು ಮಾತ್ರ ಹಿಂದೂಗಳು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟಪಡಿಸಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಲಿಂಗಾಯತರು ಹಿಂದೂಗಳಲ್ಲಿ, ಅವರು ಮೂರ್ತಿ ಪೂಜೆ ಮಾಡುವುದಿಲ್ಲ, ಹೀಗಾಗಿ ಲಿಂಗಾಯತರು ಮತ್ತು ವೀರಶೈವರು ಬೇರೆ ಬೇರೆ, ವೀರಶೈವರು ಬೇರೆ ಬೇರೆ ದೇವರನ್ನು ಆರಾಧಿಸುತ್ತಾರೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ.

ವೀರಶೈವ-ಲಿಂಗಾಯತ ಬಣಗಳು ಕೊನೆಗೂ ಇಬ್ಭಾಗ! ವೀರಶೈವ-ಲಿಂಗಾಯತ ಬಣಗಳು ಕೊನೆಗೂ ಇಬ್ಭಾಗ!

ಈ ಕುರಿತು ಅಲ್ಪಸಂಖ್ಯಾತ ಇಲಾಖೆ ಆಧೀನ ಕಾರ್ಯದರ್ಶಿ ಅಕ್ರಮ್ ಬಾಷಾ ಗುರುವಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದ್ದು, ಬಸವಣ್ಣನವರು ವೇದ ಮತ್ತು ಆಗಮ ಶಾಸ್ತ್ರದಿಂದ ದೂರವಿದ್ದರೂ ಇಷ್ಟಲಿಂಗ ಪೂಜಿಸುವ ಒಂದೇ ಧರ್ಮ ಲಿಂಗಾಯತ ಧರ್ಮವಾಗಿದೆ.

Govt says HC Lingayat are not Hindus

ಲಿಂಗಾಯತ ಧರ್ಮದಲ್ಲಿ ಯಾವುದೇ ಜಾತಿಗೆ ಭೇದವಿಲ್ಲ.ಲಿಂಗಾಯತದಲ್ಲಿ ವಿಧವಾ ವಿವಾಹಗಳಿಗೆ ಅವಕಾಶವಿದೆ. ಹೀಗಾಗಿ ಲಿಂಗಾಯತರು ಹಿಂದೂಗಳಿಗಿಂತ ಭಿನ್ನವಾಗಿದ್ದು ಪ್ರತ್ಯೇಕ ಲಿಂಗಾಯತ ಧರ್ಮ ರಚಿಸಬಹುದು ಎಂದು ಪ್ರಮಾಣಪತ್ರದಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ಆದರೆ ರಾಜ್ಯ ಸರ್ಕಾರದ ಈ ನಿಲುವಿಗೆ ಅರ್ಜಿದಾರರ ಪರ ವಕೀಲ ಹಾರನಹಳ್ಳಿ ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾಣ ಕೂಗೊಳ್ಳುವ ಮೊದಲೇ ವಕೀಲರಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಎನ್ನುವುದಕ್ಕೆ ಯಾ ಅಧಿಕಾರವಿದೆ ಎಂದು ಪೀಠದ ಎದುರು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮೆಂದು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರ ಪರ ವಕೀಲ ಅಶೋಕ್ ಹಾರನಹಳ್ಳಿ ಕಾಲಾವಕಾಶ ಕೋರಿದರು. ಹೈಕೋರ್ಟ್ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.

English summary
Government of Karnataka had declared before High Court that Lingayats are not Hindus. Under secretary to department of minority has submitted an affidavit on Thursday before the court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X